ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆ ಬಿ.ಎಲ್. ಸಂತೋಷ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿಸಿ ಗಣೇಶ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆತ್ಮೀಯರೂ ಆಗಿರುವ ಬಿ.ಎಲ್. ಸಂತೋಷ್ ಅವರನ್ನು ಇಂದು ಮನೆಗೆ ಆಹ್ವಾನಿಸಿ ಹಬ್ಬದ ಶುಭಾಶಯ ಕೋರಲಾಯಿತು. ರಾಜ್ಯದ ಅಭಿವೃದ್ಧಿ, ಪಕ್ಷ ಸಂಘಟನೆ ಕುರಿತಂತೆ ಮಾತುಕತೆ ನಡೆಸಲಾಯಿತು. ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಉಪಸ್ಥಿತರಿದ್ದರು ಎಂದು ಟ್ವೀಟ್ ಮಾಡಿದ್ದಾರೆ.