ಗೋಕಾಕ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಾಧ್ಯಂತ ಸಾರಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಇಂತಹ ಸಾರಿಗೆ ನೌಕರರ ಮುಷ್ಕರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಆದರೇ ಗೋಕಾಕದಲ್ಲಿ
ಸಾರಿಗೆ ನೌಕರರು ಅಜ್ಞಾತ ಸ್ಥಳದಲ್ಲಿ ಕುಳಿತು ಮುಂದಿನ ಮುಷ್ಕರ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಸಾರಿಗೆ ನೌಕರರು ಬಂಧನ ಭೀತಿಯಿಂದ ಅಜ್ಞಾತ ಸ್ಥಳದಲ್ಲಿ ಕುಳಿತು ಮುಂದಿನ ಪ್ರತಿಭಟನೆ ಮುಂದುವರೆಯಿತು? ಎಂದು ಕಾದು ನೋಡಬೇಕು.
ಸರ್ಕಾರದೊಂದಿಗೆ ಸಂಧಾನಕ್ಕೆ ಒಪ್ಪದಂತ ಸಾರಿಗೆ ನೌಕರರಿಗೆ ಸರ್ಕಾರ ಈಗ ಮತ್ತೊಂದು ಶಾಕ್ ನೀಡಿದೆ. ನಿವೃತ್ತ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನಿಯೋಜನೆಗೊಳಿಸಿಕೊಂಡು, ಸಾರಿಗೆ ಬಸ್ ಸಂಚಾರಕ್ಕೆ ಅಧಿಸೂಚನೆ ಹೊರಡಿಸಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದಂತ ಶಿವಯೋಗಿ ಸಿ ಕಳಸದ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ, ಕಳೆದ 2 ವರ್ಷಗಳಲ್ಲಿ ನಿವೃತ್ತಿ ಹೊಂದಿ 62 ವರ್ಷ ವಯೋಮಿತಿ ಮೀರದ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ನಿಗಮದಲ್ಲಿ ಒಪ್ಪಂದದ ಆಧಾರದ ಮೇಲೆ ನಿಯೋಜಿಸಲು ಉದ್ದೇಶಿಸಲಾಗಿರುತ್ತದೆ.
ನಿವೃತ್ತ ನೌಕರರನ್ನು ಅವರು ನಿವೃತ್ತಿ ಹೊಂದಿದ ವಿಭಾಗದ ಅಥವಾ ವಾಸಸ್ಥಳಕ್ಕೆ ಹತ್ತಿರದ ವಿಭಾಗಗಳಲ್ಲಿ ನಿಯೋಜಿಸಲಾಗುವುದು. ಈ ಕೆಳಕಂಡ ಷರತ್ತುಗಳನ್ನು ಒಪ್ಪಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ನಿವೃತ್ತ ಚಾಲನಾ ಸಿಬ್ಬಂದಿಗಳು ತಾವು ನಿವೃತ್ತಿ ಹೊಂದಿದ ವಿಭಾಗದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದ್ದಾರೆ.