ಮಹಾರಾಷ್ಟ್ರ: ಮಹಾರಾಷ್ಟ್ರದ ರಾಯಘಡದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ.
ಇಂತಹ ಪ್ರವಾಹ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಬಸ್ ಚಾಲಕನೊಬ್ಬ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಾಡ ತಾಲೂಕಿ ನದಿಯಲ್ಲಿ ಭಾರಿ ಪ್ರವಾಹದಿಂದ ಕೆಳ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ನದಿಗೂ ಸೇತುವೆಗೂ ವ್ಯತ್ಯಾಸವಿಲ್ಲದ ಪರಿಸ್ಥಿತಿಯಲ್ಲಿ ಹತ್ತಾರು ಪ್ರಯಾಣಿಕರಿದ್ದ ಬಸ್ನ್ನ ಚಾಲಕ ಕಳೆ ಹಂತದ ಸೇತುವೆ ದಾಟಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದು, ಬಸ್ ಚಾಲಕನ ಹುಚ್ಚಟಾದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
CKNEWSKANNADA / BRASTACHARDARSHAN CK NEWS KANNADA