ಬೆಂಗಳೂರು : ಕೃಷಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ವೇಳೆ ಸಂಚರಿಸಲಿರುವ ಬಿಎಂಟಿಸಿ ಹಾಗೂ ಕೆಎಸ್‌ಆರ್ಟಿಸಿ ಬಸ್ ಗಳಿಗೆ ಭದ್ರತೆ ಕೋರಿ ಪೊಲೀಸರಿಗೆ ಮನವಿ ಮಾಡಲಾಗಿದೆ.
ಕಳಸದ, ಸೋಮವಾರ ರಾಜ್ಯದಲ್ಲಿ ಎಂದಿನಂತೆ ಸಾರಿಗೆ ಬಸ್ ಸಂಚರಿಸಲಿದ್ದು, ಬಸ್ ಮತ್ತು ಸಂಸ್ಥೆಯ ಆಸ್ತಿಗೆ ಹಾನಿಯಾಗದಂತೆ ಭದ್ರತೆ ಒದಗಿಸಲು ಪೊಲೀಸರಿಗೆ ಮನವಿ ಮಾಡಲಾಗಿದೆ ಎಂದರು.
ನಗರದಲ್ಲಿ ಬಿಎಂಟಿಸಿ ಬಸ್ ಗಳ ಸಂಚಾರಕ್ಕೂ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ. ಮೆಟ್ರೋ ರೈಲಿನ ಸಂಚಾರ ಕೂಡ ಎಂದಿನಂತೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಎಂದಿನಂತೆ ಬಸ್ ಸಂಚಾರ ಇರುತ್ತದೆ, ರಾಜ್ಯದ ಎಲ್ಲಾ ಕಡೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಾರಿಗೆ ಬಸ್ ಗಳು ಸಂಚಾರ ನಡೆಸಲಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದರು.
CKNEWSKANNADA / BRASTACHARDARSHAN CK NEWS KANNADA