ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ.
ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಾಲ್ವರು ನೌಕರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಐವರು ಮಹಿಳಾ ಫಲಾನುಭವಿಗಳಿಗೆ ಸಹಾಯಧನದಲ್ಲಿ ಭೂಮಿ ನೀಡುವ ಸಂಬಂಧ, ಅನುಮೋದನೆ ನೀಡಲು ಅಧಿಕಾರಿಗಳು ಒಟ್ಟು ₹75 ಸಾವಿರ ಲಂಚ ಕೇಳಿರುತ್ತಾರೆ. ಈ ಸಂಬಂಧ ರಾಣೆಬೆನ್ನೂರು ತಾಲ್ಲೂಕು ಪದ್ಮಾವತಿಪುರದ ಸಿದ್ದಪ್ಪ ಲಮಾಣಿ ದೂರು ನೀಡಿದ್ದರು. ಶುಕ್ರವಾರ ₹25 ಸಾವಿರ ಲಂಚ ಪಡೆಯುತ್ತಿದ್ದ ಎಫ್‌ಡಿಎ ತಿಪ್ಪೇಸ್ವಾಮಿಯನ್ನು ಎಸಿಬಿ ಡಿವೈಎಸ್ಪಿ ಸೋಮಲಿಂಗ ಕುಂಬಾರ ನೇತೃತ್ವದಲ್ಲಿ ಬಂಧಿಸಲಾಯಿತು.
ನಿಗಮದ ಜಿಲ್ಲಾ ವ್ಯವಸ್ಥಾಪಕ ವಸಂತಕುಮಾರ್, ಫೀಲ್ಡ್ ಆಫೀಸರ್ ದಾಮೋದರ್, ಎಫ್‌ಡಿಎ ರಾಘವೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.
ಎಸಿಬಿ ಡಿವೈಎಸ್ಪಿ ಸೋಮಲಿಂಗ ಕುಂಬಾರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಎಸಿಬಿ ಸಿಪಿಐ ಶ್ರೀಶೈಲ ಚೌಗಲಾ ಹಾಗೂ ಎಸಿಬಿ ಪೊಲೀಸ್ ಠಾಣೆಯ ಸಿಬ್ಬಂದಿ ಭಾಗವಹಿಸಿದ್ದರು.
CKNEWSKANNADA / BRASTACHARDARSHAN CK NEWS KANNADA