ಬೆಂಗಳೂರು : ರಾಜ್ಯದ 6 ಸಾವಿರ ಗ್ರಾಮಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣೆ ಆಯೋಗ ಸಿದ್ಧತೆ ನಡೆಸಿದ್ದು, ಈ ನಡುವೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಚುನಾವಣೆ ಆಯೋಗ ಸ್ಪಷ್ಟಪಡಿಸಿದೆ.
ರಾಜ್ಯದ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಿರುತ್ತಾರೆ ಎಂದು ಚುನಾವಣಾ ಆಯೋಗ ಹೇಳಿದೆ.
ಚುನಾವಣಾ ಆಯೋಗವು ಈಗಾಗಲೇ ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ 2 ಹಂತಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.