ಬೆಂಗಳೂರು – ರಾಜ್ಯದಲ್ಲಿ ಜಾರಿಯಲ್ಲಿರುವ ಜನತಾ ಕರ್ಫ್ಯೂ ಆದೇಶಕ್ಕೆ ಮಹತ್ವದ ಬದಲಾವಣೆ ಮಾಡಿ ಪರಿಷ್ಕೃತ ಆದೇಶ ಹೊರಡಿಸಲಾಗಿದ್ದು, ಭಾನುವಾರದಿಂದಲೇ ಇದು ಜಾರಿಯಾಗಲಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲು, ಜನಸಂದಣಿ ತಪ್ಪಿಸಲು ಕೆಲವು ಬದಲಾವಣೆ ಮಾಡಲಾಗಿದೆ. ಎಲ್ಲಾ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ.
ಇದರ ಬದಲಿಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹಾಪ್ ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿಯ ಮೂಲಕ ಹಣ್ಣು ತರಕಾರಿ ಮಾರಾಟ ಮಾಡುವುದಕ್ಕೆ ( ದುಬಾರಿ ಬೆಲೆಗೆ ಮಾರದೆ, ಮಾರುಕಟ್ಟೆ ಬೆಲೆಗೆ ಮಾರುವುದು) ಅನುಮತಿ ನೀಡಲಾಗಿದೆ.
ಎಪಿಎಂಸಿ ಹಾಗೂ ದಿನಸಿ ಅಂಗಡಿಗಳನ್ನು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯುವುದಕ್ಕೆ ಅನುಮತಿ ನೀಡಲಾಗಿದೆ.
ಈ ಆದೇಶವನ್ನು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪೊಲೀಸ್ ಆಯುಕ್ತರು, ಇಲಾಖೆಗಳ ಮುಖ್ಯಸ್ಥರ ಮೂಲಕ ಜಾರಿ ಮಾಡಲು ಸೂಚಿಸಲಾಗಿದೆ.