Breaking News

ಲಂಚ ಪ್ರಕರಣ: ಬಿಸಿಎಂ ಇಲಾಖೆಯ ಅಧಿಕಾರಿ ಎಸಿಬಿ ಬಲೆಗೆ.


ಸುರಪುರ: ಇಲ್ಲಿಯ ಬಿಸಿಎಂ ಇಲಾಖೆಯ ಅಧಿಕಾರಿ ಹಣಮಂತ (ಬಾಬು) ಅವರು ಗುರುವಾರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಲಂಚ ಪಡೆಯುತ್ತಿದ್ದಾಗ ಯಾದಗಿರಿಯ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.

ತಾಲ್ಲೂಕಿನ ಬೈಲಾಪುರ ಗ್ರಾಮದ ನಾಗರಾಜ ಮೇಟಿ ಅವರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಬಿಸಿಎಂ ಅಧಿಕಾರಿ ₹5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ₹2000 ಕೊಡುವಂತೆ ಒತ್ತಾಯಿಸಿದ್ದರು. ಹಣ ಪಡೆಯುತ್ತಿರುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಶಾಂತಗೌಡ ಅಯ್ಯಣ್ಣ ಮೇಟಿ ಅವರ ಮಾಹಿತಿ ಮೇರೆಗೆ ಮತ್ತು ಕಲಬುರ್ಗಿ ಡಿವೈಎಸ್‍ಪಿ ಬಿ.ಬಿ. ಪಟೇಲ್ ಅವರ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದೆ. ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು’ ಎಂದು ದಾಳಿಯ ನೇತೃತ್ವ ವಹಿಸಿದ್ದ ಇನ್‌ಸ್ಪೆಕ್ಟರ್‌ ರಾಜು ಬಿರಾದಾರ ತಿಳಿಸಿದರು.

ಇನ್‌ಸ್ಪೆಕ್ಟರ್‌ ರಾಘವೇಂದ್ರ ಕಲಬುರ್ಗಿ, ಸಿಬ್ಬಂದಿಗಳಾದ ಹೆಡ್‌ಕಾನ್‌ಸ್ಟೆಬಲ್‌ ವಿಜಯಕುಮಾರ, ಹೆಡ್‌ಕಾನ್‌ಸ್ಟೆಬಲ್‌ ಸಾಬಣ್ಣ, ಪಿಸಿಗಳಾದ ಅಮರನಾಥ, ಗುತ್ತಪಗೌಡ, ಎಎಚ್‌ಸಿ ರವಿ, ಎಪಿಸಿ ಪ್ರಕಾಶ ಮಾಳಿ ದಾಳಿಯಲ್ಲಿ ಭಾಗವಹಿಸಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಲಂಚ ಸ್ವೀಕರಿಸುವಾಗ ಪಂಚಾಯಿತಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ!

ಚಿತ್ರದುರ್ಗ: ಲಂಚ ಸ್ವೀಕರಿಸುವಾಗ ಪಂಚಾಯಿತಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲ್ಕೆರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ