ಬಾಗಲಕೋಟೆ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬಾಗಲಕೋಟೆ ಉಪ ವಿಭಾಗದ ಸಹಾಯಕ ಅಭಿಯಂತರ ಅಶೋಕ ತೋಪಲಕಟ್ಟಿ (ಎ.ಎಸ್. ತೋಪಲಕಟ್ಟಿ) ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ 5.15 ಲಕ್ಷ ಮೊತ್ತದ ನಿಷೇಧಿತ ನೋಟು ಪತ್ತೆ ಯಾಗಿದ್ದು, ಅವುಗಳನ್ನು ನೋಡಿದ ಅಧಿಕಾರಿಗಳೂ ದಂಗಾದ ಪ್ರಸಂಗ ನಡೆದಿದೆ. ಕಳೆದ 2016ರಲ್ಲಿಯೇ ಹಳೆಯ 500 ಹಾಗೂ ಸಾವಿರ ಮುಖ ಬೆಲೆಯ ನೋಟುಗಳು ನಿಷೇಧ ಮಾಡಿದ್ದು, ಈಗ ಹಳೆಯ ನೋಟು …
Read More »ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವರ ಕರೆ.
ಪ್ರಧಾನ ಮಂತ್ರಿಗಳಾದ *ಶ್ರೀ ನರೇಂದ್ರ ಮೋದಿ* ಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅನೇಕ ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಮತ್ತು ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಜನತೆಗೆ ಕರೆ ನೀಡಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಅಗತ್ಯ ಅರೋಗ್ಯ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, ನೈರ್ಮಲ್ಯ …
Read More »ಲಂಚ ಪಡೆಯುತ್ತಿದ್ದ ಭ್ರಷ್ಟ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ!
ಕಲಘಟಗಿ: ಮಳೆಗೆ ಕುಸಿದಿದ್ದ ಮನೆಗೆ ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಪರಿಹಾರಕ್ಕೆ ಶಿಫಾರಸು ಮಾಡಲು ಸಂತ್ರಸ್ತ ಮಿಶ್ರಿಕೋಟಿ ಗ್ರಾಮದ ಅಶೋಕ ಗಂಗಪ್ಪ ಕಾಶಿಬಡಿಗೇರ ಅವರಿಂದ ₹20 ಸಾವಿರ ಲಂಚ ಪಡೆಯುತ್ತಿದ್ದ ದುಮ್ಮವಾಡದ ಕಂದಾಯ ನಿರೀಕ್ಷಕ ರಾಘವೇಂದ್ರ ಬೊಮ್ಮನಾಳ ಎಂಬಾತನನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಿಬ್ಬಂದಿ ಬಂಧಿಸಿದ್ದಾರೆ. ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಅಶೋಕ ಅವರ ಮನೆ ಕುಸಿದಿತ್ತು. ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ …
Read More »ಕಿರುತೆರೆ ಕಲಾವಿದ ಕೃಷ್ಣ ನಾಡಿಗ್ ನಿಧನ.
ಬೆಂಗಳೂರು: ಕನ್ನಡ ಚಿತ್ರಂಗ ಮತ್ತು ಕಿರುತೆರೆ ಕಲಾವಿದ ಕೃಷ್ಣ ನಾಡಿಗ್ ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಲೇಖಕರಾಗಿ, ವ್ಯವಸ್ಥಪಕರಾಗಿ ನಟರಾಗಿದ್ದ ಕೃಷ್ಣ ನಾಡಿಗ್ ಅವರು ಶನಿವಾರ ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಸುಮಾರು 50 ವರ್ಷಗಳಷ್ಟು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅವರ 60 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ, ಚಿತ್ರಕತೆ ಬರೆದು ನಿರ್ಮಾಣ …
Read More »●ಅತಿವೃಷ್ಟಿ: ಮುನ್ನೆಚ್ಚರಿಕೆಗೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ. ●ಕೋವಿಡ್ ನಿಯಂತ್ರಣ: ನಿರ್ಲಕ್ಷ್ಯ ಸಲ್ಲದು; ಅಧಿಕಾರಿಗಳಿಗೆ ಸಚಿವರ ತಾಕೀತು
ಬೆಳಗಾವಿ, ಅ.16: ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ. ಆದಾಗ್ಯೂ ಮಳೆಯ ಪ್ರಮಾಣ ಹೆಚ್ಚಾದರೆ ಅದನ್ನು ಗಮನದಲ್ಲಿರಿಸಿಕೊಂಡು ಆಲಮಟ್ಟಿ ಜಲಾಶಯದಿಂದ ಇನ್ನಷ್ಟು ನೀರು ಬಿಡುಗಡೆ ಮಾಡಲು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಅತಿವೃಷ್ಟಿ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ (ಅ.16) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …
Read More »ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿಗೆ ಹೈಕೋರ್ಟ್ ತಡೆ|| ಮತ್ತೆ ನಿರಾಸೆಯಲ್ಲಿ ಸ್ಥಳಿಯ ಸದಸ್ಯರು ||
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದ್ದು, ಮೀಸಲಾತಿ ಪರಿಶೀಲನೆಗೆ ಎಎಜಿ ಧ್ಯಾನ್ ಚಿನ್ನಪ್ಪ, ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ರಾಜ್ಯ ಚುನಾವಣಾ ಆಯೋಗದ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಅವರನ್ನೊಳಗೊಂಡ ಸಮೀತಿಯನ್ನು ರಚಿಸಲಾಗಿದ್ದು, ಅಕ್ಟೋಬರ್ 22 …
Read More »ವಿಶ್ವ ಆಹಾರ ದಿನ ; ಶುಭ ಕೋರಿದ ಜಲಸಂಪನ್ಮೂಲ ಸಚಿವರು.*
ಪೌಷ್ಟಿಕ ಆಹಾರ ಸೇವನೆಯ ಮಹತ್ವ ಸಾರುವ ಜಾಗತಿಕ ಆಹಾರ ದಿನವಾದ ಇಂದು ಕೋವಿಡ್ ಸೋಂಕು ಹಬ್ಬುತ್ತಿರುವ ಈ ಕಾಲ ಘಟ್ಟದಲ್ಲಿ ಪ್ರತಿನಿತ್ಯ ಪೌಷ್ಟಿಕಾಂಶಯುಕ್ತ ಆಹಾರವನ್ನೇ ಸೇವಿಸುವ ಕುರಿತು ಜಾಗೃತಿ ಮೂಡಿಸೋಣ. ಹಸಿವು ಮತ್ತು ಬಡತನದ ಹಿಂದಿರುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸೋಣ. ಆರೋಗ್ಯಕರ ಮತ್ತು ರೋಗಮುಕ್ತ ಜೀವನ ನಡೆಸಲು ಪೌಷ್ಠಿಕಾಂಶವುಳ್ಳ ಆಹಾರ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡೋಣ. ಎಲ್ಲರಿಗೂ *ವಿಶ್ವ ಆಹಾರ ದಿನ* ಶುಭಾಶಯಗಳು. – *ಶ್ರೀ ರಮೇಶ್ ಜಾರಕಿಹೊಳಿ* …
Read More »ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ;ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ
ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ವಿಪರೀತ ಹಾನಿ ಸಂಭವಿಸಿದೆ. ಈ ಕುರಿತು ಚರ್ಚಿಸಲು *ನಾಳೆ ಉನ್ನತ ಮಟ್ಟದ ಸಭೆ* ಕರೆದಿರುವುದಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಲಸಂಪನ್ಮೂಲ ಸಚಿವ *ಶ್ರೀ ರಮೇಶ್ ಜಾರಕಿಹೊಳಿ* ತಿಳಿಸಿದ್ದಾರೆ. “ಬೆಳಗಾವಿ ಜಿಲ್ಲೆಯ ಮಳೆಯ ಹಾನಿಯ ಕುರಿತು ಈಗಾಗಲೇ ಅಧಿಕಾರಿಗಳಿಂದ ವರದಿ ಪಡೆದಿದ್ದೇನೆ. ನಾಳೆ ಸಭೆ ಕರೆದು ಚರ್ಚಿಸುತ್ತೇನೆ. ಕಲಬುರಗಿ …
Read More »ಖ್ಯಾತ ಸಂಗೀತ ನಿರ್ದೇಶಕ ಶ್ರೀ ರಾಜನ್ ಅವರು ನಿಧನ:ಸಚಿವ ರಮೇಶ್ ಜಾರಕಿಹೊಳಿ ಸಂತಾಪ.
ಕನ್ನಡ ಚಲನಚಿತ್ರ ರಂಗದ ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ *ಶ್ರೀ ರಾಜನ್* ಅವರು ನಿಧನರಾದ ಸುದ್ದಿ ನನ್ನ ಮನಸ್ಸಿಗೆ ತೀವ್ರ ನೋವನ್ನು ಉಂಟುಮಾಡಿದೆ. ಅನೇಕ ಜನಪ್ರಿಯ ಕನ್ನಡ ಚಲನಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದಾಗಿ ಕನ್ನಡ ಚಲನಚಿತ್ರರಂಗವು ಅನಾಥವಾಗಿದೆ. ತಮ್ಮ ಸಹೋದರರಾಗಿದ್ದ ಮತ್ತೊಬ್ಬ ಪ್ರಖ್ಯಾತ ಸಂಗೀತ ನಿರ್ದೇಶಕ ಶ್ರೀ ನಾಗೇಂದ್ರ ಅವರೊಂದಿಗೆ *’ರಾಜನ್-ನಾಗೇಂದ್ರ’* ಹೆಸರಿನಲ್ಲಿ ಜಂಟಿಯಾಗಿ ನೂರಾರು ಕನ್ನಡ ಚಲನಚಿತ್ರಗಳಿಗೆ ಈ ಜೋಡಿ ಸಂಗೀತ ನಿರ್ದೇಶನ ಮಾಡಿದ್ದರು. ಕನ್ನಡ ಚಲನಚಿತ್ರ ರಸಿಕರು …
Read More »ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಎಂಟ್ರಿ ಕೊಡ್ತಾರಾ!
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿ ಆಗದಿದ್ದರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ. ಬಿಜೆಪಿಯಲ್ಲಿ ಆಕಾಂಕ್ಷೆಗಳ ದಂಡೆ ಇದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದಂತ ಪ್ರತಿಷ್ಠೆ ಹೊಂದಿರುವ ಕುಟುಂಬದವೆಂದರೆ ಅದು ಜಾರಕಿಹೊಳಿ ಕುಟುಂಬ.ಜಾರಕಿಹೊಳಿ ಕುಟುಂಬದವರ ತಾವು ಹಿಡಿದ ಹಠವನ್ನು ಸಾಧಿಸದೆ ಬಿಡದ ಕುಟುಂಬ ಎಂದು ಹೆಸರುವಾಸಿಯಾಗಿದೆ. ಕರ್ನಾಟಕದಲ್ಲಿ ರಾಜಕಾರಣದಲ್ಲಿ ಹಠವಾದಿ ಎಂದೇ ಖಾತ್ಯಿಯಾಗಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ …
Read More »