ಕಲಘಟಗಿ: ಮಳೆಗೆ ಕುಸಿದಿದ್ದ ಮನೆಗೆ ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಪರಿಹಾರಕ್ಕೆ ಶಿಫಾರಸು ಮಾಡಲು ಸಂತ್ರಸ್ತ ಮಿಶ್ರಿಕೋಟಿ ಗ್ರಾಮದ ಅಶೋಕ ಗಂಗಪ್ಪ ಕಾಶಿಬಡಿಗೇರ ಅವರಿಂದ ₹20 ಸಾವಿರ ಲಂಚ ಪಡೆಯುತ್ತಿದ್ದ ದುಮ್ಮವಾಡದ ಕಂದಾಯ ನಿರೀಕ್ಷಕ ರಾಘವೇಂದ್ರ ಬೊಮ್ಮನಾಳ ಎಂಬಾತನನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಿಬ್ಬಂದಿ ಬಂಧಿಸಿದ್ದಾರೆ. ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಅಶೋಕ ಅವರ ಮನೆ ಕುಸಿದಿತ್ತು. ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ …
Read More »ಲಂಚ ಪಡೆಯುತ್ತಿದ್ದ ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ಭ್ರಷ್ಟ ನಿರೀಕ್ಷಕ ಸಿಕ್ಕಿ ಬಿದ್ದ!
ಚಿಕ್ಕಬಳ್ಳಾಪುರ: ರೇಷ್ಮೆ ಹುಳು ಸಾಕಾಣಿಕೆ ಮನೆ ಮತ್ತು ಹನಿ ನೀರಾವರಿಯ ಸಹಾಯಧನ ಬಿಡುಗಡೆ ಮಾಡಲು 12,500 ರೂಗಳು ಲಂಚ ಸ್ವೀಕರಿಸಿದ ಶಿಡ್ಲಘಟ್ಟ ತಾಲೂಕಿನ ಮೇಲೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ನಿರೀಕ್ಷಕರೊಬ್ಬರು ಭ್ರಷ್ಟಚಾರ ನಿಗ್ರಹದಳ(ಎಸಿಬಿ) ಬಲೆಗೆ ಸಿಕ್ಕಿಬಿದ್ದಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ರೇಷ್ಮೆ ನಿರೀಕ್ಷಕ ಪ್ರವೀಣ್ ಅವರು ಲಂಚ ಸ್ವೀಕರಿಸುವಾಗ ಎಸಿಬಿ ಪೋಲಿಸರು ಹಣದ ಸಮೇತ ಬಂಧಿಸಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಮೇಲೂರಿನ ಶ್ರೀನಿವಾಸರೆಡ್ಡಿ ಅವರು …
Read More »ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಲಂಚಾವತಾರ!
ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿಗೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಲ್ಲಿನ ಲಂಚಾವತರವನ್ನು ಬಯಲಿಗೆಳಿದ್ದಾರೆ. ಅದರಲ್ಲೂ ಪಾಲಿಕೆ ಆಯುಕ್ತೆ ತುಷಾರಮಣಿಯ ಆಪ್ತ ಸಹಾಯಕ ಮಲ್ಲಿಕಾರ್ಜುನ ತಮ್ಮ ಕಚೇರಿಯ ಜವಾನ ಭಾಷಾ ಮೂಲಕ ಲಂಚ ಪಡೆಯುತ್ತಿರುವಾಗ ದಾಳಿ ನಡೆಸಿ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. 50 ಸಾವಿರ ರುಪಾಯಿ ಲಂಚದ ಹಣದ ಸಮೇತ ಆರೋಪಿಗಳು ಸಿಕ್ಕಿ ಬಿದ್ದಿದ್ದು, ಫಾರಂ-2 ನೀಡಲು ತಿಂಗಳಗಟ್ಟಲೆ ಈ ನೌಕರರು ಸತಾಯಿಸುತ್ತಿದ್ದರಂತೆ. ಬಳ್ಳಾರಿ ನಗರದಲ್ಲಿನ …
Read More »ಲಂಚ ಪಡೆಯುತ್ತಿದ್ದ ವಿಶೇಷ ಭೃಷ್ಟ ಮಹಿಳಾ ತಹಶೀಲ್ದಾರ್ ಎಸಿಬಿ ಬಲೆಗೆ!
ಬೆಂಗಳೂರು,ಅ.6: ಬರೋಬರಿ 5 ಲಕ್ಷ ಲಂಚ ಪಡೆಯುವ ವೇಳೆ ನಗರದ ಮಹಿಳಾ ವಿಶೇಷ ತಹಶೀಲ್ದಾರ್ ಒಬ್ಬರು ಭ್ರಷ್ಟಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೆಜಿ ರಸ್ತೆಯಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೆಡ್ …
Read More »ಲಂಚ ಪಡೆಯುತ್ತಿದ್ದ ಜೈಲಾಧಿಕಾರಿ : ಎಸಿಬಿ ಬಲೆಗೆ
ಬೆಂಗಳೂರು: ಪರೋಲ್ ರಜೆ ಸಾಂಕ್ಷನ್ ಮಾಡಲು ಸಜಾಬಂಧಿಯಿಂದ ಲಂಚ ಪಡೆಯುತ್ತಿದ್ದ ಜೈಲಿನ ಅಧಿಕಾರಿಯೊಬ್ಬರು ಭ್ರಷ್ಟಾಚಾರ ನಿಗ್ರಹ ಸಂಸ್ಥೆ (ಎಸಿಬಿ) ತಂಡ ನಡೆಸಿದ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ತುಮಕೂರು ಮೂಲದ ಅಪರಾಧಿಯೊಬ್ಬರಿಗೆ 14 ವರ್ಷ ಜೈಲು ಶಿಕ್ಷೆ ನೀಡಿ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿತ್ತು. ಇತ್ತೀಚೆಗೆ ಈ ವ್ಯಕ್ತಿ ಪೆರೋಲ್ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಹಾಕಿದ್ದರು ಎನ್ನಲಾಗಿದೆ. ಈ ವೇಳೆ ಕಾರಾಗೃಹದ ಅಧೀಕ್ಷಕ ಜಯರಾಮ್ ಅಪರಾಧಿಯನ್ನು ಬಿಡುಗಡೆ …
Read More »ವಸೂಲಿ ಮಾಡಿದ ಹಣದ ಜೊತೆ ಪರಾರಿಯಾದ ಸ್ಪಂದನಾ ಮೈಕ್ರೋ ಪೈನಾನ್ಸ್ ಸಿಬ್ಬಂದಿ*.
ಗೋಕಾಕದಲ್ಲಿರುವ ಸ್ಪಂದನಾ ಮೈಕ್ರೋ ಫೈನಾನ್ಸ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಮೂಲತ ರಾಮದುರ್ಗ ತಾಲೂಕಿನ ಪಕೀರಪ್ಪಾ ಕುರಿ ಎಂಬಾತನು ಕೊಣ್ಣೂರಲ್ಲಿನ ಇಪ್ಪತೈದು ಗ್ರಾಹಕರಿಂದ ತಿಂಗಳಿಗೊಮ್ಮೆ ತುಂಬುವ ಹಣವನ್ನು ಅಂದಾಜು 2 ಲಕ್ಷ ರೂ, ಹಣವನ್ನು ದೊಚಿಕೊಂಡು ಗೋಕಾಕದಲ್ಲಿನ ಕಚೇರಿಗೆ ಹಣ ತುಂಬದೆ ಪರಾರಿಯಾಗಿದ್ದಾನೆ, ಪ್ರತಿ ಹದಿನೈದು ದಿನಕೊಮ್ಮೆ ಸ್ಪಂದನಾ ಮೈಕ್ರೋ ಪೈನಾನ್ಸ್ ಕಂಪನಿಯಿಂದ ತೆಗೆದುಕೊಂಡ ಹಣವನ್ನು ತುಂಬಿಸಿಕೊಳ್ಳಲು ಮ್ಯಾನೆಜರ ಕಳಿಸಿದ್ದಾರೆಂದು ಹೇಳಿದ್ದಲ್ಲದೆ ಈಗ ಕೊರಾನಾ ಹೆಚ್ಚಾಗುತಿದ್ದರಿಂದ ಯಾರು ಕಚೇರಿಗೆ ಬರಬಾರದೆಂದು …
Read More »ಎಸಿಬಿ ಅಧಿಕಾರಿ ಎಂದು ಹೇಳಿ ಹಣ ವಸೂಲಿ ಮಾಡುತ್ತಿದ ವಂಚಕರು ಪೊಲೀಸರ ಬಲೆಗೆ!
ಬೈಲಹೊಂಗಲ: ಎಸಿಬಿ ಅಧಿಕಾರಿ ಎಂದು ಹೇಳಿ ಸರ್ಕಾರಿ ನೌಕರನಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕರನ್ನು ಬೈಲಹೊಂಗಲ ಪೊಲೀಸರು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವನ್ನೂರ ಗ್ರಾಮದ ವಿಶಾಲ ಭಾಂವೇಪ್ಪ ಪಾಟೀಲ(42) ಮತ್ತು ಬೆಂಗಳೂರಿನ ಕೊಡಗೇನಹಳ್ಳಿ ನಿವಾಸಿ ಶ್ರೀನಿವಾಸ ಆಶ್ವತನಾರಾಯಣ (38) ಬಂಧಿತರು. ಸಹಾಯಕ ಕೃಷಿ ಅಧಿಕಾರಿ ಬಿ.ಆರ್. ಹುಲಗಣ್ಣವರ ಎಂಬುವರಿಗೆ ಕರೆ ಮಾಡಿ ನಾವು ಎಸಿಬಿ ಅಧಿಕಾರಿಗಳಿದ್ದು, ನೀವು ಬೇನಾಮಿ ಆಸ್ತಿ ಸಂಪಾದಿಸಿದ್ದೀರಿ ಎನ್ನುವ ದೂರು ಬಂದಿದೆ. ನೀವು ಈಗ …
Read More »ಲಂಚ ಪ್ರಕರಣ: ಎಫ್ಡಿಎ ಬಂಧನ, ನಾಲ್ವರ ವಿರುದ್ಧ ಕೇಸ್…!
ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಾಲ್ವರು ನೌಕರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಬ್ಬ …
Read More »ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಪಂಚಾಯತ್ ಭ್ರಷ್ಟ ಕಾರ್ಯದರ್ಶಿ.
ಶಿವಮೊಗ್ಗ :ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತ್ ನ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಕುರಿತು …
Read More »ಲಂಚ ಪ್ರಕರಣ: ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ…..!
ತೆಲಂಗಾಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು 1.12 ಕೋಟಿ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಮೇಡಕ್ ಜಿಲ್ಲೆಯ ಹೆಚ್ಚುವರಿ ಕಲೆಕ್ಟರ್ ಗಡ್ಡಮ್ ನಾಗೇಶ್ ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ನರ್ಸಾಪುರ ಮಂಡಲದ ಚೆಪ್ಪಲೂರ್ತಿ ಗ್ರಾಮದಲ್ಲಿ 112 ಎಕರೆ ಜಮೀನಿಗೆ ಸಂಬಂಧಿಸಿದಂತೆ ನೋ ಅಬ್ಜಕ್ಷನ್ ಸರ್ಟಿಫಿಕೇಟ್ ನೀಡಲು ಲಂಚಕ್ಕೆ ಬಲವಂತ ಮಾಡಿದ್ದರು. ಎಕರೆಗೆ 1 ಲಕ್ಷ ರೂಪಾಯಿಯಂತೆ 112 ಎಕರೆಗೆ 1.12 …
Read More »
CKNEWSKANNADA / BRASTACHARDARSHAN CK NEWS KANNADA