ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಹಿನ್ನೆಲೆ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವಂತ ಸಿಬಿಐ, ತನ್ನ ತನಿಖೆಯನ್ನು ಚುರುಕುಗೊಳಿಸಿದೆ. ಇಂದು ಬೆಳಿಗ್ಗೆಯಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆಯ …
Read More »ಶಾಸಕ ಯತ್ನಾಳ್‍ಗೆ ಟಿಎ ನಾರಾಯಣಗೌಡರ ಸವಾಲು!
ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5ಕ್ಕೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಸಂಬಂಧಿಸಿದಂತೆ ‘ರೋಲ್‍ಕಾಲ್ ಹೋರಾಟಗಾರರು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮುಖ್ಯಮಂತ್ರಿಗಳು ಹೆದರಬೇಕಿಲ್ಲ. ವಿಜಯಪುರವನ್ನು ಯಾರು ಬಂದ್ ಮಾಡುತ್ತಾರೋ ನೋಡೋಣ’ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಆಕ್ರೋಶಗೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ, ಯತ್ನಾಳಗೆ ಎರಡು ಸವಾಲುಗಳನ್ನು ಹಾಕಿದ್ದಾರೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ‘ಶಾಸಕ ಬಸವನಗೌಡ …
Read More »COVID19: ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಕೆಪಿಸಿಸಿ ಕಾರ್ಯಧ್ಯಕ್ಷರ ಸತೀಶ್ ಜಾರಕಿಹೊಳಿ ಮನವಿ
ಬೆಳಗಾವಿ: ಕೋವಿಡ್ 19ಗೆ ಸಂಬಂಧಿಸಿದಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ. ಈ ಮನವಿ ಕುರಿತು ಸಿಎಂ ಯಡಿಯೂರಪ್ಪನವರು ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ಗೌರವಧನ ಬಿಡುಗಡೆಗೆ ಆದೇಶ ನೀಡಬೇಕೆಂದು ಅವರು …
Read More »ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …
Read More »ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ*
ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ರಮೇಶ್ …
Read More »ರೂ.1.5 ಲಕ್ಷ ಲಂಚ ಪಡೆಯುತ್ತಿದ್ದ ಸಣ್ಣ ನೀರಾವರಿ ಭ್ರಷ್ಟ ಇಇ ಸೇರಿ ಇಬ್ಬರು ಬಂಧನ.
ಬೆಂಗಳೂರು: ಚೆಕ್ ಡ್ಯಾಮ್ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರನಿಗೆ ಬಾಕಿ ಹಣ ಬಿಡುಗಡೆ ಮಾಡಲು ₹ 1.5 ಲಕ್ಷ ಲಂಚ ಪಡೆಯುತ್ತಿದ್ದ ಸಣ್ಣ ನೀರಾವರಿ ಇಲಾಖೆಯ ಬೆಂಗಳೂರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎನ್. ಕಿಶೋರ್ ಮತ್ತು ಅವರ ಕಚೇರಿಯ ಲೆಕ್ಕ ಅಧೀಕ್ಷಕ ದತ್ತಾತ್ರೇಯ ನಾರಾಯಣಕರ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೋಮವಾರ ಬಂಧಿಸಿದೆ. ದೊಡ್ಡಬಳ್ಳಾಪುರ ನಿವಾಸಿಯಾದ ಗುತ್ತಿಗೆದಾರ ವೆಂಕಟೇಶ್ ಬಾಬು ಎಂಬುವವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ …
Read More »ಮೇಕೆದಾಟು ಯೋಜನೆ ; ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ಸಚಿವ ಜಾರಕಿಹೊಳಿ
ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ …
Read More »ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ :ದಸರಾ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ .
ರಾಜ್ಯ ಸರ್ಕಾರ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ …
Read More »ಶಾಲೆ ಪ್ರಾರಂಭ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಾಲೆಗಳನ್ನು ಆರಂಭಿಸುವ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತ ದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ …
Read More »ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ!
ಬೆಂಗಳೂರು, ಅಕ್ಟೋಬರ್ 09: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
Read More »