ಬೆಂಗಳೂರು,ಅ.6: ಬರೋಬರಿ 5 ಲಕ್ಷ ಲಂಚ ಪಡೆಯುವ ವೇಳೆ ನಗರದ ಮಹಿಳಾ ವಿಶೇಷ ತಹಶೀಲ್ದಾರ್ ಒಬ್ಬರು ಭ್ರಷ್ಟಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೆಜಿ ರಸ್ತೆಯಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೆಡ್ …
Read More »ಲಂಚ ಪಡೆಯುತ್ತಿದ್ದ ಜೈಲಾಧಿಕಾರಿ : ಎಸಿಬಿ ಬಲೆಗೆ
ಬೆಂಗಳೂರು: ಪರೋಲ್ ರಜೆ ಸಾಂಕ್ಷನ್ ಮಾಡಲು ಸಜಾಬಂಧಿಯಿಂದ ಲಂಚ ಪಡೆಯುತ್ತಿದ್ದ ಜೈಲಿನ ಅಧಿಕಾರಿಯೊಬ್ಬರು ಭ್ರಷ್ಟಾಚಾರ ನಿಗ್ರಹ ಸಂಸ್ಥೆ (ಎಸಿಬಿ) ತಂಡ ನಡೆಸಿದ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ತುಮಕೂರು ಮೂಲದ ಅಪರಾಧಿಯೊಬ್ಬರಿಗೆ 14 ವರ್ಷ ಜೈಲು ಶಿಕ್ಷೆ ನೀಡಿ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿತ್ತು. ಇತ್ತೀಚೆಗೆ ಈ ವ್ಯಕ್ತಿ ಪೆರೋಲ್ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಹಾಕಿದ್ದರು ಎನ್ನಲಾಗಿದೆ. ಈ ವೇಳೆ ಕಾರಾಗೃಹದ ಅಧೀಕ್ಷಕ ಜಯರಾಮ್ ಅಪರಾಧಿಯನ್ನು ಬಿಡುಗಡೆ …
Read More »ಸ್ಯಾಂಡಲ್ ವುಡ್ ಹಿರಿಯ ಹಾಸ್ಯ ನಟ ರಾಕ್‌ಲೈನ್ ಸುಧಾಕರ್ ಇನ್ನಿಲ್ಲ.
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ರಾಕ್‌ಲೈನ್ ಸುಧಾಕರ್ ಬನ್ನೇರುಘಟ್ಟ ರಸ್ತೆಯಲ್ಲಿಲ ‘ಶುಗರ್ ಲೆಸ್’ ಸಿನಿಮಾ ಚಿತ್ರೀಕರಣ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಕೋವಿಡ್19ನಿಂದ ಖ್ಯಾತ ಹಾಸ್ಯ ನಟ ವೇಣುಗೋಪಾಲ್ ನಿಧನ ಪುಷ್ಕರ್ ಮಲಿಕಾರ್ಜುನಯ್ಯ ನಿರ್ಮಾಣದ ‘ಶುಗರ್‌ಲೆಸ್’ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸುಧಾಕರ್ ಮೇಕಪ್ ಹಾಕಿಕೊಳ್ಳುತ್ತಿದ್ದಾಗ, ಕುಸಿದು ಬಿದ್ದಿದ್ದಾರೆ, ಸುಮಾರು 10 ಗಂಟೆಗೆ ನಿಧನರಾಗಿದ್ದಾರೆ. ಬೆಂಗಳೂರು ಕಮಲನಗರ ನಿವಾಸಿಯಾಗಿದ್ದ ಸುಧಾಕರ್ ಎರಡು ತಿಂಗಳುಗಳ ಹಿಂದೆ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದರು. ಸ್ಯಾಂಡಲ್‌ವುಡ್ …
Read More »ಮೇಕೆದಾಟು, ಎತ್ತಿನಹೊಳೆ ನೀರಾವರಿ ಯೋಜನೆ : ಶೀಘ್ರವೇ ದೆಹಲಿಗೆ ಸಿಎಂ ನೇತೃತ್ವದ ನಿಯೋಗ – ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.
ಬೆಂಗಳೂರು : ರಾಜ್ಯದಲ್ಲಿನ ಮಹತ್ವದ ಮೇಕೆದಾಟು, ಎತ್ತಿನಹೊಳೆ ಯೋಜನೆ ಸಹಿತ ಬೃಹತ್ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ತಾಂತ್ರಿಕ ಮತ್ತು ಕಾನೂನು ತೊಡಕುಗಳ ನಿವಾರಣೆಗೆ ತಕ್ಷಣದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹೊಸದಿಲ್ಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನಕ್ಕೆ ಕೆಲ ಕಾನೂನು ಮತ್ತು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು …
Read More »ಮಾನ್ಯ ಗೃಹ ಸಚಿವರ ಗಮನಕ್ಕೆ
ವಿಷಯ: ಪರೀಕ್ಷಾ ಕೇಂದ್ರ ಬದಲಿಸುವ ಕುರಿತು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುವುದೆನೆಂದರೆ ದಿನಾಂಕ ೨೦-೦೯-೨೦೨೦ ರಂದು ನಡೆಯುವ ನಾಗರಿಕ ಪೊಲೀಸ್ ಹುದ್ದೆಯ ಪರೀಕ್ಷೆಯು ನಡೆಯಲಿದ್ದು ಆದರೆ ಪರೀಕ್ಷಾ ಕೇಂದ್ರ ಗಳು ಬಹಳ ದೂರವಾಗಿರತ್ತವೆ ನಾಗರಿಕ ಪೊಲೀಸ್ ಹುದ್ದೆಯ ಆಕಾಂಕ್ಷಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕಷ್ಟಕರ ವಾಗುತ್ತಿದೆ ಮತ್ತು ಆ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಬೀಳುತ್ತಿದ್ದು ಅಭ್ಯರ್ಥಿಗಳು ಹೊಗಲು ಹಿಂದೇಟು ಹಾಕುತ್ತಿದ್ದಾರೆ ಆದ ಕಾರಣ ಪರೀಕ್ಷಾ ಕೇಂದ್ರ ಗಳನ್ನು ಬದಲಿಸಿ ಆಯಾ …
Read More »ಡ್ರಗ್ಸ್ ಪ್ರಕರಣ: ನಟಿ ಸಂಜನಾ ಸಿಸಿಬಿ ಅಧಿಕಾರಿಗಳ ವಶಕ್ಕೆ.
ಬೆಂಗಳೂರು: ಚಿತ್ರನಟಿ ಸಂಜನಾ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕೇಂದ್ರ ಕಚೇರಿಗೆ ಕರೆತಂದಿದ್ದಾರೆ. ಇಂದು ಬೆಳಗ್ಗೆ 6.30ಕ್ಕೆ ಸರಿಯಾಗಿ ಇಂದಿರಾನಗರದಲ್ಲಿರುವ ಸಂಜನಾ ಅವರ ನಿವಾಸದ ಮೇಲೆ 10ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿ ಇಡೀ ಮನೆಯನ್ನು ಜಾಲಾಡಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಜಾಲದ ಆರೋಪದಡಿ ಸಿಸಿಬಿ ಪೊಲೀಸರ ಬಂಧನಕ್ಕೊಳಗಾಗಿರುವ ಸಂಜನಾ ಆಪ್ತ ರಾಹುಲ್ ಹಾಗೂ ಸಿಸಿಬಿ ಪೊಲೀಸರ …
Read More »ಇಂದ್ರಜಿತ್ ಲಂಕೇಶ್ ಬಹಿರಂಗ ಕ್ಷಮೆಯಾಚಿಸಬೇಕು: ನಟಿ ಮೇಘನಾ ರಾಜ್ ಪತ್ರ.
ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ವಿಚಾರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಸಂಬಂಧ ನಿರ್ದೇಶಕ ಇಂದ್ರಜಿತ್ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ನಟಿ ಮೇಘನಾ ರಾಜ್ ಆಗ್ರಹಿಸಿದ್ದಾರೆ. ಈ ಕುರಿತು ಮೇಘನಾ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಮೇಘನಾ ರಾಜ್ ರಿಂದ ವಾಣಿಜ್ಯ ಮಂಡಳಿಗೆ ಪತ್ರ ನನ್ನ ಪತಿ ತೀರಿಕೊಂಡು ಮೂರು ತಿಂಗಳು ಕಳೆದಿಲ್ಲ. ಆಗಲೇ ಅವರ ಮೇಲೆ ಇಲ್ಲಸಲ್ಲದ ಆರೋಪ ಹೇರಲಾಗ್ತಿದೆ. ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನನಗೆ ನೋವಾಗಿದೆ. ಗರ್ಭವತಿ …
Read More »ನಟಿ ರಾಗಿಣಿ ಸಿಸಿಬಿ ವಶಕ್ಕೆ…..!
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಗ್ಗೆ ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್‌ಎ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ …
Read More »ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ಎಸಿಬಿ: ಕೆಜಿಗಟ್ಟಲೆ ಚಿನ್ನಾಭರಣ ವಶ…..!
ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಖಚಿತ ಮಾಹಿತಿಯ ಆಧಾರದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ.ಅಧಿಕಾರಿಗಳು ಇಬ್ಬರು ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಾಏಕಿ ದಾಳಿ ನಡೆಸಿ 15 ಲಕ್ಷ ರೂ.ನಗದು ಮತ್ತು ಮೂರು ಕೆಜಿಯಷ್ಟು ಚಿನ್ನಾಭರಣ ವಶಪಡಿಸಿಕೊಂಡು, ದಾಖಲೆ ಪರಿಶೀಲನೆ ಕಾರ್ಯ ಮುಂದುವರಿಸಿದ್ದಾರೆ. ಬೆಂಗಳೂರು ಕೊಳಚೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಂಎಸ್‍ಎನ್ ರಾಜು ಅವರಿಗೆ ಸೇರಿದ ತುಮಕೂರಿನ ವಾಸದ ಮನೆ, ಬೆಂಗಳೂರು …
Read More »ಪದವಿ ಶೈಕ್ಷಣಿಕ ವರ್ಷ ಆರಂಭ: ಸೆಪ್ಟೆಂಬರ್ 1ರಿಂದ ಆನ್ ಲೈನ್ ||ಅಕ್ಟೋಬರನಿಂದ ನೇರ(ಆಫ್‍ಲೈನ್) ತರಗತಿ .
ಬೆಂಗಳೂರು, ಆ.26: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ(ಆಫ್‍ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ …
Read More »
CKNEWSKANNADA / BRASTACHARDARSHAN CK NEWS KANNADA