Breaking News

ಗೋಕಾಕ

ಸೂಫಿಗಳು, ಶರಣರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ : ಮುರುಘರಾಜೇಂದ್ರ ಶ್ರೀಗಳು

ಗೋಕಾಕ: ಸೂಫಿಗಳು, ಶರಣರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಶುಕ್ರವಾರದಂದು ಸಾಯಂಕಾಲ ಇಲ್ಲಿನ ವಿವೇಕಾನಂದ ನಗರದ ಮುಸ್ಲಿಂ ಸಮಾಜದ ಯುವಕ ಶಕೀಲ ಧಾರವಾಡಕರ ಅವರ ಮನೆಯಲ್ಲಿ ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ ಶ್ರೀಗಳ ನಡಿಗೆ ಭಕ್ತರ ಮನೆಗಳ ಕಡೆಗೆ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಸೂಫಿ ಸಂತರು ದೇಶಾದ್ಯಂತ ಪ್ರವಾಸ ಮಾಡಿ ಮಾನವ ಧರ್ಮವನ್ನು …

Read More »

ಬೆಳಗಾವಿ ಜಿಲ್ಲೆಯ ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಸಂದೇಶ ಕಳುಹಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಎಲ್ಲ ಶಿಕ್ಷಕರು, ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬೆಳಗಾವಿ ಮತ್ತು ಚಿಕ್ಕೋಡಿ ಡಿಡಿಪಿಐ ಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ಜೊತೆಗೆ ಎಲ್ಲರಿಗೂ ವಿಶೇಷ ಸಂದೇಶ ಒಳಗೊಂಡಿರುವ ಶುಭಾಶಯ ಪತ್ರಗಳನ್ನು ವಿತರಿಸಿದ್ದಾರೆ. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸತೀಶ ಅವರು ಎಲ್ಲ ತಾಲೂಕಿನ …

Read More »

ಲೋಳಸೂರ ಸೇತುವೆಗೆ ಚಾಲನೆ; ಸಂಚಾರ ಪುನರಾರಂಭ ಶಾಸಕರಾದ ಸತೀಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿಯವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

ಗೋಕಾಕ: ಕಳೆದ ಎರಡು ತಿಂಗಳ ಹಿಂದೆ ಘಟಪ್ರಭಾ ನದಿ ಪ್ರವಾಹದಿಂದ ಜಲಾವೃತಗೊಂಡು ಸಂಪೂರ್ಣ ಕೊಚ್ಚಿ ಹೋಗಿದ್ದ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆಯ ದುರಸ್ತಿ ಕಾಮಗಾರಿ ಮುಕ್ತಾಯಗೊಂಡಿದ್ದು, ಸೇತುವೆಗೆ ಇಂದು ಚಾಲನೆ ನೀಡಲಾಗಿದೆ. ಇಂದಿನಿಂದ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷರು, ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಸೇತುವೆಯನ್ನು ಇಂದು ಉದ್ಘಾಟಿಸಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ …

Read More »

ಉನ್ನತ ಶಿಕ್ಷಣದಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ: ಆರೋಗ್ಯಸ್ವಾಮಿ ಎ.ಕೆ

ಗೋಕಾಕ ಸೆ 4 :ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡಿರುವುದರಿಂದ ಉನ್ನತ ಶಿಕ್ಷಣ ಅಥವಾ ಉದ್ಯೋಗದೊಂದಿಗೆ ತಮ್ಮ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದು ಬಿಸಿಇ ,ಸಿಸಿಎ ಕಾಲೇಜ ಧಾರವಾಡದ ಪ್ರಾಚಾರ್ಯ ಆರೋಗ್ಯಸ್ವಾಮಿ ಎ.ಕೆ ಹೇಳಿದರು. ಶನಿವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಸಭಾಂಗಣದಲ್ಲಿ ನಡೆದ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ ಗೋಕಾಕ ಕೊನೆಯ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುಗೆ ಮತ್ತು ಪಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಲೋಳಸೂರ ಸೇತುವೆ ಪರಿಶೀಲಿಸಿದ ಶಾಸಕ ಸತೀಶ ಜಾರಕಿಹೊಳಿ; ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚನೆ

ಗೋಕಾಕ: ಕಳೆದೆರಡು ತಿಂಗಳ ಹಿಂದೆ ಘಟಪ್ರಭಾ ನದಿ ಪ್ರವಾಹದಿಂದ ಜಲಾವೃತಗೊಂಡು ಸಂಪೂರ್ಣ ಕೊಚ್ಚಿ ಹೋಗಿದ್ದ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆಯ ಕಾಮಗಾರಿ ಸದ್ಯ ಮುಕ್ತಾಯಗೊಂಡಿದ್ದು, ಸೇತುವೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಸತೀಶ ಜಾರಕಿಹೊಳಿ ಅವರು ಖುದ್ದಾಗಿ ಸೇತುವೆಯನ್ನು ಪರಿಶೀಲನೆ ಮಾಡಿ, ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾಳೆಯಿಂದ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. …

Read More »

ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ : ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ : ‘ ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಘಟಪ್ರಭಾದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಸೇವಾದಳದ ಪ್ರಪ್ರಥಮ ಮಹಿಳಾ ಸಮರ್ಥ್ 5 ದಿನದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ‘ಸೇವಾದಳ ಕೇಂದ್ರದಲ್ಲಿ ಹೆಚ್ಚು ಹೆಚ್ಚು ಕಾರ್ಯಕರ್ತರಿಗೆ ತರಬೇತಿ ನೀಡುವುದರ ಮೂಲಕ ಸತ್ಯ, ಅಹಿಂಸೆ …

Read More »

Gokak BREAKING:ಪೆಟ್ರೋಲ್ ಕಳ್ಳನಿಗೆ ಬುದ್ಧಿ ಹೇಳಿದಕ್ಕೆ ಬಲಿಯಾದ ಅಮಾಯಕ!

ಗೋಕಾಕ : ಆತ ತಿಂದುಂಡು ತಿರುಗೋ ಪೋಕರಿ. ಶೋಕಿಯ ಜೀವನಕ್ಕೆ ಬಿದ್ದಿದ್ದ ಆತ ರಾತ್ರಿಯಾದ್ರೆ ಪೆಟ್ರೊಲ್ ಕಳ್ಳತನ ಮಾಡೋ ಖಯಾಲಿ ರೂಢಿ ಮಾಡಿಕೊಂಡಿದ್ದ. ನಿಂತಿರುವ ಗಾಡಿಯ ಪೆಟ್ರೋಲ್ ತೆಗೆದು ಅದನ್ನ ತನ್ನ ಗಾಡಿಗೆ ಹಾಕಿ ಓಡಿಸುತ್ತಿದ್ದ ಖದೀಮ. ಮಾಡಬಾರದ ಕೆಲಸ ಮಾಡುವಾಗ ಸಿಕ್ಕಿಬಿದ್ದ ಖದೀಮ ತನ್ನ ಮರ್ಯಾದೆ ಉಳಿಸಿಕೊಳ್ಳೋಕೆ ನೋಡಿದವನನ್ನೆ ಕೊಂದು ತಿಪ್ಪೆಯಲ್ಲಿ ಹೆಣ ಹೂತಿಟ್ಟು ಈಗ ಪೊಲೀಸರ ಅತಿಥಿಯಾಗಿದ್ದಾನೆ. ಇನ್ನೂ ಚಿಗುರು ಮೀಸೆ. ಯಳಸು ವಯಸ್ಸು ಅತ್ತ ಜೀವನ …

Read More »

ಶ್ರೀಘದಲ್ಲಿ ಗೋಕಾಕ ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೆ : ರಮೇಶ ಜಾರಕಿಹೊಳಿ.

ಗೋಕಾಕ: ಸರಕಾರಿ ಆಸ್ಪತ್ರೆಯನ್ನು 100 ರಿಂದ 250 ಬೆಡ್‌ಗೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು 100 ರಿಂದ 150 ಬೆಡ್ ಗೆ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಾಜಿ ಸಚಿವರು ,ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ನಡೆದ ವೈದ್ಯರ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸ್ತುತ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ಉತ್ತಮವಾಗಿದೆ. ಆಸ್ಪತ್ರೆಗಳು, ವೈದ್ಯಕೀಯ ಸೌಲಭ್ಯಗಳು, ಉತ್ತಮ ಪ್ರಮಾಣದಲ್ಲಿವೆ. ವೈದ್ಯರ ಸಂಖ್ಯೆಯೂ ಇದೆ. …

Read More »

ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್!ಘಟಪ್ರಭಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು.

ಬೆಳಗಾವಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಮೊನ್ನೆ ನಡೆದಿರುವ ಗ್ಯಾಂಗ್ ರೇಪ್ ಪ್ರಕರಣದ ಸುದ್ದಿ ಇನ್ನೂ ತಣ್ಣಗಾಗಿಲ್ಲ. 2 ದಿನ ಕಳೆದರೂ ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ. ಈ ನಡುವೆ ಮತ್ತೊಂದು ಸಾಮೂಹಿಕ ಅತ್ಯಾಚಾರ ಕೇಸ್​ ದಾಖಲಾಗಿದ್ದು, ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದೆ.ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. 15 ದಿನದ ಹಿಂದೆ ಬಾಲಕಿಯನ್ನು ಪರಿಚಯಸ್ಥ ಯುವಕನೊಬ್ಬ ಬೈಕ್‌ ನಲ್ಲಿ …

Read More »

ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಗೃಹಸಚಿವರು ಅತ್ಯಾಚಾರ ಪ್ರಕರಣದ ಬಗ್ಗೆ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಬಾಯಿಂದ ಈ ರೀತಿಯ ಮಾತು ಬರಬಾರದಿತ್ತು. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಅವರ ಸಾಮರ್ಥ್ಯದ ಬಗ್ಗೆ ಅವರೇ ಸವಾಲು ಎತ್ತಿದ್ದಾರೆ ಎಂದರು. …

Read More »