Breaking News

ಗೋಕಾಕ

ನವೀಕರಣಗೊಂಡ ಅಂಬೇಡ್ಕರ್ ಮೂರ್ತಿ ಪರಿಶೀಲಿಸಿದ ಶಾಸಕ ಸತೀಶ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕ ಸಭೆ ನಡೆಸಿ, ಕುಂದುಕೊರತೆ ಆಲಿಸಿದರು. ಸಭೆಯ ನಂತರ ಪಾಲಿಕೆಯ ಆವರಣದಲ್ಲಿರುವ ನವೀಕರಿಸಲಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಯನ್ನು ಪರಿಶೀಲಿಸಿದರು. ಮೂರ್ತಿಯ ಸುತ್ತ ಉದ್ಯಾನ ಹಾಗೂ ದೀಪಾಲಂಕಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ಟಿ ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ, ಪಾಲಿಕೆಯ …

Read More »

ಬಡ ವಿದ್ಯಾರ್ಥಿಗೆ ಲ್ಯಾಪ್ ಟಾಪ್ ಕೊಡಿಸಿದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರರು ಹಾಗೂ ಯುವ ಮುಖಂಡರಾದ ಪ್ರಿಯಾಂಕಾ ಹಾಗೂ ರಾಹುಲ್ ಜಾರಕಿಹೊಳಿ ಅವರು ಬಡ, ಪ್ರತಿಭಾವಂತ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಸ್ಥಳೀಯ ವಿದ್ಯಾರ್ಥಿ ಸುರೇಶ ಪೂಜೇರಿ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಇಂಜಿನಿಯರಿಂಗ್ ವಿದ್ಯಾಭ್ಯಾಸ ಕೈಗೊಂಡಿದ್ದಾನೆ. ಆತನಿಗೆ ವಿದ್ಯಾಭ್ಯಾಸಕ್ಕೆ ಲ್ಯಾಪ್ ಟಾಪ್ ನ ಅಗತ್ಯವಿತ್ತು. ಈ ವಿಷಯ ಅರಿತ ಪ್ರಿಯಾಂಕಾ ಹಾಗೂ ರಾಹುಲ್ ಅವರು ಸೋಮವಾರ …

Read More »

ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ : ಸಚಿವ ರಮೇಶ ಜಾರಕಿಹೊಳಿ

ಗೋಕಾಕ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ತಮ್ಮ ಕಛೇರಿಯಲ್ಲಿ ತಾಲೂಕಿನ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನ ವಿತರಿಸಿ ಮಾತನಾಡಿದರು. ಸನ್ 2019-20 ಮತ್ತು 2020-21 ರ ಸಾಲಿನ ಎಸ್.ಎಫ್.ಸಿ ಅನುದಾನ ಶೇ 24.10% ರ ಯೋಜನೆಯಡಿಯಲ್ಲಿ ರೂ 2.42 ಲಕ್ಷಗಳ ಅನುದಾನದಲ್ಲಿ 5 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ವರ್ಗದ ಬಿ.ಇ …

Read More »

ಕೌಜಲಗಿಯಲ್ಲಿ ‘ಹರ್ ಘರ್ ಜಲ್’ ಕಾಮಗಾರಿಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ ಮೂಡಲಗಿ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ …

Read More »

ಗೋಕಾಕ ಸಾಹಿತ್ಯ ಸಮ್ಮೇಳನಕ್ಕೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸುವುದಾಗಿ ಕನ್ನಡಪರ ಸಂಘಟನೆಗಳ ಎಚ್ಚರಿಕೆ.

ಗೋಕಾಕ: ಇದೇ ತಿಂಗಳು 27 ರಂದು ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರ ವಿರುದ್ದ ಗೋಕಾಕ ಗ್ರಾಮೀಣ ಭಾಗದ ಕನ್ನಡ ಪರ ಸಂಘಟನೆಗಳು ಘಟಪ್ರಭಾ ನಗರದಲ್ಲಿ ಗುರುವಾರ ಸಂಜೆ ಸಭೆ ಸೇರಿ ತೀವ್ರ ವಿರೊಧ ವ್ಯಕ್ತ ಪಡಿಸಿದರು. ಈ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ ಅವರು ಈ ಸಮ್ಮೇಳನದ ಆಮಂತ್ರಣ ಪತ್ರಿಕೆಯಲ್ಲಿ ಗ್ರಾಮೀಣ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಗ್ರಾಮೀಣ ಭಾಗದ ಘಟಾನುಘಟಿ ಕನ್ನಡ …

Read More »

ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು: ರಾಹುಲ್ ಜಾರಕಿಹೊಳಿ ಆಗ್ರಹ

ಗೋಕಾಕ: “ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೋವಿಡ್ ನಿಂದಾಗಿ ಜನರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ, …

Read More »

ಎಲ್ಲರನ್ನು ಗಣನೆಗೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ॥ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಪಸ್ವರ.!

ಗೋಕಾಕ:  ನೆರೆ ಹಾವಳಿ ಹಾಗೂ ಕರೋನಾ ವೈರಸ್ಸನಿಂದಾಗಿ ತತ್ತರಿಸಿರುವ ಗೋಕಾವಿ ನಾಡಿನಲ್ಲಿ ಅದ್ದೂರಿ ಸಮ್ಮೇಳನ ಅವಶ್ಯಕತೆ ಇತ್ತಾ ಎಂದು ಹಿರಿಯ ಸಾಹಿತಿ ಮಹಾಲಿಂಗ ಮಂಗಿ ಕಸಾಪ ತಾಲೂಕ ಘಟಕದ ವಿರುದ್ಧ ವಾಗ್ದಾಳಿ ನಡೆಸಿದರು. ಅವರು, ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಸಂಭಾವನೆ ನೀಡಿ ಚಿತ್ರ ನಟಿಯರನ್ನು ಕರೆ ತಂದು ಸಮ್ಮೇಳನ ನಡೆಸುವದು ಸರಿಯಲ್ಲ. ಸಾರ್ವಜನಿಕರು ನೀಡಿದ ಹಣ ದುರ್ಬಳಕೆಯಾಗಬಾರದು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಒಬ್ಬರ ಕೈಗೊಂಬೆಯಾಗಿದ್ದಾರೆ ಎಂದು …

Read More »

ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್‍ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …

Read More »

ಹೈಕಮಾಂಡ್ ಬುಲಾವ್: ದೆಹಲಿಗೆ ತೆರಳಿದ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಸಮಾವೇಶ ಹಾಗೂ ಪಾದಯಾತ್ರೆ ಬಳಿಕ ಶಾಸಕ​ ಬಸನಗೌಡ ಪಾಟೀಲ್ ಯತ್ನಾಳ್ ದಿಡೀರ್ ದೆಹಲಿಗೆ ತೆರಳಿದ್ದಾರೆ.ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಯತ್ನಾಳ್ ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಯತ್ನಾಳ್ ಅವರ ದೆಹಲಿ ಭೇಟಿಯಿಂದಾಗಿ ಅನೇಕ ವಿಚಾರಗಳು ಚೆರ್ಚೆಗೆ ಗ್ರಾಸವಾಗಿವೆ.ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ನೋಟೀಸ್ ನೀಡಿತ್ತು.ನೋಟೀ ಸಿಗೆ ಅವರು 11 ಪುಟಗಳ ಉತ್ತರವನ್ನು ನೀಡಿದ್ದರು.ಅದರಲ್ಲಿ 45 ಪ್ಯಾರಾಗಳು ಯಡಿಯೂರಪ್ಅವರ ಸ್ವಜನ ಪಕ್ಷಪಾತ,ಪುತ್ರ …

Read More »

ಕರ್ನಾಟಕ ರಕ್ಷಣಾ ವೇದಿಕೆಯ ನೂತನ ತಾಲ್ಲೂಕು ಘಟಕ ಉದ್ಘಾಟನೆ

ಕರ್ನಾಟಕ ರಕ್ಷಣಾ ವೇದಿಕೆಯ ನೂತನ ತಾಲ್ಲೂಕು ಘಟಕ ಉದ್ಘಾಟನಾ ಸಮಾರಂಭ ಇಂದು ದೂಪದಾಳ ಪ್ರವಾಸಿ ಮಂದಿರದಲ್ಲಿ ನಡೆಸಲಾಯಿತು ಕಾರ್ಯಕ್ರಮದ ಅದ್ಯಕ್ಷತೆಯನ್ನು ವಿಭಾಗೀಯ ಮಹಿಳಾ ಅದ್ಯಕ್ಷರಾದ ರೇಶ್ಮಾ ಕಿತ್ತೂರ ರವರು ವಹಿಸಿದ್ದರು ಮುಖ್ಯ ಅಥಿತಿಗಳಾಗಿ ಜಿಲ್ಲಾ ಉಪಾಧ್ಯಕ್ಷ ಅಕ್ಬರ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ ಕೊಪ್ಪದ ಶ್ರೀಮತಿ ಅನ್ನಪೂರ್ಣ ಅಸೂರಕರ ಯುವ ಘಟಕದ ಜಿಲ್ಲಾ ಅದ್ಯಕ್ಷ ರೋಶನ್ ಶೆಟ್ಟಿ ಆಗಮಿಸಿದ್ದರು ರೆಹಮಾನ್ ಮೊಕಾಶಿ ಇವರನ್ನು ಜಿಲ್ಲಾ ಸಂಚಾಲಕರಾಗಿ ಆಯ್ಕೆ ಆದರು …

Read More »