Breaking News

ಗೋಕಾಕ

ಕೊಲ್ಲಾಪೂರ ಕ್ರೀಡಾ ಕೂಟದಲ್ಲಿ ಘಟಪ್ರಭಾ ಸಿಪಿಐ ಶ್ರೀಶೈಲ ಬ್ಯಾಕೂಡ ಉತ್ತಮ ಸಾಧನೆ!

ಗೋಕಾಕ್ : ಮಹಾರಾಷ್ಟ್ರದ ಕೊಲ್ಲಾಪೂರ ಸ್ಪೋರ್ಟ್ ಕ್ಲಬ್ ಅವರು ವರ್ಷಕ್ಕೊಮ್ಮ ನಡೆಸುವ ಹಾಫ್ ಐರನ್ ಡಿಸ್ಟನ್ಸ್ ಟ್ರಿಯ್ಥ್ಲಾನ್ ಸ್ಪರ್ಧೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಪಿ.ಐ ಶ್ರೀಶೈಲ್ ಬ್ಯಾಕೋಡ ಅವರು ರವಿವಾರ ನಡೆದ 2022ರ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಪದಕವನ್ನು ಗಳಿಸಿದ್ದಾರೆ ಈ ಸ್ಪರ್ಧೆಯಲ್ಲಿ ಭಾರತದ ಯಾವದೇ ಭಾಗದಲ್ಲಿ ವಾಸಿಸುವ ನಾಗರಿಕರು ಈ ಸ್ಪರ್ಧೆಯಲ್ಲಿ ಭಾಗವಹಿಸ ಬಹುದಾಗಿದ್ದು, ವಿಜೇತರನ್ನು ಹಾಫ್ ಐರನ್ ಡಿಸ್ಟನ್ಸ್ ಟ್ರಿಯ್ಥ್ಲಾನ್ ಎಂದು ಘೋಷಿಸಲಾಗುತ್ತದೆ. 2022 ರ ಸ್ಪರ್ಧೆಯಲ್ಲಿ …

Read More »

ಗಾಂಧಿ ಅಹಿಂಸಾ ತತ್ವ ಹಾಗೂ ಸತ್ಯ ಪ್ರತಿಪಾಧನೆ ಎಲ್ಲರಿಗೂ ಮಾದರಿ- ರಮೇಶ ಜಾರಕಿಹೊಳಿ.!

ಗೋಕಾಕ: ಮಹಾತ್ಮ ಗಾಂಧಿ ಅಹಿಂಸಾ ತತ್ವ ಹಾಗೂ ಸತ್ಯ ಪ್ರತಿಪಾಧನೆ ಎಲ್ಲರಿಗೂ ಮಾದರಿಯಾಗಿದೆ. ಅವರ ನಡೆ-ನುಡಿ ನಮಗೆಲ್ಲ ಮಾರ್ಗದರ್ಶಕವಾಗಿವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದಿಂದ ನಗರದ ತಮ್ಮ ಗೃಹ ಕಚೇರಿಯಲ್ಲಿ ಮಹಾತ್ಮ ಗಾಂಧೀ ಹಾಗೂ ಲಾಲ್ ಬಹಾದ್ದೂರ ಶಾಸ್ತಿç ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾತ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಮಾಜಿ ಪ್ರಧಾನಿ ಲಾಲ್ ಬಹಾದ್ದೂರ …

Read More »

*ಕಲ್ಮಡ್ಡಿ ಏತ ನೀರಾವರಿ ಎಫ್‍ಐಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

194 ಕೋಟಿ ರೂ. ವೆಚ್ಚದ ಕೌಜಲಗಿ ಭಾಗದ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ರೈತರಿಗೆ ವರದಾನ* *ಗೋಕಾಕ :* ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕ ನೀರಾವರಿ ಇಲಾಖೆಯಿಂದ 162 ಕೋಟಿ ರೂ. ಮೊತ್ತದ ಕಲ್ಮಡ್ಡಿ …

Read More »

*ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ :* ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಣಾಧಿಕಾರಿಗಳ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ*

ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

Read More »

ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ ಸೆ 29: ಮೂಡಲಗಿ ಮತ್ತು ಗುರ್ಲಾಪೂರ ಹಾಗೂ ವಿವಿಧ ಗ್ರಾಮಸ್ಥರ ಹಲವರು ದಿನಗಳ ಬೇಡಿಕೆಯಂತೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶೇಷ ಅನುದಾನ ಮಂಜೂರ ಮಾಡಿಸಿ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ 4.45 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಎರಡು ಹಂತಸಿನ ಕಟ್ಟಡವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ಯುವ ನಾಯಕ ಸರ್ವೊತ್ತಮ ಜಾರಕಿಹೊಳಿ ಹೆಳೀದರು. ಅವರು ಗುರುವಾರದಂದು ಮುಡಲಗಿ ಪುರಸಭೆ ವ್ಯಾಪ್ತಿಯ …

Read More »

ಗೋಕಾಕ ನಗರದಲ್ಲಿ ನೇಣಿಗೆ ಶರಣಾದ ಮಹಿಳೆ!

ಗೋಕಾಕ : ಗೋಕಾಕ ನಗರದ ಕಿಲ್ಲಾ ಪ್ರದೇಶದಲ್ಲಿ ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ಮಹಿಳೆಯನ್ನು ಮರಾಠಾಗಲ್ಲಿಯ ನಿವಾಸಿಯಾದ ಜಭೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಗೋಕಾಕ ನಗರದ ಕಿಲ್ಲಾದಲ್ಲಿರುವ ಮನೆಯ ಮುಂದಿನ ಗ್ಯಾಲರಿಯಲ್ಲಿ ಮೃತದೇಹ ನೇತಾಡುತ್ತಿತ್ತು. ಮನೆ ರಸ್ತೆ ಪಕ್ಕದಲ್ಲಿರುವುದರಿಂದ ಈ ದೃಶ್ಯ ಕಂಡು ವಾಕಿಂಗ್ ಹೋಗುತ್ತಿದ್ದವರು ಬೆಚ್ಚಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ ಮನೆಗೆ ಬೀಗ ಹಾಕಿಕೊಂಡು …

Read More »

ಅ.2ರಿಂದ 4ರವರೆಗೆ ಯುವ ನಾಯಕ ರಾಹುಲ್‌ ಜಾರಕಿಹೊಳಿ ಜನ್ಮದಿನಾಚರಣೆ

ಬೆಳಗಾವಿ: ಯುವ ನಾಯಕ, ಸತೀಶ್‌ ಶುಗರ್ಸ್‌ ನಿದೇರ್ಶಕರಾದ ರಾಹುಲ್‌ ಸತೀಶ್‌ ಜಾರಕಿಹೊಳಿ ಅವರ ಜನ್ಮದಿನ ಕಾರ್ಯಕ್ರಮವನ್ನು ಅ. 2,3,4 ರಂದು ಅದ್ದೂರಿಯಾಗಿ ಆಚರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ, ರಾಹುಲ್‌ ಜಾರಕಿಹೊಳಿ ಮತ್ತು ಪ್ರಿಯಂಕಾ ಜಾರಕಿಹೊಳಿ ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ. ಅ. 2ರಂದು ಬೆಳಗಾವಿ ನಗರದ ಕೆಪಿಟಿಸಿಎಲ್‌ ಹಾಲ್‌, ಅ. 3ರಂದು ಯಮಕನಮರಡಿ ಮತಕ್ಷೇತ್ರದ ಅಲದಾಳ ಗೆಸ್ಟ್‌ ಹೌಸ್‌, ಅ. 4ರಂದು ಗೋಕಾಕ ನಗರದ ಹಿಲ್ ಗಾರ್ಡನ್‌ ಕಚೇರಿಯಲ್ಲಿ …

Read More »

ಪುಸ್ತಕದಷ್ಟೆ ಜ್ಞಾನ ಪ್ರವಾಸ ಮಾಡುವದರಿಂದ ಲಭಿಸುತ್ತದೆ:ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ : ಪ್ರವಾಸದಿಂದ ಜನರ ಮನೊಉಲ್ಲಾಸ ದೊಂದಿಗೆ ಜ್ಞಾನವೃದ್ಧಿ ಆಗುವುದು ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು ಮಂಗಳವಾರದಂದು ಸಮೀಪದ ಗೋಕಾಕ ಫಾಲ್ಸ್ ನ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಮತ್ತು ಪ್ರವಾಸೋದ್ಯಮ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು ಪುಸ್ತಕದಷ್ಟೆ ಜ್ಞಾನ ಪ್ರವಾಸ ಮಾಡುವದರಿಂದ ಲಭಿಸುತ್ತದೆ. ಪ್ರವಾಸೋದ್ಯಮ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿ, ದೇಶದ ಆರ್ಥಿಕ ಪ್ರಗತಿಯಲ್ಲಿ ಮಹತ್ವದ ಪಾತ್ರವಹಿಸುತ್ತಿದೆ. ನಾವೆಲ್ಲರೂ …

Read More »

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ ಅನುದಾನದಲ್ಲಿ …

Read More »