ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಮೃತವ್ಯಕ್ತಿಯೊಬ್ಬರ ಶವವನ್ನು ಸೈಕಲ್ ಮೇಲೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿರುವ ವರದಿಯನ್ನು ಗಮನಿಸಿದ್ದೇನೆ. ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು. ಮೃತರ ಸಂಸ್ಕಾರವನ್ನೂ ಗೌರವಯುತವಾಗಿ ಮಾಡಬೇಕು. ಮಹಾಮಾರಿ ಕೊರೋನಾ ಸೋಂಕಿನಿಂದಾಗಲೀ, ಬೇರೆ ಯಾವುದೇ ರೀತಿಯ ಅನಾರೋಗ್ಯದಿಂದ ಮೃತರಾದ ವ್ಯಕ್ತಿಗಳ ಅಂತ್ಯಕ್ರಿಯೆಗೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು. *ಮಾಧ್ಯಮಗಳ ವರದಿ* ಗಳನ್ನು ಗಮನಿಸಿ *ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ* ಗಳೊಂದಿಗೆ ಮಾತನಾಡಿದ್ದೇನೆ. ಇಂತಹಾ …
Read More »ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ || ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಜಿಲ್ಲಾಡಳಿತಕ್ಕೆ : ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೂಚನೆ.
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.ಇದರಿಂದಾಗಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೇ ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲುತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ …
Read More »ಹಿಡಕಲ್ ಜಲಾಶಯದಿಂದ 40 ಸಾವಿರ ಕ್ಯೂಸೆಕ್ಸ ನೀರು ಘಟಪ್ರಭಾ ನದಿಗೆ ಬಿಡುಗಡೆ: ನದಿ ಪಾತ್ರದ ಜನರಿಗೆ ಮುಂಜಾಗ್ರತೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ
ಬೆಳಗಾವಿ: ಪಶ್ಚಿಮ ಗಟ್ಟದಲ್ಲಿ ಧಾರಾಕಾರು ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳ ಹರಿಯುವ ಹೆಚ್ಚಾಗಿದ್ದು ಜಲಾಶಯದಿಂದ ಇಂದು 40000 ಕ್ಯೂಸೆಕ್ಸ ನೀರು ಹೊರ ಬಿಡಲಾಗಿದೆ . ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಒಳಹರಿಯುವ 18052 ಕ್ಯೂಸೆಕ್ಸ ಇದ್ದು ಈ ಒಳ ಹರಿವಿನ ಪ್ರಮಾಣವನ್ನು ದೃಷ್ಟಿಯಲ್ಲಿಟ್ಟುಕೊಂಡು ಜಲಾಶಯದ ಕ್ರಷ್ಟ ಗೇಟುಗಳು ಮೂಲಕ ಘಟಪ್ರಭಾ ನದಿಗೆ ನೀರು ಹರಿದು ಬಿಡಲಾಗಿದೆ. ಬಾನುವಾರ ಸಂಜೆ 5:30 ಕ್ಕೆ 40 ಸಾವಿರ ಕ್ಯೂಸೆಕ್ಸ ನೀರು ನದಿಗೆ …
Read More »ಯುಪಿಎಸ್ಸಿ ಸಾಧಕಿ ಪ್ರಿಯಾಂಕಾ ಕಾಂಬಳೆಯವರಿಗೆ ಅಭಿನಂದಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಇತ್ತೀಚಿಗೆ ನಡೆದ ಯುಪಿಎಸ್ಸಿ ಪರೀಕ್ಷೆಯಲ್ಲಿ ಸತತ ಅಧ್ಯಯನದ ಮೂಲಕ 670ನೇ ರ್ಯಾಂಕ್ ಪಡೆದು ಉತ್ತಮ ಸಾಧನೆ ಮಾಡಿದ ಚಿಕ್ಕೋಡಿಯ ಪ್ರಿಯಾಂಕಾ ಕಾಂಬಳೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಭಾನುವಾರ ಸನ್ಮಾನಿಸಿ, ಗೌರವಿಸಿದರು. ಇಲ್ಲಿನ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಪ್ರಿಯಾಂಕಾ ಕಾಂಬಳೆ ಅವರಿಗೆ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರ ನೀಡಿ ಗೌರವಿಸಿದರು. ಬಡತನದ ಮಧ್ಯೆಯೂ ಪ್ರಿಯಾಂಕಾ ಅವರು, ಉತ್ತಮ ಸಾಧನೆ ಮಾಡಿ ಯುವ ಜನತೆಗೆ ಮಾದರಿಯಾಗಿದ್ದಾರೆ. ಒಳ್ಳೆಯ …
Read More »ಸಚಿವ ರಮೇಶ ಜಾರಕಿಹೊಳಿ, ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಗೋಕಾಕ ಹಾಗೂ ಮೂಡಲಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ವೈದ್ಯಕೀಯ ಉಪಕರಣಗಳ ಪೂರೈಕೆ
ಘಟಪ್ರಭಾ: ಕೋರೋನಾದಂತಹ ಮಾರಕ ಕಾಯಿಲೆಗಳ ಮಧ್ಯ ಬಳಲುತ್ತಿರುವ ಕೊರೋನಾ ಸೊಂಕಿತರ ಆರೈಕೆ ಮತ್ತು ಸುರಕ್ಷತೆಗಾಗಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಾಡುತ್ತಿರುವ ಮಾನವೀಯ ಮೌಲ್ಯಗಳು ಮಾದರಿಯಾಗಿದೆ. ರಾಜ್ಯ ಹಾಗೂ ರಾಷ್ಟ್ರದಲ್ಲಿಯೇ ಅವರ ಸೇವೆ ಅನುಪಮವಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಹೇಳಿದರು. ಶನಿವಾರದಂದು ಇಲ್ಲಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …
Read More »ಎಲ್ಲ ಭಾರತೀಯರು ಭಾರತ ದೇಶಕ್ಕಾಗಿ ಹಿರಿಯರು ಕಂಡ ಕನಸು ನನಸು ಮಾಡುವ ನಿಟ್ಟಿನಲ್ಲಿ ಶ್ರಮಿಸಲು ಸತೀಶ ಜಾರಕಿಹೊಳಿ ಕರೆ
ಘಟಪ್ರಭಾ: ಇಂದಿನಿಂದ ಭಾರತ ದೇಶಕ್ಕಾಗಿ ಹಿರಿಯರು ಕಂಡಂತಹ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಸೇವಾದಳ ಕಚೇರಿಯಲ್ಲಿ ಧ್ವಜಾರೋಹನ ಬಳಿಕ ಮಾತನಾಡಿದ ಅವರು, ಹಿರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತ ದೇಶ ಹೇಗಿರಬೇಕು ಎಂದು ಹಿರಿಯರು ಕಂಡಂತಹ ಕನಸನ್ನು ನನಸು ಮಾಡುವುದಾಗಿ ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ. ದೇಶದ ಜನರು ಸಮಾನತೆಯಿಂದ ಬಾಳಬೇಕು ಮತ್ತು ಅಭಿವೃದ್ಧಿ ಹೊಂದಬೇಕು …
Read More »ಬೆಳಗಾವಿ:ಮಳೆಯಲ್ಲೇ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ
ಬೆಳಗಾವಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು, ಜಿಟಿ ಜಿಟಿ ಮಳೆ ನಡುವೆಯೂ ಸರಳವಾಗಿ ಸಮಾರಂಭ ಆಚರಿಸಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಹಭಾಗಿತ್ವ ಇಲ್ಲದೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಮಾತ್ರ ಭಾಗಿಯಾಗಿದ್ದರು. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸನ್ಮಾನ: ಇದೇ ವೇಳೆ ಇಲಾಖೆಯ ವಸತಿ …
Read More »ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ. ನಾಳೆ ದೇಶದಾದ್ಯಂತ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸುತ್ತಿದ್ದು, ಬ್ರಿಟಿಷ್ ರ ದಾಸ್ಯದ ಸಂಕೋಲೆಯಿಂದ ಭಾರತ ಮುಕ್ತಗೊಂಡ ಈ ದಿನದಂದು ಸ್ವಾತಂತ್ರ್ಯ ಪಡೆಯಲು ಹೋರಾಡಿದ ಎಲ್ಲ ಮಹಾನುಭಾವರ ತ್ಯಾಗ, ಬಲಿದಾನವನ್ನು ಸ್ಮರಿಸೋಣ; ಕೋವಿಡ್ ಯೋಧರನ್ನು ಗೌರವಿಸೋಣ. ನಾಡಿನ ಜನತೆಗೆ 74ನೇ ಸ್ವಾತಂತ್ರ್ಯ ದಿನೋತ್ಸವದ ಶುಭಾಶಯಗಳು-ರಮೇಶ್ ಜಾರಕಿಹೊಳಿ, ಜಲಸಂಪನ್ಮೂಲ ಸಚಿವರು.
Read More »ಸರಕಾರದ ಆದೇಶದಂತೆ ಶ್ರೀ ಗಣೇಶೋತ್ಸವ ಹಬ್ಬವನ್ನು ಆಚರಿಸಿ : PSI ಖಿಲಾರೆ ಹೇಳಿಕೆ.
ಗೋಕಾಕ: ಕರೋನಾ ವೈರಸ್ ತೀವೃತೆಯಿಂದ ಈ ವರ್ಷದ ಶ್ರೀ ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಶ್ರೀ ಗಣೇಶ್ ಮೂರ್ತಿಯನ್ನು ಪ್ರತಿಷ್ಠಾಪಿಸದೇ, ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಸಮೀಪದ ದೇವಸ್ಥಾನಗಳಲ್ಲಿ ಪ್ರತಿಷ್ಠಾಪಿಸಬೇಕು. ಸರಕಾರದ ನಿಯಮ ಪಾಲನೆ ಮಾಡದೆ ಇದ್ದಲ್ಲಿ ಅಂತವರ ವಿರುದ್ಧ ಕಠೀಣ ಕಾನೂನು ಕ್ರಮ ಜರುಗಿಸಲಾಗುವದು ಎಂದು ಗೋಕಾಕ ಗ್ರಾಮೀಣ ಠಾಣೆಯ ಪಿಎಸ್‌ಐ ನಾಗರಾಜ ಖಿಲಾರೆ ಹೇಳಿದರು.ಶುಕ್ರವಾರದಂದು ನಗರದ ಗೋಕಾಕ ಗ್ರಾಮೀಣ ಠಾಣೆಯ ಆವರಣದಲ್ಲಿ ಗಣೇಶ ಚತುರ್ಥಿಯ ನಿಮಿತ್ಯವಾಗಿ ಕರೆದ ಶಾಂತಿ ಸಭೆಯನ್ನುದ್ದೇಶಿಸಿ …
Read More »ಹಿರಿಯರು ಹಾಕಿಕೊಟ್ಟ ಹಾದಿಯಲ್ಲಿ ಸಾಗಲು ಪ್ರಯತ್ನ ಮಾಡೊಣ: ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ದೇಶದ ಸಮಸ್ತ ನಾಗರೀಕರಿಗೆ ನಾಳೆ ದೇಶ್ಯಾದ್ಯಂತ ಆಚರಿಸಲಿರುವ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೋರಿದ್ದಾರೆ. ನಮ್ಮ ದೇಶದ ಜನರು ಸ್ವಾತಂತ್ರ್ಯವಾಗಿ ಸಮಾನತೆಯಿಂದ ಮತ್ತು ಸಹ ಬಾಳ್ವೆಯಿಂದ ಬದುಕಬೇಕು ಎಂದು ಬಯಸಿದ್ದ ಹಿರಿಯರು ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ. ಅವರ ಹಾಕಿಕೊಟ್ಟ ಹಾದಿಯಲ್ಲಿ ನಾವು ಸಾಗಲು ಪ್ರಯತ್ನ ಮಾಡೋಣ ಎಂದ ಸತೀಶ ಜಾರಕಿಹೊಳಿ ಅವರು ಮಹಾನ ನಾಯಕರು ಕಂಡ ಕನಸನ್ನು ನಾವು ನನಸಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು. ನಾಳಿನ ಸ್ವಾತಂತ್ರ್ಯ ದಿನಾಚರಣೆಯೂ …
Read More »