Breaking News

ಬೆಳಗಾವಿ

ಯುವ ಜನತೆ ದುಶ್ಚಟಗಳತ್ತ ಮುಖ ಮಾಡದೇ ಕ್ರೀಡೆಗಳತ್ತ ಹೆಚ್ಚು ಆಸಕ್ತಿ ಹೊಂದಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ ಕರೆ

ಪಾಶ್ವಾಪುರ: ಇಂದು ಜಾಗತಿಕ ಮಟ್ಟದಲ್ಲಿ ಕ್ರಿಕೆಟ್‌ ಒಂದು ಜನಪ್ರಿಯ ಕ್ರೀಡೆಯಾಗಿದ್ದು , ಎಲ್ಲ ವಿದ್ಯಾರ್ಥಿಗಳು ಸಾಂಘಿಕ ಸ್ಫೂರ್ತಿಯಿಂದ ಭಾಗವಹಿಸಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಧೃಡರಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಕ್ಷೇತ್ರದ ಬಸ್ಸಾಪುರ ಗ್ರಾಮದಲ್ಲಿ ನಡೆದ ರಾಹುಲ್‌ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ಟೆನಿಸ ಬಾಲ್‌ ಹಾಪ್‌ ಪಿಚ್‌ ಕ್ರಿಕೆಟ್‌ ಪಂದ್ಯಾವಳಿಗಳಲ್ಲಿ ವಿಜೇತರಾದ ಕ್ರೀಡಾಳುಗಳಿಗೆ ಟ್ರೋಫಿ ಹಾಗೂ ಬಹುಮಾನ ವಿತರಿಸಿ ಅವರು ಮಾತನಾಡಿ, ಕ್ರೀಡೆಯು ಜೀವನದ ಮುಖ್ಯ …

Read More »

ನಾಟಕ, ಸಂಗೀತ ಇತರ ಕಲೆಗಳಿಗೆ ನಿರಂತರ ಪ್ರೋತ್ಸಾಹಕ್ಕೆ ಬದ್ಧ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆದ 13 ದಿನಗಳ ಕಲೆಗಳ ಕಲರವ ಕಾರ್ಯಕ್ರಮದ ಸಮಾರೋಪ ಸಮಾರಂಭ   ಬೆಳಗಾವಿ: ನಾಟಕ, ಸಂಗೀತ ಮತ್ತು ಇತರ ಕಲೆಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡಲು ನೂತನ ತರಬೇತಿ ಕೇಂದ್ರವನ್ನು ತೆರೆಯಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ಅಕಾಡೆಮಿಯಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆದ 13 ದಿನಗಳ ಕಲೆಗಳ ಕಲರವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ …

Read More »

ಎಲ್ಆರ್ ಜೆ ಟ್ರೋಫಿ ‌2022 ಯಲ್ಲಿ ಕೊಲ್ಹಾಪುರ ತಂಡ ಭರ್ಜರಿ ಗೆಲುವು!

ಗೋಕಾಕ : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ಎಲ್ಆರ್ ಜೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಲ್ಹಾಪುರ ತಂಡ ಮೊದಲ ಸ್ಥಾನ ಪಡೆದು 1.50.000 ನಗದು ಬಹುಮಾನ ವಿಜೇತರಾಗಿದ್ದಾರೆ. ರಬಕವಿ ಹಾಗೂ ಕೊಲ್ಹಾಪುರ ಅಂತಿಮ ಪಂದ್ಯದಲ್ಲಿ ಕೊಲ್ಹಾಪುರ ತಂಡ ಗೆಲುವು ಸಾಧಿಸಿದೆ. ಎರಡನೇ ಸ್ಥಾನದಲ್ಲಿ ರಬಕವಿ ತಂಡ 75.000 ನಗದು ಬಹುಮಾನ ಪಡೆದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಜಾವೀದ್ ಗೋಕಾಕ, ಡಿವಾಎಸ್ಪಿ ಮನೋಜಕುಮಾರ ನಾಯ್ಕ್ …

Read More »

ಅಪಘಾತದಲ್ಲಿ 7 ಜನ ಸಾವು; ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸಂತಾಪ!

ಗೋಕಾಕ: ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ಕ್ರೂಸರ್‌ ವಾಹನ ಬಳ್ಳಾರಿ ನಾಲೆಗೆ ಉರುಳಿ ಬಿದ್ದು 7 ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿ, ಆತ್ಮಕ್ಕೆ ಶಾಂತಿ ಸಿಗಲೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರು ಶೀಘ್ರ ಚೆತರಿಸಿಕೊಳ್ಳಲಿ. ಮೃತರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ದೇವರು …

Read More »

ಕ್ರೂಸರ್ ಪಲ್ಟಿ; ಮೃತ ಕುಟುಂಬಕ್ಕೆ ಏಳು ಲಕ್ಷ ರೂ ಪರಿಹಾರ-ಶಾಸಕ ರಮೇಶ ಜಾರಕಿಹೊಳಿ.

ಗೋಕಾಕ: ಅಕ್ಕತಂಗೇರಹಾಳ ಹಾಗೂ ಸುತ್ತಮುತ್ತಲಿನ ಕಾರ್ಮಿಕರು ಕೇಲಸಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಬೆಳಗಾವಿ ತಾಲೂಕಿನ ಕಣಬರ್ಗಿಯ ಬಳಿಯಿರುವ ಬಳ್ಳಾರಿನಾಲೆಯಲ್ಲಿ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೆ ಏಳು ಜನ ಸಾವಿಗಿಡಾಗಿದ್ದು ಮೃತ ಕುಟುಂಬಕ್ಕೆ ಏಳು ಲಕ್ಷ ರೂಪಾಯಿ ಸರಕಾರದಿಂದ ನೀಡಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.   ಈ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಈಗಾಗಲೇ ರಾಜ್ಯದ ಮುಖ್ಯಮಂತ್ರಿಯವರೊAದಿಗೆ ಮಾತನಾಡಿ, ಮೃತ ಪ್ರತಿ ಕುಟುಂಬಕ್ಕೆ ಏಳು ಲಕ್ಷ …

Read More »

ಸವದತ್ತಿ ಮತಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸವದತ್ತಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ತಯಾರಿ ಮಾಡುತ್ತಿರುವುದು ನಿಜ. ಆದರೆ ನಾನೇ ಸ್ಪರ್ಧೆ ಮಾಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಸ್ಪಷ್ಟಿಕರಣ ನೀಡಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಶನಿವಾರ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ನಾನೇ ಸವದತ್ತಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ. ಆದರೆ ಕೆಲ ಮಾಧ್ಯಮಗಳಲ್ಲಿ ನಾನೇ ಸ್ಪರ್ಧೆ …

Read More »

ಚಾಲಕನ ನಿಯಂತ್ರಣ ತಪ್ಪಿ ಅಪಘಾತ; 7 ಜನ ಸ್ಥಳದಲ್ಲೇ ಸಾವು, 3 ಸ್ಥಿತಿ ಗಂಭೀರ!

ಅಕ್ಕತಂಗಿಯರ ಹಾಳದಿಂದ ಬೆಳಗಾವಿಗೆ ಬರುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ಬಿದ್ದಿದ್ದು, ಕ್ರೂಸರ್​ನಲ್ಲಿದ್ದ 7 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ: ಕ್ರೂಸರ್​ ಪಲ್ಟಿಯಾಗಿ 7 ಜನರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ದಾರುಣ ಘಟನೆ ತಾಲೂಕಿನ ಕಣಬರಗಿ ಸಮೀಪ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್​ ವಾಹನ ಬಿದ್ದಿದೆ. ದಿನಗೂಲಿ ಕೆಲಸಕ್ಕೆಂದು ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳ ಗ್ರಾಮದಿಂದ ಬೆಳಗಾವಿಗೆ ಬರುತ್ತಿದ್ದಾಗ ಬೆಳಿಗ್ಗೆ 7.30ರ ಸುಮಾರಿಗೆ …

Read More »

ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಹೃದಯವಂತ ಶಾಸಕರು : ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ

*ಕರುಣಾಮಯಿ ಶಾಸಕರನ್ನು ಪಡೆದಿರುವುದು ನಮ್ಮೆಲ್ಲರ ಸೌಭಾಗ್ಯ : ಗಿರಡ್ಡಿ ಪ್ರಶಂಸೆ* *ಮೂಡಲಗಿ*: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹುಣಶ್ಯಾಳ ಪಿವಾಯ್‍ದಿಂದ ಬೀಸನಕೊಪ್ಪವರೆಗಿನ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಹುಣಶ್ಯಾಳ ಪಿವಾಯ್ ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿವಾಯ್ ಗ್ರಾಮದಲ್ಲಿ ಜರುಗಿದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 4 ಕೋಟಿ ರೂ. ಮೊತ್ತದ ಹುಣಶ್ಯಾಳ ಪಿವಾಯ್-ಬೀಸನಕೊಪ್ಪ …

Read More »

ಪತ್ತೆಯಾದ 7 ಭ್ರೂಣಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆಸ್ಪತ್ರೆ ಸೀಜ್

ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ ಪತ್ತೆಯಾದ 7 ಭ್ರೂಣಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮೂಡಲಿಗೆ ಪಟ್ಟಣದ ವೆಂಕಟೇಶ್ ಹೆರಿಗೆ ಆಸ್ಪತ್ರೆಯನ್ನು ಸೀಜ್ ಮಾಡಲಾಗಿದೆ.ಮೂಡಲಗಿ ಪಟ್ಟಣದ ವೆಂಕಟೇಶ್ ಹೆರಿಗೆ ಮತ್ತು ಸ್ಕ್ಯಾನಿಂಗ್ ಆಸ್ಪತ್ರೆಯಲ್ಲಿ ಕಳೆದ 3 ವರ್ಷಗಳಿಂದ ಅಭಾಷನ್ ಮಾಡಿದ್ದ 7 ಭ್ರೂಣಗಳನ್ನು ಪೊಲೀಸರ ತನಿಖೆ ಭಯದಿಂದ ಸಿಬ್ಬಂದಿಗಳು ಹಳ್ಳದಲ್ಲಿ ಬಿಸಾಕಿದ್ದರು ಎಂದು ತಿಳಿದುಬಂದಿದೆ.   ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಬಯಲಾಗಿದ್ದು, ತಮ್ಮದೇ …

Read More »

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ

ಗೋಕಾಕ ಜೂ 22 :ತಾಲೂಕಿನ ಕುಂದರಗಿ ಗ್ರಾಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. 25ಲಕ್ಷ ರೂಪಾಯಿ ವೆಚ್ಚದಲ್ಲಿ ಕುಂದರಗಿಯ ಶ್ರೀ ದ್ಯಾಮವ್ವ ದೇವಿ ಸಮುದಾಯ ಭವನ ಕಟ್ಟಡ ಕಾಮಗಾರಿ, 25ಲಕ್ಷ ರೂಪಾಯಿ ವೆಚ್ಚದಲ್ಲಿ ಶ್ರೀ ಲಕ್ಷ್ಮೀದೇವಿ ಸಭಾ ಭವನ ಹಾಗೂ 1.24ಲಕ್ಷ ರೂಪಾಯಿ ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಲಾಯಿತು. ಕುಂದರಗಿ ಗ್ರಾಪಂ ಸದಸ್ಯ ಶಿವಾನಂದ ತೋಟಗಿ ಮಾತನಾಡಿ, ಶಾಸಕ …

Read More »