ಹುಕ್ಕೇರಿ : ತಾಲ್ಲೂಕಿನ ಕೊಚ್ಚರಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿತವಾಗಿರುವ ರಾಹುಲ್ ಜಾರಕಿಹೊಳಿ ಬಳಗವನ್ನು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು, ಶನಿವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಂಘದ ಮೂಲಕ ಗ್ರಾಮ ಹಾಗೂ ಸುತ್ತಮುತ್ತಲ್ಲಿನ ಗ್ರಾಮಗಳ ಜನರಿಗೆ ಅಗತ್ಯ ನೆರವು ನೀಡುವುದರ ಜೊತೆಗೆ ಸಮಸ್ಯೆಗಳಿಗೆ ಸ್ಪಂಧಿಸಬೇಕು. ಬಡವರ ಧ್ವನಿಯಾಗಿ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು. ಸಂಘದಿಂದ ಪ್ರತಿ ವರ್ಷ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ …
Read More »ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ 7,800 ಕೋಟಿ ಹಾನಿ: ಗೋವಿಂದ ಕಾರಜೋಳ
ಬೆಳಗಾವಿ: ‘ಪ್ರವಾಹ ಮತ್ತು ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಬೆಳೆ, ಮನೆಗಳು ಹಾಗೂ ರಸ್ತೆ, ಸೇತುವೆ, ಕೆರೆ-ಕಟ್ಟೆ ಮೊದಲಾದ ಮೂಲಸೌಕರ್ಯಗಳು ಸೇರಿದಂತೆ ಒಟ್ಟು ₹ 7,800 ಕೋಟಿ ಹಾನಿಯಾಗಿದೆ’ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘21,300 ವಿದ್ಯುತ್ ಕಂಬಗಳು ಹಾಗೂ 5,300 ಟ್ರಾನ್ಸ್‌ಫಾರ್ಮರ್‌ಗಳು ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಅವುಗಳ ಹಾನಿ ಅಂದಾಜು ಮಾಡಲಾಗುವುದು’ ಎಂದು ಹೇಳಿದರು. ’51 …
Read More »ಕುರುಬರ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುವೆ: ಸತೀಶ ಜಾರಕಿಹೊಳಿ
ಬೆಳಗಾವಿ: ಕುರಿ ಸಾಕಾಣಿಕೆ, ಉಣ್ಣೆ ಉತ್ಪಾದಕ ಕೂಲಿ ಕಾರ್ಮಿಕರ ಏಳಿಗೆಗಾಗಿ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಲು ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಕುರುಬರ ಸಂಘಗಳ ಅಭಿವೃದ್ಧಿಗಾಗಿ ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಭರವಸೆ ನೀಡಿದರು. ತಾಲೂಕಿನ ಶಿಂದೊಳ್ಳಿ ಗ್ರಾಮದ ಕನಕದಾಸ ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ, ಬೆಳಗಾವಿ ಜಿಲ್ಲೆಯ ಕುರಿ ಸಂಗೋಪನ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘಗಳ …
Read More »ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಸಾಧ್ಯವಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರೇ, ಈಗ ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲೂ ಸಚಿವರಾಗಿದ್ದಾರೆ. ಅವರ ಕಾರ್ಯವೈಖರಿಯನ್ನು ಈಗಾಗಲೇ ನಾವು ನೋಡಿದ್ದೇವೆ. ಹೀಗಾಗಿ, ಈಗ ಅಧಿಕಾರ ಸ್ವೀಕರಿಸಿರುವ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದರು. ಈ ಹಿಂದೆ ಜಿಲ್ಲೆಯಲ್ಲಿ ಮಂತ್ರಿಗಳಿದ್ದವರು, ಜಿಲ್ಲೆಯ ಯಾವುದೇ ಸಮಸ್ಯೆಗೆ …
Read More »ಪಿನ್ ಕೇರ್ ಬ್ಯಾಂಕ ವತಿಯಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ಆಹಾರ ಧ್ಯಾನ ವಿತರಣೆ!
ಚಿಕ್ಕೋಡಿ: ಪಿನ್ ಕೇರ್ ಬ್ಯಾಂಕ ವತಿಯಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ಆಹಾರ ಧ್ಯಾನ ವಿತರಣೆ ಮತ್ತು covid-19 ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಚಿಕ್ಕೋಡಿ ತಾಲ್ಲೂಕಿನ ಕೊಡ್ನಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರವಾಹ ಪೀಡಿತ ಸದಸ್ಯರಿಗೆ ಪ್ರತಿ ವರ್ಷ್ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ ಈ ವರ್ಷವು ಕೂಡ ಸುಮಾರು ಎರಡು ನೂರು ಸದಸ್ಯರಿಗೆ ಆಹಾರ ಕಿಟ್ ಕೊಡುವುದಾಗಿ ಹೇಳಿದರು ಕೋವಿಡ್ ಜಾಗೃತಿ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದ ಬ್ಯಾಂಕ್ …
Read More »ಯಮಕನಮರಡಿ: ವಿವಿಧ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಪ್ರಿಯಾಂಕಾ ಜಾರಕಿಹೊಳಿ
ಯಮಕನಮರಡಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಬಿದೇವಾಡಿ, ಅಲದಾಳ, ಮಾನಗಾಂವ, ಮಸ್ತಿ, ನಾಗನೂರ ಕೆ.ಡಿ. ಹಾಗೂ ಮನಗುತ್ತಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು. ಹಾನಿಯ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ …
Read More »ಲೋಳಸೂರ ಸೇತುವೆ ಕಾಮಗಾರಿ ಪರಿಶೀಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ಕಾಮಗಾರಿಯನ್ನು ಇಂದು ಪರಿಶೀಲಿಸಿದರು. ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸತೀಶ ಅವರು, ಆದಷ್ಟು ಬೇಗ ಕಾಮಗಾರಿ ಮುಗಿಸಿ ಸೇತುವೆಯನ್ನು ಸಂಚಾರ ಮುಕ್ತಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ತಿಳಿಸಿದರು. ಕೆಲ ದಿನಗಳ ಹಿಂದೆ ಘಟಪ್ರಭಾ ನದಿ ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಸ್ತೆಯಲ್ಲಿರುವ ಲೋಳಸೂರ ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿತ್ತು. ಇದರಿಂದ ಮಹಾರಾಷ್ಟ್ರ, ವಿಜಯಪುರ ಸಂಚಾರ …
Read More »*ಸಚಿವ ಸಂಪುಟ ರಚನೆ; ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿರುವ ಕ್ಷೇತ್ರಗಳಿಗೆ ಅನ್ಯಾಯ*
ಮತ್ತೆ ಬಂಡಾಯ ಬಾವುಟ ಹಾರುತ್ತಾ? ಬೆಳಗಾವಿ: ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ ಪ್ರಸ್ತುತ 13 ಮಂದಿ ಬಿಜೆಪಿ ಶಾಸಕರಿದ್ದಾರೆ. ಅವರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರುವ ಭಾಗ್ಯ ಸಿಕ್ಕಿರುವುದು ಇಬ್ಬರಿಗೆ ಮಾತ್ರ. ಹಿರಿಯ ಶಾಸಕ ಹುಕ್ಕೇರಿಯ ಉಮೇಶ ಕತ್ತಿ ಹಾಗೂ ನಿಪ್ಪಾಣಿ ಕ್ಷೇತ್ರದಿಂದ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಶಶಿಕಲಾ ಜೊಲ್ಲೆ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಸ್ಥಾನಗಳೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ …
Read More »ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿಗೆ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ
ಗೋಕಾಕ: ಅಗಸ್ಟ್ 10 ರಂದು ನೇಪಾಳದಲ್ಲಿ ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಧನಸಹಾಯ ಮಾಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ದಡ್ಡಿ ಗ್ರಾಮದ ಸಚೀನ ಅಜೀತ ಸಾಲಗೋಡೆ, ಅಲದಾಳದ ಲಗಮೇಶ ಗಣಪತಿ ಸನದ ಎಂಬ ವಿದ್ಯಾರ್ಥಿಗಳಿಗೆ ರಾಹುಲ್ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ, ಸಹಾಯ ಒದಗಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ …
Read More »ಅಂತರಾಷ್ಟ್ರೀಯ ಕಬ್ಬಡ್ಡಿ ಕ್ರೀಡಾ ಪಟುವಿಗೆ ಯುವ ನಾಯಕಿ ಪ್ರೀಯಾಂಕಾ ಜಾರಕಿಹೊಳಿ ಪ್ರೋತ್ಸಾಹ.
ಗೋಕಾಕ : ನೇಪಾಳ ದೇಶದಲ್ಲಿ ದಿ.10/08/2020 ರಂದು ನಡೆಯಲಿರುವ 19 ವರ್ಷ ಒಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪಾ ರಾ ಹಂಜಿ, ಹಾಗೂ ತಪಸಿ ಗ್ರಾಮದ ಮಲ್ಲಪ್ಪಾ ನಾ ನಾಯಕ ಈ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರೀಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗು ಪ್ರಯಾಣ ಖರ್ಚುನ್ನು ನೀಡಿ ಸಹಾಯ ಮಾಡಿದರು. ಇಲ್ಲಿನ …
Read More »