Breaking News

ಬೆಳಗಾವಿ

ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಗೋಕಾಕ ಆರೋಪಿ ಬಂಧನ

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಪ್ರಮುಖ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸುವ ಮೂಲಕ ಪ್ರಕರಣದ ಜಾಲ ಭೇದಿಸಿದ್ದಾರೆ. ಗೋಕಾಕ ತಾಲೂಕಿನ ನಲ್ಲಾನಟ್ಟಿ ಗ್ರಾಮದ ಶಿವಲಿಂಗ್ ಪಾಟೀಲ ಎಂಬಾತ ಕಿಂಗ್ ಪಿನ್ ನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದನು.‌ ಕಳೆದ 10-12 ದಿನಗಳಿಂದ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕೆ ಪೊಲೀಸರು ಬಲೆ …

Read More »

ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ …

Read More »

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಇಲ್ಲಿಗೆ ಸಮೀಪದ ರಾಜಾಪೂರ ಗ್ರಾಮದಲ್ಲಿ 8.17 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, …

Read More »

ಸಮಾಜಕ್ಕೆ ಸಂತ ಸೇವಾಲಾಲ್ ರ ಕೊಡುಗೆ ಅಪಾರ : ರಾಹುಲ್ ಜಾರಕಿಹೊಳಿ

ಬೆಳಗಾವಿ: “ಸಂತ ಸೇವಾಲಾಲ್ ರು ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಸಮಾಜಕ್ಕೆ ಅವರ ಕೊಡುಗೆ ಅಪಾರ. ಅವರ ತತ್ವಾದರ್ಶನಗಳನ್ನು ಇಂದಿನ ಯುವಕರು ಅಳವಡಿಸಿಕೊಳ್ಳಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಹೇಳಿದರು. ತಾಲೂಕಿನ ಅಲತಗಾ ಖಡಿಮಶಿನ್ ಗ್ರಾಮದಲ್ಲಿ ಸಂತ ಸೇವಾಲಾಲ್ ಮಂಡಳಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ರ 282ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಸಂತ ಸೇವಾಲಾಲ್ ಅವರು ಮಹಾನ್ ದಾರ್ಶನಿಕರಾಗಿದ್ದರು. ಜೊತೆಗೆ ಮಹಾನ್ ಕಾಲಜ್ಞಾನಿಯೂ …

Read More »

ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ಇದರಿಂದ ತಳಮಟ್ಟದಿಂದ ಪಕ್ಷ …

Read More »

*ಗೋಕಾಕದಲ್ಲಿ ಸ್ಪರ್ಧಿಸುವುದಾದರೆ ಹೆಬ್ಬಾಳಕರಗೆ ಮೋಸ್ಟ್ ವೆಲ್‌ಕಮ್‌ : ಸಚಿವ ರಮೇಶ ಜಾರಕಿಹೊಳಿ.*

ಬೆಳಗಾವಿ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಯಸಿದರೆ ಗೋಕಾಕ ಕ್ಷೇತ್ರದಿಂದ ನಾನೇ ಸ್ಪರ್ಧಿಸುತ್ತೇನೆ’ ಎಂದು ಇಲ್ಲಿನ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಇಲ್ಲಿ ಶುಕ್ರವಾರ ಹೇಳಿದರು. ‘ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗ್ರಾಮೀಣ ಕ್ಷೇತ್ರ ಟಾರ್ಗೆಟ್ ಮಾಡುತ್ತಿದ್ದಾರೆಯೇ’ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಕ್ಷ್ಮಿ, ‘ನನಗೆ ಉತ್ತರ ಕೊಡಲು ಜಾಸ್ತಿ ಸಮಯ ಬೇಕಿಲ್ಲ. ಅವರ ಆರೋಪಕ್ಕೆ ನಾನೇನು ಮೌನವಾಗಿಲ್ಲ. 2023ರ ಚುನಾವಣೆಯಲ್ಲಿ ಜನರಿಂದಲೇ ಉತ್ತರ ಕೊಡಿಸಲು ಕಾಯುತ್ತಿದ್ದೇನೆ’ ಎಂದು …

Read More »

*ಬೆಳಗಾವಿ ಲೋಕಸಭೆ ಉಪಚುನಾವಣೆ ಅಭ್ಯರ್ಥಿಯನ್ನು ಹೈಕಮಾಂಡ್ ಘೋಷಿಸುತ್ತದೆ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ*

ಬೆಳಗಾವಿ: “ಕಾಂಗ್ರೆಸ್ ಪಕ್ಷ ಅಹಿಂದ ಪರವಾಗಿಯೇ ಇದೆ. ಮತ್ತೆ ಅಹಿಂದ ಹೋರಾಟ ಮಾಡುವ ಅಗತ್ಯ ಇಲ್ಲ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯಗಳನ್ನು ಒಳಗೊಂಡಿರುವ ಪಕ್ಷವಾಗಿದೆ. ಹೀಗಾಗಿ, ಅಹಿಂದ ಹೋರಾಟವನ್ನು ಮತ್ತೆ ಸಂಘಟಿಸುವ ಅವಶ್ಯಕತೆ ಇಲ್ಲ” ಎಂದರು. “ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದಲ್ಲಿ ರಾಜಕೀಯವೂ ನಡೆಯುತ್ತಿದೆ ಹಾಗೂ ಷಡ್ಯಂತ್ರವೂ ಇದೆ. ಅರ್ಹವಾಗಿ ಮೀಸಲಾತಿ …

Read More »

ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷ ಸಂಘಟಿಸಿ ಅಭ್ಯರ್ಥಿಯ ಗೆಲುವಿಗೆ ಪದಾಧಿಕಾರಿಗಳು ಶ್ರಮಿಸಬೇಕು!

ಗೋಕಾಕ: ಮುಂಬರುವ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಗುರುವಾರದಂದು ನಗರದ ಬಿಜೆಪಿ ಕಚೇರಿಯಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುಟ್ಟಿಸುವದರ ಜೊತೆಗೆ …

Read More »

ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ಸಿ ಕೆ ನಾವಲಗಿ ಆಯ್ಕೆ.

ಗೋಕಾಕ: ನಾಡಿನ ಹೆಸರಾಂತ ವಿಮರ್ಶಕರು, ಸಂಶೋಧಕರು, ವಿದ್ವಾಂಸರು ಡಾ ಸಿ ಕೆ ನಾವಲಗಿ ಅವರು ಗೋಕಾಕ ತಾಲೂಕಿನ ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶ್ರೀಯುತರು ನೂರಕ್ಕೂ ಹೆಚ್ಚು ಸಂಶೋಧನ ಹಾಗೂ ವಿಮರ್ಶೆ ಗ್ರಂಥ. ರಾಜ್ಯ ಹಾಗೂ ರಾಷ್ಟ್ರೀಯ ಸೇಮಿನಾರಗಳಲ್ಲಿ ಉಪನ್ಯಾಸ ನೀಡಿದ್ದಾರೆ. ನಿವೃತ್ತ ಕನ್ನಡ ಅಧ್ಯಾಪಕರು ಹಾಗೂ ಬೆಳಗಾವಿ ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ನಂದಾ ದೀಪವಾಗಿರು …

Read More »

*ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಗೋಕಾಕ ಇಂಟರ್ನ್ಯಾಷನಲ್ ಶೋಟೊಕಾನ್ ಕರಾಟೆ ಫೆಡರೇಶನ್ ಅತ್ಯುತ್ತಮ ಸಾಧನೆ*

Shito-Ryu SPORTS KARATE -DO ASSOCIATION ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 8ನೇ ರಾಷ್ಟ್ರಮಟ್ಟದ ಕರಾಟೆ ಮತ್ತು ಕುಂಗಫು ಮುಕ್ತ ಪಂದ್ಯಾವಳಿ (OPEN CHAMPIONSHIP) ಯಲ್ಲಿ ಇಂಟರ್ನ್ಯಾಷನಲ್ ಶೋಟೊಕಾನ್ ಕರಾಟೆ ಫೆಡರೇಶನ್. ಗೋಕಾಕ ಶಾಖೆಯ ವಿದ್ಯಾರ್ಥಿಗಳಾದ ವಿಷ್ಣು ಚಂದನವಾಲೆ KATA(FORM)=ಪ್ರಥಮ, ಚೇತನ ಮೆಳವಂಕಿ KUMITE (FIGHT)=ದ್ವಿತೀಯ, ಶಿವಾನಂದ ಕೋತೆಕರ KATA =ದ್ವಿತೀಯ, ಶರಣ ಪೂಜೇರಿ KUMITE =ದ್ವಿತೀಯ ಹಾಗೂ ಸುದೀಪ ಕಿತ್ತೂರ KUMITE=ದ್ವಿತೀಯ KATA = ದ್ವಿತೀಯ ವಿಭಾಗಗಳಲ್ಲಿ ವಿಜೇತರಾದ ಪ್ರಯುಕ್ತ …

Read More »