Breaking News

ಯಾದಗಿರಿ

ಸಂವಿಧಾನವೇ ದೇಶದ ಶ್ರೇಷ್ಠ ಗ್ರಂಥ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಯಾದಗಿರಿ: ಸಂವಿಧಾನವೇ ನಮ್ಮ ದೇಶದ ಶ್ರೇಷ್ಠ ಗ್ರಂಥವಾಗಿದ್ದು, ಕಾರಣ ಸಂವಿಧಾನವನ್ನು ಪ್ರತಿಯೊಬ್ಬರು ಅಧ್ಯಯನ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಜಿಲ್ಲೆಯ ವಡಗೇರಾ ಪಟ್ಟಣದ ಡಿ.ಡಿ.ಯು ಇಂಟರ್‌ ನ್ಯಾಶನಲ್‌ ಸ್ಕೂಲ್‌ ಆವರಣದಲ್ಲಿ ಹಮ್ಮಿಕೊಂಡಿದ್ದ ಡಿ.ಡಿ.ಯು ಶಿಕ್ಷಣ ಸಂಸ್ಥೆಯ ದಶಮಾನೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಬಿ.ಆರ್.‌ ಅಂಬೇಡ್ಕರ್‌ ಅವರು ಶಿಕ್ಷಣ ಪಡೆದರೆ ಹುಲಿಯ ಹಾಲು ಕುಡಿದಂತೆ ಎಂದು ಹೇಳಿದ್ದಾರೆ. ಆದರೆ ಅವರೇ ಹೇಳಿದಾಗೆ ಶಿಕ್ಷಣ …

Read More »

ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿ, ಕಾಲಿಗೆ‌ ಬಿದ್ದು ಬಿಟ್ಬಿಡಿ ಎಂದ!

ಯಾದಗಿರಿ: ಹನಿ ನೀರಾವರಿ ಯೋಜನೆಯಡಿ ಸಬ್ಸಿಡಿ ಹಣ ಬಿಡುಗಡೆ ಮಾಡಲು 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಎವರ್‌ ಗ್ರೀನ್‌ ಕಂಪನಿಯ ಸಬ್ಸಿಡಿ ಹಣ 1.77 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಮಲ್ಲಿಕಾರ್ಜುನ ಮೊದಲ ಕಂತಿನಲ್ಲಿ 5 ಸಾವಿರ …

Read More »

ಲಂಚ ಪ್ರಕರಣ: ಬಿಸಿಎಂ ಇಲಾಖೆಯ ಅಧಿಕಾರಿ ಎಸಿಬಿ ಬಲೆಗೆ.

ಸುರಪುರ: ಇಲ್ಲಿಯ ಬಿಸಿಎಂ ಇಲಾಖೆಯ ಅಧಿಕಾರಿ ಹಣಮಂತ (ಬಾಬು) ಅವರು ಗುರುವಾರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಲಂಚ ಪಡೆಯುತ್ತಿದ್ದಾಗ ಯಾದಗಿರಿಯ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಬೈಲಾಪುರ ಗ್ರಾಮದ ನಾಗರಾಜ ಮೇಟಿ ಅವರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಬಿಸಿಎಂ ಅಧಿಕಾರಿ ₹5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ₹2000 ಕೊಡುವಂತೆ ಒತ್ತಾಯಿಸಿದ್ದರು. ಹಣ ಪಡೆಯುತ್ತಿರುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಾಂತಗೌಡ ಅಯ್ಯಣ್ಣ …

Read More »

ಶ್ರೀ ಶಂಕರಾನಂದ ಮಹಾಸ್ವಾಮಿಗಳು ಲಿಂಗೈಕ್ಯ .

ಭಾವ ಪೂರ್ಣ ಶ್ರದ್ಧಾಂಜಲಿ ???????????????? ಗೋಕಾಕ : ಗೋಕಾಕ ಜಲಪಾತದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಶಂಕರಧಾಮ(ಯರಗಲ ಮಠ)ದ  ಶ್ರೀ ಶಂಕರಾನಾಂದ ಮಹಾಸ್ವಾಮಿಗಳು (೫೫) ಇವರು ಅನಾರೋಗ್ಯದ ಹಿನ್ನೆಲೆ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಸಂಸಾರಿಕ ಮಠದ ಸ್ವಾಮಿಜಿಗಳಾಗಿದ್ದ ಇವರು ಪತ್ನಿ, ಮಗ, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ. ಬುಧವಾರ ಸಾಯಂಕಾಲ ತಡವಾಗಿ ಮಠದಲ್ಲಿ ಕಾಕಡಾರತಿ ಪೂಜೆ ಸಲ್ಲಿಸಿ, ವಿಶ್ರಾಂತಿಗೆ ಜಾರುವ ಮುಂಚೆ ಕುಸಿದು ಬಿದ್ದಿದ್ದು, ಭಕ್ತರು ಸೇರಿ ಗೋಕಾಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. …

Read More »

ಯಾದಗಿರಿ : ಲಂಚ ಪಡೆಯುತ್ತಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಎಸಿಬಿ ಬಲೆಗೆ.

ಯಾದಗಿರಿ: ಗುತ್ತಿಗೆ ಆಧಾರದ ನರ್ಸ್ ನೇಮಕಾತಿಗೆ ಬಂದಿದ್ದ ಅಭ್ಯರ್ಥಿಗಳಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಡಿಎಚ್ಓ ಎಂ ಎಸ್ ಪಾಟೀಲ ಅವರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.ಗುತ್ತಿಗೆ ಆಧಾರದ ನರ್ಸ್ ನೇಮಕಾತಿಗೆ ಬಂದಿದ್ದ ಅಭ್ಯರ್ಥಿಗಳಿಂದ 30 ಸಾವಿರ ಲಂಚಕ್ಕೆ ಎಂ ಎಸ್ ಪಾಟೀಲ ಬೇಡಿಕೆ ಸಲ್ಲಿಸಿದ್ದರು. ನಂತರ 25 ಸಾವಿರಕ್ಕೆ ಒಪ್ಪಿ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳ ಸಿಕ್ಕಿ ಬಿದ್ದಿದ್ದಾರೆ. ಡಿಎಚ್ಒ …

Read More »