ಗೋಕಾಕ : ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಅರಭಾವಿ ಮಂಡಲ ಭಾರತೀಯ ಜನತಾ ಪಾರ್ಟಿ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಸಂವಿಧಾನ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ …
Read More »ಸಂವಿಧಾನ ಪಾಲನೆ, ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ : ‘ ಸಂವಿಧಾನ ಪಾಲನೆ ಹಾಗೂ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈಗಾಗಲೇ ಸಂವಿಧಾನದ ಬಗ್ಗೆ ಸಂಪೂರ್ಣ ಅರಿವು ಮೂಡಿಸುವ ಕಾರ್ಯ ನಡೆದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ 71ನೇ ಸಂವಿಧಾನದ ಸಮರ್ಪಣಾ ದಿನಾಚರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈಗಾಗಲೇ ಘಟಪ್ರಭಾ ಸೇವಾದಳ ಕೇಂದ್ರದಲ್ಲಿ ಹಾಗೂ ಕಾಂಗ್ರೆಸ್ ಭವನದಲ್ಲಿ ನಿರಂತರ ತರಬೇತಿಗಳನ್ನು ನಡೆಸಲಾಗುತ್ತಿದೆ. ಜನರು …
Read More »ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ : ಕೋವಿಡ್ ಸೋಂಕಿನಿಂದ ಇತ್ತಿಚೇಗೆ ನಿಧನರಾದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದರು. ಅಹ್ಮದ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಮೌನಾಚರಣೆ ಮಾಡಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಮಾಡಿದ ಕಾರ್ಯಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್, ಮುಂಚೂಣಿ ಘಟಕ ಅಧ್ಯಕ್ಷರು, ಕಾಂಗ್ರೆಸ್ …
Read More »ಸವದತ್ತಿಯ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಮುಜರಾಯಿ ಇಲಾಖೆಯ ದತ್ತಿ ಸಮೀಕ್ಷಾ ಅಧಿಕಾರಿ ಕೆ. ಜಯಪ್ರಕಾಶ್ ಭೇಟಿ
ಸವದತ್ತಿ: ಮುಜರಾಯಿ ಇಲಾಖೆಯ ದತ್ತಿ ಸಮೀಕ್ಷಾ ಅಧಿಕಾರಿ ಕೆ. ಜಯಪ್ರಕಾಶ್ ಅವರು ಸವದತ್ತಿಯ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿದರು. ದೇವಸ್ಥಾನದ ಜಮೀನು, ಜಮೀನಿನ ದಾಖಲೆಗಳ ನಿರ್ವಹಣೆ, ಸಮಚ್ಚಯಗಳ ಪ್ರಾಂಗಣದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಹಾಗೂ ಭಕ್ತರ ಧಾರ್ಮಿಕ ಕೈಂಕರ್ಯಗಳಿಗೆ ಅನುಕೂಲವಾಗುವಂತೆ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಚಿಸಿದರು. ದೇವಸ್ಥಾನಕ್ಕೆ ಸೇರಿದ ಒಟ್ಟು 1,146 ಎಕರೆ 25 ಗುಂಟೆ ಜಾಗವಿದೆ. ಇದರಲ್ಲಿ ಕಂದಾಯ ಹಾಗೂ ಭೂಮಾಪನಾ ಇಲಾಖೆ ದಾಖಲೆಗಳಲ್ಲಿ …
Read More »ವಿವಿಧ ಇಲಾಖೆಗಳ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರ ನೇಮಕ
ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರು ಹಾಗೂ ನಿರ್ದೇಶಕರನ್ನು ನಾಮನಿರ್ದೇಶನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳವಾರ 33 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮುಂದುವರಿದ ಭಾಗವಾಗಿ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರು ಹಾಗೂ ನಿರ್ದೇಶಕರು ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ವ್ಯಾಪ್ತಿಯಲ್ಲಿ ಬರುವ 5 ನಿಗಮಗಳಿಗೆ ನಾಮನಿರ್ದೇಶನಗೊಂಡ ಸದಸ್ಯರನ್ನು ಗಮನಿಸುವುದಾದರೆ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕರ್ನಾಟಕ ದ್ರಾಕ್ಷಾರಸ …
Read More »ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು,ಸ್ಪರ್ಧೆಗೆ ವೈಯಕ್ತಿಕವಾಗಿ ನನಗೆ ಆಸಕ್ತಿ ಇಲ್ಲ: ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹೇಳಿಕೆ ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ಆಗಲಿ,
ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ ಬರುತ್ತಿರುವ …
Read More »ಸುವರ್ಣ ಸೌಧದ 500 ಮಿಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ: ಡಾ.ಕೆ.ತ್ಯಾಗರಾಜನ್
ಬೆಳಗಾವಿ: ಹಿರೇಬಾಗೆವಾಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಸುವರ್ಣಸೌಧದ ಬಳಿ ಕೆಲವು ಸಂಘ-ಸಂಸ್ಥೆಯವರು ಪ್ರತಿಭಟನಾಕಾರರು ಸಣ್ಣಪುಟ್ಟ ವಿಷಯಕ್ಕೆ ಪದೆ ಪದೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ ಮಾಡುತಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ತಡೆಗಟ್ಟಲು ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ. ನ.24 ರಂದು 7 ಗಂಟೆಯಿಂದ ಜ.24-2021 ರಂದು ಮಧ್ಯರಾತ್ರಿಯವರೆಗೆ ಜಾರಿಗೆ ಬರುವಂತೆ ಸಿ.ಆರ್.ಪಿ.ಸಿ. 1973 …
Read More »ನಗರಸಭೆ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು ನವೆಂಬರ್ .24.ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಕುರಿತಂತೆ ಇತ್ತೀಚೆಗೆ ಹೈಕೋರ್ಟ್ ನ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ದ್ವಿಸದಸ್ಯ ಪೀಠ ಇಂದು ತಡೆ ನೀಡಿದೆ. ಸರ್ಕಾರ ನೀಡಿದ್ದ ಮೀಸಲಾತಿ ಪಟ್ಟಿಯಲ್ಲಿ ಲೋಪವಿದ್ದು ಅದನ್ನು ರದ್ದುಪಡಿಸಬೇಕೆಂದು ಕೆಲ ಪುರಸಭೆಯ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯಪೀಠ ಪುರಸ್ಕರಿಸಿ 4ವಾರದೊಳಗೆ ಹೊಸ ಮೀಸಲಾತಿ ಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು .ಇದನ್ನು ಪ್ರಶ್ನಿಸಿ …
Read More »ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ,ಒಂದೇ ಕುಟುಂಬದ ನಾಲ್ವರು ಮೃತ.
ರಾಯಚೂರು: ಧಾರವಾಡದ ಅಣ್ಣಿಗೇರಿ ಬಳಿಯ ಕೊಂಡಿಕೊಪ್ಪ ಕ್ರಾಸ್ ಬಳಿ ಬುಧವಾರ ನಸುಕಿನಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರೆಲ್ಲರೂ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ವಿಠ್ಠಲ ನಗರದ ನಿವಾಸಿಗಳು. ಸಣ್ಣ ಗಂಗಣ್ಣ (56), ಪತ್ನಿ ಗಂಗಮ್ಮ (50), ಸಹೋದರ ಈರಣ್ಣ(40), ಮಗ ಹನುಮಂತ (20) ಮೃತರು. ಮಗಳು ಲಕ್ಷ್ಮೀ (18) ಮತ್ತು ಚಾಲಕ ಈರಣ್ಣ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. …
Read More »ಸಿ.ಪಿ.ಯೋಗೇಶ್ವರ್ ಪರ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್
ಬೆಂಗಳೂರು: ನನಗೆ ಸಿ.ಪಿ.ಯೋಗೇಶ್ವರ್ ತುಂಬಾ ಪರಿಚಯ ಹಾಗೂ ಆತ್ಮೀಯರು. ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ. ಕೊನೆಯವರೆಗೂ ಅವರ ಪರ ಬ್ಯಾಟಿಂಗ್ ಮಾಡುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟಿದ್ದು. ಪಕ್ಷದ ಕೆಲವು ಶಾಸಕರು ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಸದಾಶಿವ ನಗರದ ತಮ್ಮ …
Read More »