Breaking News

ಜಿಲ್ಲೆ

ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಪ್ರಸಕ್ತ ವರ್ಷ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : “ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಸಾಲಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದೆ”  ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು  ಹೇಳಿದರು. ಕಳೆದ ಗುರುವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿದ ಬಳಿಕ,  ಮಾತನಾಡಿದ ಅವರು,ಕಾರ್ಖಾನೆಗೆ ಉತ್ತಮ ಇಳುವರಿ ಕಬ್ಬನ್ನು …

Read More »

ನವರಾತ್ರಿ ಉತ್ಸವ;ಶ್ರೀ ದುರ್ಗಾಮಾತಾ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ವಿಶೇಷ ಪೂಜೆ!

ಗೋಕಾಕ: ನವರಾತ್ರಿ ಉತ್ಸವದ ಕೊನೆಯ ದಿನವಾದ ಶುಕ್ರವಾರದಂದು ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ಕಮೀಟಿ ಹಾಗೂ ದುರ್ಗಾಮಾತಾ ದೌಡ್ ಸಂಘಟಕರು ಹಮ್ಮಿಕೊಂಡ ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಶ್ರೀ ದುರ್ಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ಕಮೀಟಿ ಹಾಗೂ ದುರ್ಗಾಮಾತಾ ದೌಡ್ ಸಂಘಟಕರು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಸತ್ಕರಿಸಿದರು. ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, …

Read More »

ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!

ಗೋಕಾಕ: ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿಯನ್ನು ಆಚರಿಸುತ್ತಿದ್ದು, ನಮ್ಮಲ್ಲಿರುವ ದುಷ್ಟ ಆಲೋಚನೆ ಹಾಗೂ ದುಶ್ಚಟಗಳಿಂದ ದೂರವಿದ್ದು, ದೇವಿಯ ಕೃಪೆಗೆ ಪಾತ್ರರಾಗೋಣ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಶುಕ್ರವಾರದಂದು ನಗರದ ಮರಾಠಗಲ್ಲಿಯಲ್ಲಿ ನವರಾತ್ರಿ ಉತ್ಸವ ಮಂಡಳಿಯವರು ಆಯೋಜಿಸಿದ್ದ ನವರಾತ್ರಿ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನವಿದೆ. ಅವುಗಳು ಪ್ರೀತಿ ವಿಶ್ವಾಸದ ಸಂದೇಶವನ್ನು ನಮಗೆ ನೀಡುತ್ತವೆ. ಇವುಗಳ ಆಚರಣೆಯಿಂದ ನಾವೆಲ್ಲರೂ ದೇವರ …

Read More »

ಸತೀಶ ಶುಗರ್ಸ್: ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ಗೋಕಾಕ: ಸಮೀಪದ ಹುಣಶ್ಯಾಳ ಪಿ.ಜಿ. ಯ ಸತೀಶ ಶುಗರ್ಸ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ 2021-22ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಶುಕ್ರವಾರ ಜಿಲ್ಲೆಯ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧಿಕಾರಿ ವರ್ಗದವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಸಂಸ್ಥೆಯ ಚೇರಮನ್‍ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಪ್ರದೀಪಕುಮಾರ ಇಂಡಿ ಅವರು ಮಾತನಾಡಿ, ಜಿಲ್ಲೆಯ ಸತೀಶ ಶುಗರ್ಸ ಕಾರ್ಖಾನೆಯ ರೈತ ಬಾಂಧವರು ಪ್ರಸಕ್ತ ಹಂಗಾಮಿನ ಮೊದಲ ದಿನವೇ 1253 …

Read More »

ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ.!

ಗೋಕಾಕ: ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಶಾಂತಿ, ನೆಮ್ಮದಿ ಎಂಬ ಫಲ ಸಿಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ಕುರಬರ ದಡ್ಡಿಯ ಶ್ರೀ ವಿಠ್ಠಲ ದೇವರ ಹಾಗೂ ಮುರಸಿದ್ದೇಶ್ವರ ದೇವಸ್ಥಾನದ ಜಾತ್ರಾಮಹೋತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು, ಜಾತ್ರಾ ಕಮೀಟಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಭಕ್ತಿ ಎಂಬುದು ಮನುಷ್ಯನಲ್ಲಿ ಇದ್ದರೆ ಸಾಕು. ಪ್ರತಿ ದಿನ …

Read More »

ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಬೆಳಗಾವಿ: ಹೊನಗಾ ಗ್ರಾಮದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿರುವ ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಚಾಲನೆ ನೀಡಿದರು. ಮೂರ್ತಿ ಪ್ರತಿಷ್ಠಾಪಿಸಲು ಕಟ್ಟೆ ಹಾಗೂ ಸುತ್ತಲೂ ಉದ್ಯಾನ ನಿರ್ಮಿಸಲಾಗುತ್ತಿದ್ದು, ಇದಕ್ಕೆ ರಾಹುಲ್ ಅವರು ಇಂದು ಪೂಜೆ ನೆರವೇರಿಸಿದರು. ಈ ಕಾಮಗಾರಿಗೆ ಕೆಲವು ತಿಂಗಳ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದ್ದರು. ಕಾಮಗಾರಿಗೆ ಈಗಾಗಲೇ ಅಡಿಪಾಯ ಹಾಕಲಾಗಿದ್ದು, …

Read More »

ತ್ವರಿತಗತಿಯಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಗುತ್ತಿಗೆದಾರರು, ಅಧಿಕಾರಿಗಳಿಗೆ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಅಲತಗಾ ಗ್ರಾಮದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಲತಗಾ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ, ಮೂರು ಅಂಗನವಾಡಿಗಳ ದುರಸ್ತಿ ಕಾಮಗಾರಿ ಹಾಗೂ ಸರ್ಕಾರಿ ಶಾಲೆಯ ಕೊಠಡಿಗಳ ನಿರ್ಮಾಣ ಕಾಮಗಾರಿ ಸೇರಿದಂತೆ ಒಟ್ಟು 35 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಸತೀಶ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ …

Read More »

ಒಂದು ವರ್ಷದಿಂದ ನಗರದ ಅಭಿವೃದ್ಧಿ ಕುಂಠಿತ; ಬಿಜೆಪಿ ಶಾಸಕರೇ ಸ್ಪಷ್ಟೀಕರಣ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: ಬಿಜೆಪಿಯ ಇಬ್ಬರು ಶಾಸಕರ ಅಸಹಕಾರದಿಂದ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಈ ಬಗ್ಗೆ ಶಾಸಕರೇ ಸ್ಪಷ್ಟೀಕರಣ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿಲ್ಲ. ಪದೇ ಪದೇ ಸಭೆ ಮುಂದಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿಯ ಇಬ್ಬರು ಶಾಸಕರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಭಿವೃದ್ಧಿ ಕುಂಠಿತ: ಸ್ಥಳೀಯ ಇಬ್ಬರು ಶಾಸಕರು ಅಧ್ಯಕ್ಷರಿಗೆ …

Read More »

ಪೂರ್ವಭಾವಿ ಸಭೆ: ಕರಾಳ ದಿನಾಚರಣೆಗೆ ಅವಕಾಶ ಇಲ್ಲ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ. ಅದೇ ರೀತಿ ಸರಕಾರದ ಮಾರ್ಗಸೂಚಿ ಹಾಗೂ ಕಾನೂನು ಚೌಕಟ್ಟಿನಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಅ.12) ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರಾಳ ದಿನ ಆಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ. ರಾಜ್ಯೋತ್ಸವ ಮೆರವಣಿಗೆಗೆ …

Read More »

ಬಿಜೆಪಿ ಶಾಸಕರೇ ಗೈರು: ಮತ್ತೆ ಮುಂದಕ್ಕೆ ಹೋಯ್ತು ಬುಡಾ ಮೀಟಿಂಗ್!

ಬೆಳಗಾವಿ: ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ಆಗಬೇಕಿದ್ದ ಬುಡಾ ಮೀಟಿಂಗ್ ಬಿಜೆಪಿ ಶಾಸಕರು ಮತ್ತು ಬುಡಾ ಅಧ್ಯಕ್ಷರ ನಡುವಿನ ಹಗ್ಗಜಗ್ಗಾಟದಿಂದ ಮತ್ತೆ ಮುಂದಕ್ಕೆ ಹೋಗಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ 4ನೇ ಸಭೆಯನ್ನು ಸೋಮವಾರ ಕರೆಯಲಾಗಿತ್ತು. ಕಳೆದ ಮೂರು ಸಭೆಗೆ ಗೈರಾಗಿದ್ದ ನಗರ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಮತ್ತೆ ಗೈರಾಗಿದ್ದರು. ಸತೀಶ ಜಾರಕಿಹೊಳಿ- ಹೆಬ್ಬಾಳಕರ್ ಭಾಗಿ: ಕಾಂಗ್ರೆಸ್ ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ …

Read More »