Breaking News

ಜಿಲ್ಲೆ

ಹಳ್ಳೂರ : ಗಾಂಧಿನಗರ-ಬಸವನಗರ ರಸ್ತೆ ನಿರ್ಮಾಣಕ್ಕೆ 75 ಲಕ್ಷ ರೂ.- ಶಾಸಕ ಬಾಲಚಂದ್ರ ಜಾರಕಿಹೊಳಿ*

ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದ0ದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ …

Read More »

ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶ!

ಮಂಡ್ಯ: ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದಾರೆ. ಕೆಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾದೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಮಾದೇಗೌಡರು ಶಾಸಕರಾಗಿ, ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು. ಕಾವೇರಿ ನದಿ ನೀರಿನ ಹೋರಾಟಗಳ ರೂವಾರಿಯಾಗಿದ್ದ ಅವರು, ನೀರು ಬಿಡುವ ವಿಚಾರದಲ್ಲಿ ಸರ್ಕಾರದ ನಿಲುವು ವಿರೋಧಿಸಿ ಸಂಸದ ಸ್ಥಾನಕ್ಕೆ …

Read More »

ಮನೆ ಕಳವು ಮಾಡಿದ್ದ ಯುವಕನ ಬಂಧನ!

  ಕಲಬುರ್ಗಿ: ಇಲ್ಲಿನ ಅನ್ನಪೂರ್ಣೇಶ್ವರಿ, ಭಾಗ್ಯ ನಗರ ಕಾಲೊನಿಗಳಲ್ಲಿ ಮನೆ ಕಳವು ಮಾಡಿದ್ದ ಮಹಾರಾಷ್ಟ್ರದ ಯುವಕನನ್ನು ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪರಬಾನಿ ಜಿಲ್ಲೆಯ ತುರುತ್ತರಿ ಖಯ್ಯುಮ ಅಲಿಯಾಸ್ ನಯ್ಯುಮ್ ಬೇಗ್ ಬಂಧಿತ ಆರೋಪಿ. ಆತನಿಂದ ₹ 3.10 ಲಕ್ಷ ಮೌಲ್ಯದ 80 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ನೃಪತುಂಗ ಕಾಲೊನಿಯಲ್ಲಿ ಸಂಶಯಾಸ್ಪದವಾಗಿ ಕೈಯಲ್ಲಿ ರಾಡು ಹಿಡಿದು ತಿರುಗಾಡುತ್ತಿದ್ದಾಗ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದಾರೆ. …

Read More »

ಪೋಷಕರೆ ಮಕ್ಕಳ ಕೈಗೆ‌ ಮೊಬೈಲ್ ಕೊಡುವ ಮುನ್ನ ಎಚ್ಚರ! ಈ ಘಟನೆ ನೋಡಿ.

ಹಾವೇರಿ: ಪೋಷಕರೆ ಮಕ್ಕಳ ಕೈಗೆ‌ ಮೊಬೈಲ್ ಕೊಡುವ ಮುನ್ನ ಎಚ್ಚರ ವಹಿಸಿ. ಯಾವಾಗಲೂ ಮೊಬೈಲ್ ನಲ್ಲಿ ಗೇಮ್ ಆಡುವ ಹುಚ್ಚಿಗೆ ಬಿದ್ದ ಬಾಲಕನೊಬ್ಬ ಮೂರು ಬೆರಳನ್ನೇ ಕಳೆದುಕೊಂಡಿದ್ದಾನೆ. ಮೊಬೈಲ್ ಬ್ಲಾಸ್ಟ್ ಆಗಿದ್ದರಿಂದ ಬಾಲಕನ ಬಲಗೈಯಲ್ಲಿನ ಮೂರು ಬೆರಳುಗಳೇ ಕಟ್ ಆಗಿವೆ. ಬ್ಲಾಸ್ಟ್ ಆಗಿದ್ದ ಹೊಡೆತಕ್ಕೆ ಬಾಲಕನ ಮೈಮೇಲೆ ಗಾಯಗಳಾಗಿದ್ದು, ಕಣ್ಣಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಮನೆಯಲ್ಲಿ ಚಾರ್ಜ್ ಹಾಕಿದ್ದ ಮೊಬೈಲ್ ನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಾರ್ತಿಕ …

Read More »

ಪ್ರಾದೇಶಿಕ ಆಯುಕ್ತರ ಕಚೇರಿ ರದ್ದುಗೊಳಿಸದಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ.

ಬೆಳಗಾವಿ: ಪ್ರಾದೇಶಿಕ ಆಯುಕ್ತರ ಕಚೇರಿ ಗಳನ್ನು ರದ್ದುಗೊಳಿಸದಂತೆ ಆಗ್ರಹಿಸಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ನೇತೃತ್ವದಲ್ಲಿ ಕನ್ನಡ ಹೋರಾಟಗಾರರು ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ‘ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ನೇತೃತ್ವದ ಆಡಳಿತ ಸುಧಾರಣೆ ಸಮಿತಿಯು, ರಾಜ್ಯದ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸಿ ರಾಜ್ಯ ಮಟ್ಟದಲ್ಲಿ ಕಂದಾಯ ಸಚಿವಾಲಯ ರಚಿಸಬೇಕೆಂಬ ಶಿಫಾರಸು ಸಂವಿಧಾನದ ಮೂಲ ತತ್ವವಾದ ಅಧಿಕಾರ ವಿಕೇಂದ್ರೀಕರಣದ ವಿರೋಧಿಯಾಗಿದೆ. ಇಂತಹ …

Read More »

ನೂತನ ಆಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿ

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ  ಜನ ಸೇವೆಗೆ ಸಿದ್ಧವಾಗಿರುವ ಹೊಸ ಆಂಬ್ಯುಲೆನ್ಸ್ ವಾಹನಗಳಿಗೆ ಚಾಲನೆ ನೀಡಿದರು. 2020-2021 ನೇ ಸಾಲಿನ ಪರಿಶಿಷ್ಟ ಪಂಗಡದ (ಎಸ್.ಟಿ.ಪಿ) ಅಡಿಯ ಅನುವಾನದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಇಸ್ಲಾಂಪೂರ, ಬಸಾಪುರ  ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಹುಕ್ಕೇರಿ ತಾಲೂಕಾ ವೈದ್ಯಾಧಿಕಾರಿ ಡಾ.ಉದಯ ಕುಡಚಿ, ಜಿ.ಪಂಚಾಯ್ತಿ ಸದಸ್ಯ ಮಂಜುನಾಥ್ ಪಾಟೀಲ್, ಸೊಮನಗೌಡಾ ಪಾಟೀಲ್, ಪಜಲ್ ಮಕಾಂದರ, …

Read More »

ಅಭಿವೃದ್ಧಿ ಕಾಮಗಾರಿಗಳು ಕಳಪೆ ಎಂದು ಕಂಡುಬಂದಲ್ಲಿ ಸಾರ್ವಜನಿಕರು ತಡೆ ನೀಡಬೇಕು.

ಮುಗಳಖೋಡ : ‘ಪಟ್ಟಣದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳು ಕಳಪೆ ಎಂದು ಕಂಡುಬಂದಲ್ಲಿ ಸಾರ್ವಜನಿಕರು ತಡೆ ನೀಡಬೇಕು. ಎಲ್ಲ ಕೆಲಸಗಳಿಗೂ ಅಡ್ಡಿಪಡಿಸಬಾರದು’ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ ಸಲಹೆ ನೀಡಿದರು. ‘ಪುರಸಭೆ ವತಿಯಿಂದ ಕೈಗೊಂಡಿರುವ ಬಸ್ ನಿಲ್ದಾಣ ಸೇರಿದಂತೆ ವಿವಿಧ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಂಡಿಲ್ಲ. ಗುಣಮಟ್ಟವೂ ಸರಿ ಇಲ್ಲ’ ಎಂಬ ಸಾರ್ವಜನಿಕರ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಇಲ್ಲಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು. ‘ಜನರ ಸಮಸ್ಯೆಗಳನ್ನು …

Read More »

ಕಲೆಯನ್ನು ಉಳಿಸಿ ಬೆಳೆಸುವುದು ಪ್ರತಿಯೋಬ್ಬರ ಕರ್ತವ್ಯ: ಸತೀಶ್ ಜಾರಕಿಹೊಳಿ.

ಗೋಕಾಕ: ಕಲೆಯನ್ನು ಉಳಿಸಿ ಬೆಳೆಸುವುದು ಪ್ರತಿಯೋಬ್ಬರ ಕರ್ತವ್ಯವಾಗಿದೆ ಎಂದು ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು ಶನಿವಾರದಂದು ನಗರದ ಜ್ಞಾನ ಮಂದಿರದಲ್ಲಿ ಇಲ್ಲಿನ ಆಶಾ ಕಿರಣ ಕಲಾ ಟ್ರಸ್ಟ್ ವತಿಯಿಂದ ಗೋಕಾವಿ ನಾಡಿನ ವೃತ್ತಿ ರಂಗಭೂಮಿ ಹಿರಿಯ ಕಲಾವಿದರಾಗಿದ್ದ ದಿವಂಗತ ಬಿ.ಆರ್.ಅರಶಿನಗೋಡಿ ಹಾಗೂ ದಿವಂಗತ ಬಸವಣ್ಣೆಪ್ಪಾ ಹೋಸಮನಿ ಇವರ ರಂಗ ಸ್ಮರಣೋತ್ಸವ ನಿಮಿತ್ತ ಉಪನ್ಯಾಸ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು . …

Read More »

ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಹೊರ ಹಾಕಿದ ತಹಶೀಲ್ದಾರ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …

Read More »

ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಜ್ಜಾಗಿ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಗೋಕಾಕ :  ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ  ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಮಗೂ ಪ್ರವಾಹ ಭೀತಿ …

Read More »