Breaking News

ನವದೆಹಲಿ

ಕೇಂದ್ರ ಸಚಿವ ಸುರೇಶ ಅಂಗಡಿ ಅಕಾಲಿಕ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ.

ನನ್ನ ಆತ್ಮೀಯ ಸ್ನೇಹಿತರಾಗಿದ್ದ ಕೇಂದ್ರ ಸಚಿವ *ಸುರೇಶ್ ಅಂಗಡಿ* ಅವರ ಹಠಾತ್ ನಿಧನ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ. ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ನಾವಿಬ್ಬರೂ ಪರಸ್ಪರ ಚರ್ಚೆ ಮಾಡಿ ಕೆಲಸ ಮಾಡುತ್ತಿದ್ದೆವು. ನಾನು ಭಾರತೀಯ ಜನತಾ ಪಾರ್ಟಿಯನ್ನು ಸೇರಲು ಅಂಗಡಿಯವರೂ ಪ್ರಮುಖ ಕಾರಣಕರ್ತರು. ಕೋವಿಡ್ ಸೋಂಕು ವಿಪರೀತವಾಗಿ ಹರಡಿದ್ದ ಸಂದರ್ಭದಲ್ಲಿಯೂ ನಾನು ಮತ್ತು ಅಂಗಡಿ ಹಲವು ಬಾರಿ ಟಾಸ್ಕ್ ಫೋರ್ಸ್ ಸಭೆ ನಡೆಸಿ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದ್ದೆವು. ಅಗಲಿದ …

Read More »

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ!

ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ …

Read More »

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಯುಜಿಸಿ ಪ್ರಸ್ತಾವಿಕ ಮಾರ್ಗಸೂಚಿ ಪ್ರಕಟ…!

ನವದೆಹಲಿ : ಕೋವಿಡ್ 19 ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಶೈಕ್ಷಣಿಕ ವರ್ಷದ ಕಾಲೇಜು ತರಗತಿ ನವೆಂಬರ್ 1ರಿಂದ ಶುರುವಾಗಲಿದೆ. ಈ ಸಂಬಂಧ ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್(UGC) ಪ್ರಸ್ತಾವಿತ ಮಾರ್ಗಸೂಚಿ ಪ್ರಕಟಿಸಿದೆ. ಇದರಂತೆ, ಅಕ್ಟೋಬರ್ 31ರ ಒಳಗೆ ಪ್ರಥಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ತರಗತಿಗಳ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ನವೆಂಬರ್ 1ರಿಂದ ಕಾಲೇಜು ತರಗತಿಗಳು ಪ್ರಾರಂಭವಾಗಲಿದ್ದು, ಮೊದಲ ಸೆಮಿಸ್ಟರ್ ಪರೀಕ್ಷೆಗಳು ಮಾರ್ಚ್ 8 ರಿಂದ 23ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ …

Read More »

ಮೇಕೆದಾಟು ; ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ‌*

ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಕೇಂದ್ರ ಜಲಶಕ್ತಿ ಸಚಿವರಾದ *ಶ್ರೀ ಗಜೇಂದ್ರ ಸಿಂಗ್ ಶೇಖಾವತ್* ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ …

Read More »

ಎಐಸಿಸಿ ಅಧ್ಯಕ್ಷ ಸ್ಥಾನ: ಖರ್ಗೆ, ಸಿದ್ದರಾಮಯ್ಯ ಟ್ವೀಟರ ವಾರ್!

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷಕ್ಕೆ ಇವತ್ತು ಮಹತ್ವದ ದಿನ. ಎಐಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಾಯಕತ್ವ ಬದಲಾವಣೆಗೆ ಪತ್ರ ಬರೆದು ಕಾಂಗ್ರೆಸ್ ನಾಯಕರೇ ಆಗ್ರಹಿಸಿದ್ದರು. ಮತ್ತೊಂದೆಡೆ ಬಜೆಪಿಯ ಎದುರು ರಾಜಕೀಯ ಮಾಡಲು ಯುವ ನಾಯಕತ್ವಕ್ಕೆ ಅವಕಾಶ ಒಡಬೇಕು ಎಂಬ ಒತ್ತಡಗಳು ಪಕ್ಷದಲ್ಲಿ ಹೆಚ್ಚಾಗಿವೆ. ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಮಹತ್ವದ ತೀರ್ಮಾನ …

Read More »

ಆನ್ ಲೈನ್ ಶಿಕ್ಷಣ: ವಿದ್ಯಾರ್ಥಿಗಳ ತೊಂದರೆ ಕೇಳುವವರಾರು? ಎನ್ ಸಿಇಆರ್ ಟಿ ಸಮೀಕ್ಷೆ ಹೇಳಿದ್ದೇನು?

ನವದೆಹಲಿ: ಕೋವಿಡ್-19ನಿಂದಾಗಿ ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ತಮ್ಮ ಕೆಲಸ ಕಾರ್ಯಗಳನ್ನು ಮನೆಯಿಂದಲೇ ಮಾಡುತ್ತಲಿದ್ದರೆ, ಇನ್ನು ಕೆಲವರು ಎಲ್ಲಾ ಸುರಕ್ಷತಾ ಕ್ರಮದೊಂದಿಗೆ ಕಚೇರಿ ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ತೆರಳುತ್ತಿರುವರು. ಆದರೆ ಕೊರೋನಾದಿಂದ ದೇಶದ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಮಟ್ಟದ ಪೆಟ್ಟು ಬಿದ್ದಿದೆ. ಜನರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಹೆದರುತ್ತಿರುವುದು ಒಂದೆಡೆಯಾದರೆ, ಸರ್ಕಾರ ಕೂಡ ಶಾಲೆ, ಕಾಲೇಜುಗಳನ್ನು ತೆರೆಯಲು ಇದುವರೆಗೆ ಅನುಮತಿ ನೀಡಿಲ್ಲ. ಹೀಗಾಗಿ ಕೆಲವೊಂದು ರಾಜ್ಯಗಳಲ್ಲಿ ಆನ್ …

Read More »

ನೀರನ್ನು ಸದ್ಬಳಕೆ‌ ಮಾಡುವಂತಹಾ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ರೂಪಿಸುವಂತೆ- ಸಚಿವ ರಮೇಶ್ ಜಾರಕಿಹೊಳಿ‌ ಮನವಿ !!

ನವದೆಹಲಿ: ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ *ಶ್ರೀ ಜಗತ್ ಪ್ರಕಾಶ್ ನಡ್ಡಾ* ಅವರಿಗೆ ಮನವಿ ಮಾಡಿದರು. ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಯೋಜನೆಗಳನ್ನು …

Read More »

ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆ

ನವದೆಹಲಿ : ಇಂದು ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ದ್ವಿತೀಯ ವಾರ್ಷಿಕ ಪುಣ್ಯಸ್ಮರಣೆ. ರಾಜಧಾನಿ ದೆಹಲಿಯ ಶಕ್ತಿಸ್ಥಳದಲ್ಲಿರುವ ಸುದೈವ್ ಅಟಲ್ ಸ್ಮಾರಕಕ್ಕೆ ತೆರಳಿದ ಗಣ್ಯಾತಿಗಣ್ಯರು ಮಾಜಿ ಪ್ರಧಾನಿಗೆ ಪುಷ್ಪ ನಮನ ಸಲ್ಲಿಸಿದರು. ದೇಶದ ಪ್ರಗತಿಗಾಗಿ ಅಟಲ್ ಅವರ ಅಮೂಲ್ಯ ಸೇವೆ ಮತ್ತು ಸಾಧನೆಗಳನ್ನು ದೇಶವು ಸ್ಮರಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ …

Read More »

ಸ್ವಾತಂತ್ರ್ಯ ದಿನಾಚರಣೆ ಪ್ರಶಸ್ತಿ: ರಾಜ್ಯದ 19 ಪೊಲೀಸರಿಗೆ ಗೌರವ

ಹೊಸದಿಲ್ಲಿ: ಸ್ವಾತಂತ್ರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿಗೆ ಈ ಬಾರಿ ರಾಜ್ಯದ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗಿದ್ದಾರೆ. ಕೇಂದ್ರ ಗೃಹ ಇಲಾಖೆ  ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಕರ್ನಾಟಕ ಪೊಲೀಸ್ ಸಿಐಡಿ ಎಎಸ್‌ಐ ಪ್ರಸನ್ನ ಕುಮಾರ್‌ ಅವರಿಗೆ ರಾಷ್ಟ್ರಪತಿ ಪದಕ ನೀಡಲಾಗಿದೆ. ಇನ್ನು ರಾಜ್ಯದ 18 ಪೊಲೀಸರಿಗೆ ಪ್ರಶಂಸನೀಯ ಸೇವಾ ಪದಕ ನೀಡಿ ಗೌರವಿಸಲಾಗಿದೆ. 1. ಹೇಮಂತ್‌ಕುಮಾರ್ ರಂಗಪ್ಪ-DSP, ಲೋಕಾಯುಕ್ತ 2. ಪರಮೇಶ್ವರ್ ಹೆಗ್ಡೆ-DSP, ಆರ್ಥಿಕ ಅಪರಾಧ ಇಲಾಖೆ …

Read More »

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮತ್ತೊಂದು ದಾಖಲೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.  ಇದೀಗ ಮಾಜಿ ಪ್ರಧಾನಿ, ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ದಾಖಲೆ ಮುರಿದಿದ್ದಾರೆ. ಇಷ್ಟೇ ಅಲ್ಲ ಸುದೀರ್ಘ ಅವಧಿಗೆ ಪ್ರಧಾನಿಯಾದ ಭಾರತದ ನಾಲ್ಕನೇ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಬಿಜೆಪಿಯಿಂದ ಪ್ರಧಾನಿ ಪಟ್ಟ ಅಲಂಕರಿಸಿದ ಅಟಲ್ ಬಿಹಾರಿ ವಾಜಪೇಯಿ 2,268 ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. …

Read More »