ಗೋಕಾಕ : ಭಾರತ ಕಂಡ ಸಂಗೀತ ಸಾರ್ವಭೌಮ, ಗಾನ ಗಾರುಡಿಗ, ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಮಣ್ಯಂ(74) ಅವರ ಅಗಲಿಕೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಸಂಗೀತ ಕ್ಷೇತ್ರದಲ್ಲಿ ಡಾ. ಎಸ್.ಪಿ.ಬಾಲಸುಬ್ರಮಣ್ಯಂ ಅವರು ಅನನ್ಯ ಕೊಡುಗೆ ನೀಡಿದ್ದಾರೆ. ಕಳೆದ 50 ವರ್ಷಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡುವ ಮೂಲಕ …
Read More »ಗಾಯಕ ಎಸ್‍ಪಿಬಿ ನಿಧನಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಸಂತಾಪ
ಬೆಳಗಾವಿ: ಖ್ಯಾತ ಗಾಯಕ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನದಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಬಹುಭಾಷಾ ಗಾಯಕ ಎಸ್‍ಪಿಬಿ ಅವರು ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚೆನ್ನೈ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ …
Read More »ಗಾನ ಗಂಧರ್ವ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ.
ಗಾನ ಗಂಧರ್ವ *ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ* ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ ಪಡೆದಿದ್ದ *ಎಸ್ ಪಿ ಬಿ* ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ ತುಂಬಾ ಬಡವಾಗಿದೆ. ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ *ಎಸ್.ಪಿ. ಬಾಲಸುಬ್ರಹ್ಮಣ್ಯಂ* ಅವರು 16 ಭಾರತೀಯ ಭಾಷೆಗಳಲ್ಲಿ 4೦,೦೦೦ ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ …
Read More »ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ. ನಾರಾಯಣರಾವ್ ನಿಧನ!
ಬೆಂಗಳೂರು : ಕೊರೊನಾದಿಂದ ಬಳಲುತ್ತಿದ್ದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಇಂದು ನಿಧನರಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಮೃತಪಟ್ಟ ರಾಜಕೀಯ ಜನಪ್ರತಿನಿಧಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ನಿನ್ನೆಯಷ್ಟೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೊನಾದಿಂದಾಗಿ ಸಾವನಪ್ಪಿದ್ದರು. ಇದರ ಬೆನ್ನಲ್ಲೆ ಈಗ ಮತ್ತೊಬ್ಬ ಜನಪ್ರತಿನಿಧಿ ಕೊರೊನಾಗೆ ಬಲಿಯಾಗಿರುವುದು, ಇಡೀ ಕರ್ನಾಟಕವನ್ನು ಬೆಚ್ಚಿಬಿಳಿಸಿದೆ. ಸುಮಾರು 25 ದಿನಗಳಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ …
Read More »ಗೋಕಾಕ ಪೌರಕಾರ್ಮಿಕರ ಕನಸು ನನಸು ಮಾಡಿದ ಗೋಕಾಕ ಸಾಹುಕಾರ..!
ಗೋಕಾಕ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೌರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು …
Read More »ಸೆಪ್ಟಂಬರ್ 21ರಿಂದ ಕೇವಲ ಶಾಲೆಗಳು ಮಾತ್ರ ತೆರೆಯಲಿದೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ
ಮೈಸೂರು: ಸೆಪ್ಟಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿದೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೆ. 30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು. ಕೇಂದ್ರದ ಗ್ರೀನ್ ಸಿಗ್ನಲ್ ಬರುವವರೆಗೂ ತರಗತಿಗಳ ಆರಂಭ ಇಲ್ಲ. ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಖಾಸಗಿ ಶಾಲೆ ಪಡೆಯಬೇಕು. ಒಂದು ವೇಳೆ ಸಮಸ್ಯೆ ಆದರೆ ಡಿಡಿಪಿಐ, ಬಿಇಒ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ …
Read More »ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ರೈತರೊಂದಿಗೆ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ.
ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಚರ್ಚೆ ನಡೆಸಿದರು. ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವರು …
Read More »ರಾಕಿಂಗ್ ಫ್ಯಾಮಿಲಿಯಲ್ಲಿ ನಾಮಕರಣದ ಸಂಭ್ರಮ
ಬೆಂಗಳೂರು: ರಾಕಿಂಗ್‍ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಮನೆಯಲ್ಲಿ ಇಂದು ಹಬ್ಬದ ಸಂಭ್ರಮ. ತಮ್ಮ ಪುಟ್ಟ ಕಂದಮ್ಮನ ಹೆಸರನ್ನು ಶೀಘ್ರವೇ ತಿಳಿಸುವುದಾಗಿ ರಾಧಿಕಾ ತಿಳಿಸಿದ್ದು ಅದಕ್ಕೆ ಇಂದು ಕಾಲ ಕೂಡಿಬಂದಿದೆ. ಯಶ್ ಮತ್ತು ರಾಧಿಕಾರ ಮುದ್ದು ಮಗುವಿಗೆ ಯಶ್‍ನ ಮೊದಲ ಅಕ್ಷರವನ್ನು ಬಳಸಿಕೊಂಡು ಯಥರ್ವ್ ಎಂದು ನಾಮಕರಣ ಮಾಡಿದ್ದಾರೆ. ತಮ್ಮ ಮಗನ ಹುಟ್ಟುಹಬ್ಬದ ಸಂಭ್ರಮದ ಕ್ಷಣಗಳನ್ನು ಯಶ್ ಹಾಗೂ ರಾಧಿಕಾ ತಮ್ಮ ಇನ್ಸಾಟಾಗ್ರಾಂಗಳಲ್ಲಿ ಹಂಚಿಕೊಂಡಿದ್ದಾರೆ. ಯಥರ್ವನ ನಾಮಕರಣದ ಫೋಟೋಗಳನ್ನು ಹಾಕಿ …
Read More »ಸ್ವಾತಂತ್ರ್ಯ ದಿನಾಚರಣೆ ಪ್ರಶಸ್ತಿ: ರಾಜ್ಯದ 19 ಪೊಲೀಸರಿಗೆ ಗೌರವ
ಹೊಸದಿಲ್ಲಿ: ಸ್ವಾತಂತ್ರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿಗೆ ಈ ಬಾರಿ ರಾಜ್ಯದ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗಿದ್ದಾರೆ. ಕೇಂದ್ರ ಗೃಹ ಇಲಾಖೆ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಕರ್ನಾಟಕ ಪೊಲೀಸ್ ಸಿಐಡಿ ಎಎಸ್‌ಐ ಪ್ರಸನ್ನ ಕುಮಾರ್ ಅವರಿಗೆ ರಾಷ್ಟ್ರಪತಿ ಪದಕ ನೀಡಲಾಗಿದೆ. ಇನ್ನು ರಾಜ್ಯದ 18 ಪೊಲೀಸರಿಗೆ ಪ್ರಶಂಸನೀಯ ಸೇವಾ ಪದಕ ನೀಡಿ ಗೌರವಿಸಲಾಗಿದೆ. 1. ಹೇಮಂತ್‌ಕುಮಾರ್ ರಂಗಪ್ಪ-DSP, ಲೋಕಾಯುಕ್ತ 2. ಪರಮೇಶ್ವರ್ ಹೆಗ್ಡೆ-DSP, ಆರ್ಥಿಕ ಅಪರಾಧ ಇಲಾಖೆ …
Read More »ಪುಂಡಾಟಗಳನ್ನು ಸರ್ಕಾರ ಸಹಿಸಲ್ಲ, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ’ : ಸಿಎಂ ಬಿಎಸ್‌ವೈ
ಬೆಂಗಳೂರು: ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೊಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. …
Read More »