Breaking News

ರಾಜಕೀಯ

*ಎತ್ತಿನಹೊಳೆ ಯೋಜನಾ ಪ್ರದೇಶ ಪರಿವೀಕ್ಷಣೆ ಮಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌.*

ಹಾಸನ : ಎತ್ತಿನಹೊಳೆ ಯೋಜನಾ ಪ್ರದೇಶವಾದ ಹಾಸನ ಜಿಲ್ಲೆ ಬೆಟ್ಟದಾಲೂರು ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು, ಯೋಜನಾ ಪ್ರದೇಶದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾಮಗಾರಿಗಳ ಪರಿವೀಕ್ಷಣೆಯ ಸಮಯದಲ್ಲಿ ಸಣ್ಣ ನೀರಾವರಿ ಸಚಿವ ಸಿ ಪಿ ಯೋಗೇಶ್ವರ್, ಅರಸೀಕೆರೆ ಶಾಸಕರಾದ ಶಿವಲಿಂಗಯ್ಯ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣರಾವ್ ಪೇಶ್ವೆ ಉಪಸ್ಥಿತರಿದ್ದರು.

Read More »

*ಕರ್ನಾಟಕದ ಗಡಿ ಭಾಗಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ – ಸಚಿವ ರಮೇಶ್ ಜಾರಕಿಹೊಳಿ‌*

ಕರ್ನಾಟಕದ ಗಡಿ ಜಿಲ್ಲೆಗಳು ಮತ್ತು ತಾಲ್ಲೂಕುಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ರಾಜ್ಯದ ಬೊಕ್ಕಸಕ್ಕೆ ತುಂಬಾ ಒತ್ತಡವಾಗದಂತೆ ಅನುದಾನ‌ ನೀಡುವಂತೆ ಮುಖ್ಯಮಂತ್ರಿಗಳ‌ ಮನ ಒಲಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಹೇಳಿದರು. ಕರ್ನಾಟಕ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ *ಡಾ. ಸಿ‌ ಸೋಮಶೇಖರ್* ಅವರೊಂದಿಗೆ ನಡೆದ ಮಾತುಕತೆಯ ವೇಳೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ‌* ಕರ್ನಾಟಕ ರಾಜ್ಯದ ಒಟ್ಟು 19 ಜಿಲ್ಲೆಗಳು ನೆರೆ …

Read More »

ರಾಜಭವನ ಚಲೋ’ ಕಾಂಗ್ರೆಸ್ ಬೃಹತ್ ಪ್ರತಿಭಟನೆ : ವಾಹನಕ್ಕೆ ಚಾಲನೆ ನೀಡಿದ ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ : ಬೆಂಗಳೂರಿನಲ್ಲಿ ಜ.20ರಂದು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ‘ ರಾಜಭವನ ಚಲೋ’ ಬೃಹತ್ ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ತೆರಳುತ್ತಿದ್ದು, ಅವರು ತೆರಳುವ ವಾಹನಕ್ಕೆ ಸತೀಶ್ ಶುಗರ್ಸ್ ಲಿಮಿಟೆಡ್ ನ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಂಗಳವಾರ ಚಾಲನೆ ನೀಡಿದರು. ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯಿಂದ ದೇಶದ ಅನ್ನದಾತರ ಮೇಲೆ ಹೇರಿದ ಕೃಷಿ ವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ರೈತರು ದನಿವರಿಯದ ನಿರಂತರ ಹೋರಾಟ ನಡೆಸಿದ್ದಾರೆ.  …

Read More »

ಬೆಳಗಾವಿ ಒಂದಿಂಚೂ ಜಾಗ ಬಿಡುವ ಪ್ರಶ್ನೆ ಇಲ್ಲ: ಸಚಿವ ರಮೇಶ ಜಾರಕಿಹೊಳಿ ಮಹಾ ಸಿಎಂಗೆ ತಿರುಗೇಟು!!

ಬೆಳಗಾವಿ: ಗಡಿ ವಿಚಾರದಲ್ಲಿ  ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ  ಸಚಿವ ರಮೇಶ ಜಾರಕಿಹೊಳಿ  ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …

Read More »

ಒಳ್ಳೆಯ ವಿಚಾರಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಕಲಬುರಗಿ:  ಒಗ್ಗಟ್ಟಿನ ಮಂತ್ರ ಜಪಿಸಿದರೆ   2023 ರಲ್ಲಿ ರಾಜ್ಯದಲ್ಲಿ ಮತ್ತೆ   ಕಾಂಗ್ರೆಸ್ ಅಧಿಕಾರಕ್ಕೆ   ಬರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.  ನಗರದಲ್ಲಿ ಇಂದು ನಡೆದ ವಿಭಾಗ ಮಟ್ಟದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಶಿಸ್ತು ಕ್ರಮ ತುಂಬ ಅವಶ್ಯಕತೆ ಇದೆ.  ನಾನು ಈ ಬಗ್ಗೆ  ಹುಬ್ಬಳ್ಳಿಯ ಸಮಾವೇಶದಲ್ಲಿಯೇ ಹೇಳಿದ್ದೇನೆ.  ಒಳ್ಳೆಯ ವಿಚಾರಗಳಿಗೆ ಆದ್ಯತೆ ನೀಡಬೇಕು.  ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಡವುದರ ಜತೆಗೆ ಸಿದ್ದಾಂತಕ್ಕೆ ಬದ್ದವಾಗಿರಬೇಕು …

Read More »

ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ವಿಶ್ವವೇ ಹೆಮ್ಮೆ ಪಡುತ್ತಿದೆ!! ಮೂಡಲಗಿ: ದೇಶದ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆಗೆ ಇಡೀ ವಿಶ್ವವೇ   ಹೆಮ್ಮೆಪಡುತ್ತಿದೆ. ಕೋವಿಡ್-19 ಯಶಸ್ವಿಯಾಗಲೇಂದು  ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ  ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ  ಸೋಮವಾರ ಆರೋಗ್ಯ ಇಲಾಖೆಯ ಸಿಬ್ಬಂದಿವರಿಗೆ ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.  ಕೋವಿಡ್ ಲಸಿಕೆಯಿಂದ ಯಾರೂ ಭಯಭೀತರಾಗಬಾರದು, ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸಗಳಿಗೆ ಲಸಿಕೆ …

Read More »

*ಬಿಜೆಪಿ ಸಮಾವೇಶದ ಭರ್ಜರಿ ಯಶಸ್ಸು ; ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ‌*

ನಿನ್ನೆ ಬೆಳಗಾವಿಯಲ್ಲಿ ನಡೆದ *ಜನಸೇವಕ‌ ಸಮಾವೇಶ* ವು ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರಿಗೆ ಮತ್ತಷ್ಟು ಕೆಲಸ ಮಾಡಲು ಉತ್ತೇಜಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸರ್ಕಾರದ ಗೃಹ ಸಚಿವರಾದ *ಶ್ರೀ ಅಮಿತ್ ಶಾ*, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ *ಶ್ರೀ ಬಿಎಸ್ ಯಡಿಯೂರಪ್ಪ*, ಕೇಂದ್ರ ಸಚಿವರಾದ *ಶ್ರೀ ಪ್ರಲ್ಹಾದ್ ಜೋಶಿ* ಮತ್ತು ಬಿಜೆಪಿ ರಾಜ್ಯಾಧ್ಯಕ್ಷ *ಶ್ರೀ ನಳಿನ್ ಕುಮಾರ್ ಕಟೀಲ್* ಅವರಿಗೆ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ …

Read More »

ಉದ್ದವ್ ಠಾಕ್ರೆ ಹೇಳಿಕೆ ಖಂಡನೀಯ : ಶಾಸಕ ಸತೀಶ್ ಜಾರಕಿಹೊಳಿ

ಕಲಬುರಗಿ : ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉದ್ದವ್ ಠಾಕ್ರೆ ಹೇಳಿಕೆ ಖಂಡನೀಯ. ಉದ್ಧವ್ ಠಾಕ್ರೆ ಅವರು ಗಡಿ ವಿಚಾರದ ಬಗ್ಗೆ ಈ ಹಿಂದೆ ಕೂಡ ಮಾತನಾಡಿದ್ದರು. ಹೀಗಾಗಿ ಅವರ ಹೇಳಿಕೆ ಬಗ್ಗೆ ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದಿದ್ದಾರೆ. ನಾನು ಮಹಾರಾಷ್ಟ್ರ ಸಿಎಂ …

Read More »

ರೈತರ ಬೇಡಿಕೆಗಳಿಗೆ ಪೂರಕವಾಗಿ ಸ್ವಂದಿಸಲು ಸರಕಾರಗಳು ಎಡವಿವೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ

ರೈತರ ಬೇಡಿಕೆಗಳಿಗೆ ಪೂರಕವಾಗಿ ಸ್ವಂದಿಸಲು ಸರಕಾರಗಳು ಎಡವಿವೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆರೋಪಿಸಿದ್ದಾರೆ. ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತರ ಭಾರತದ ರೈತ ಸಂಘಟನೆಗಳು ಇಡೀ ದೇಶದ ರೈತರ ಧ್ವನಿಯಾಗಿ ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರಕಾರ ಅವರ ಹೋರಾಟಕ್ಕೆ ಪೂರಕವಾಗಿ ಸ್ವಂದಿಸುತ್ತಿಲ್ಲದಿರುವುದು ದುರಂತವಾಗಿದ್ದು, ಈ ಹೋರಾಟದ ಭಾಗವಾಗಿ ನಾವೆಲ್ಲರೂ ರೈತರಿಗೆ ಬಲ ತುಂಬಬೇಕಾಗಿದೆ. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸರ …

Read More »

ಸಿದ್ದು, ಡಿಕೆಶಿ ಅಷ್ಟೇ ಅಲ್ಲ, ಸಿಎಂ ಕುರ್ಚಿಗಾಗಿ ಇನ್ನೂ ಬಹಳಷ್ಟು ಜನ ರೇಸ್ ನಲ್ಲಿ ಇದ್ದಾರೆ : ಸತೀಶ್ ಜಾರಕಿಹೊಳಿ ಹೇಳಿಕೆ.

ಬಾಗಲಕೋಟೆ : ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಷ್ಟೇ ಅಲ್ಲ, ಇನ್ನೂ ಬಹಳಷ್ಟು ಮಂದಿ ಇದ್ದಾರೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಅದಕ್ಕಾಗಿ ಸಂಘಟನೆ, ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದರು. ಯಡಿಯೂರಪ್ಪ ಅವರು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಇರುತ್ತಾರೋ, ಇಲ್ಲವೋ …

Read More »