ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಾ ? ಎಂಬ ಕುತೂಹಲ ಕೆರಳಿಸಿದೆ. ಕಳೆದ ತಿಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ, ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …
Read More »ಕೆಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಮೇಶ್ ಜಾರಕಿಹೊಳಿ ಸಂತಾಪ
ಬೆಂಗಳೂರು. ಅ. 8: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಮವಿಲಾಸ ಪಾಸ್ವಾನ್ ಅವರು ಎಂಟು ಬಾರಿ ಸಂಸದರಾಗಿ, ಹಲವು ಬಾರಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳ ಮತ್ತು ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವರು …
Read More »ಕೋವಿಡ್-೧೯ ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ …
Read More »ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸಿಎಂ ಭೇಟಿ; ಕುಟುಂಬಕ್ಕೆ ಸಾಂತ್ವನ
ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ …
Read More »ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ
ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …
Read More »ಕೇಂದ್ರ ಸಚಿವ ಸುರೇಶ ಅಂಗಡಿ ಅಕಾಲಿಕ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ.
ನನ್ನ ಆತ್ಮೀಯ ಸ್ನೇಹಿತರಾಗಿದ್ದ ಕೇಂದ್ರ ಸಚಿವ *ಸುರೇಶ್ ಅಂಗಡಿ* ಅವರ ಹಠಾತ್ ನಿಧನ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ. ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ನಾವಿಬ್ಬರೂ ಪರಸ್ಪರ ಚರ್ಚೆ ಮಾಡಿ ಕೆಲಸ ಮಾಡುತ್ತಿದ್ದೆವು. ನಾನು ಭಾರತೀಯ ಜನತಾ ಪಾರ್ಟಿಯನ್ನು ಸೇರಲು ಅಂಗಡಿಯವರೂ ಪ್ರಮುಖ ಕಾರಣಕರ್ತರು. ಕೋವಿಡ್ ಸೋಂಕು ವಿಪರೀತವಾಗಿ ಹರಡಿದ್ದ ಸಂದರ್ಭದಲ್ಲಿಯೂ ನಾನು ಮತ್ತು ಅಂಗಡಿ ಹಲವು ಬಾರಿ ಟಾಸ್ಕ್ ಫೋರ್ಸ್ ಸಭೆ ನಡೆಸಿ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದ್ದೆವು. ಅಗಲಿದ …
Read More »ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ!
ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ …
Read More »ಗೋಕಾಕ ಪೌರಕಾರ್ಮಿಕರ ಕನಸು ನನಸು ಮಾಡಿದ ಗೋಕಾಕ ಸಾಹುಕಾರ..!
ಗೋಕಾಕ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೌರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು …
Read More »ಸ್ನೇಹಿತನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ.
ಇಂದು ಬೆಳಗ್ಗೆ ನಿಧನರಾದ ಸವದತ್ತಿಯ ಹಿರಿಯ ಸಮಾಜ ಸೇವಕ ಆನಂದ್ ಚೋಪ್ರಾ ಅವರ ಮೃತದೇಹಕ್ಕೆ ಪುಷ್ಪಗುಚ್ಛವಿರಿಸಿ ವಂದಿಸಿದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* *ಶೋಕ ವ್ಯಕ್ತಪಡಿಸಿದ ಸಚಿವ ಜಾರಕಿಹೊಳಿ* ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ ನನ್ನ ಸ್ನೇಹಿತ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ. ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ …
Read More »ಮಲಪ್ರಭಾ, ಘಟಪ್ರಭಾ ಒತ್ತುವರಿ ಸಮಗ್ರ ಸಮೀಕ್ಷೆ, ಒತ್ತುವರಿ ತಡೆಗೆ ಶಾಶ್ವತ ಯೋಜನೆ- *ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ*
ಬೆಳಗಾವಿ, ಸೆ.19: ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಒತ್ತುವರಿ ಜಾಗದ ಸಮಸ್ಯೆಗಳ ಕುರಿತು ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ನಡೆದ ಜಲಸಂಪನ್ಮೂಲ …
Read More »