Breaking News

ರಾಜ್ಯ

ಪಕ್ಷ ಸಂಘಟನೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯ: ಸತೀಶ್ ಜಾರಕಿಹೊಳಿ

ಶಿರಸಿ: ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ. ಇದರಲ್ಲಿ ಅತ್ಯಂತ ಮುಖ್ಯವಾದ ಪಾತ್ರ ಕಾರ್ಯಕರ್ತರದ್ದಾಗಿರುತ್ತದೆ. ವಿಧಾನಸಭೆ, ಲೋಕಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಯಾವ ಚುನಾವಣೆಯೇ ಆಗಿರಲಿ ನಾವೆಲ್ಲ ಒಗ್ಗೂಡಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತೋಟಗಾರರ ಕಲ್ಯಾಣಮಂಟಪದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ …

Read More »

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್​​.ಆರ್​ ಸಂತೋಷ್ ನಿನ್ನೆ​ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್​​.ಆರ್​ ಸಂತೋಷ್ ನಿನ್ನೆ​ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಅವರ ಪತ್ನಿ ಜಾಹ್ನವಿ ಪ್ರತಿಕ್ರಿಯಿಸಿದ್ದಾರೆ. ಸಂತೋಷ್​ರ ಈ ನಿರ್ಧಾರಕ್ಕೆ ಅವರ ರಾಜಕೀಯ ವೃತ್ತಿಜೀವನದಲ್ಲಾಗ್ತಿರೋ ಬದಲಾವಣೆಗಳೇ ಕಾರಣ ಎಂದಿದ್ದಾರೆ. ನಿನ್ನೆ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಾಹ್ನವಿ, ಅವರು ಬೆಳಗ್ಗೆಯಿಂದ ಸ್ವಲ್ಪ ಬೇಜಾರಲ್ಲಿದ್ರು. ಸಂಜೆ ಹೊರಗಡೆ ಹೋಗಿ 7 ಗಂಟೆಗೆ ಮನೆಗೆ ಬಂದ್ರು. ಊಟಕ್ಕೆ ಏನ್ಮಾಡಲಿ ಅಂತ ಕೇಳಲಿಕ್ಕೆ ಹೋದಾಗ ಪ್ರಜ್ಞೆ ತಪ್ಪಿದ್ರು. ಕೂಡಲೇ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ …

Read More »

ಶುಲ್ಕ ಪಾವತಿಸದಿದ್ದರೆ ವಿದ್ಯಾರ್ಥಿಗಳಿಗೆ ಡಿಸೆಂಬರ್ 1 ರಿಂದ ಆನ್ ಲೈನ್ ಆಗುತ್ತೆ ಆಪ್

ಬೆಂಗಳೂರು : ಖಾಸಗಿ ಶಾಲೆಗಳು ಪೋಷಕರಿಗೆ ಬಿಗ್ ಶಾಕ್ ನೀಡಿದ್ದು, ನವೆಂಬರ್ 30 ರೊಳಗೆ ಶುಲ್ಕ ಪಾವತಿಸದಿದ್ದರೆ ಡಿಸೆಂಬರ್ 1 ರಿಂದ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಈ ಕುರಿತು ಮಾಹಿತಿ ನೀಡಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ಶಾಲಾ ಬೋಧಕ-ಬೋಧಕೇತರ ಸಿಬ್ಬಂದಿ, ಶಾಲಾ ಕಟ್ಟಡಗಳ ಬಾಡಿಗೆ, ವಿದ್ಯುತ್ ಬಿಲ್ ಸೇರಿದಂತೆ ಶಾಲಾ ನಿರ್ವಹಣೆ ಖರ್ಚು ವೆಚ್ಚಗಳನ್ನು ಆಡಳಿತ ಮಂಡಳಿಗಳು ಪಾವತಿಸಬೇಕಾಗಿದ್ದು, ಪೋಷಕರು …

Read More »

ಸಚಿವ ಸಂಪುಟ ಸರ್ಕಸ್: ಮುಖ್ಯಮಂತ್ರಿ ಯಡಿಯೂರಪ್ಪ ಸಭೆ

ಬೆಂಗಳೂರು,ನ.26-ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಾಳೆ ಬೆಳಗ್ಗೆ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಗ್ಗೆ 10.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಚಿವಸಂಪುಟ ವಿಸ್ತರಣೆ ತೂಗುಯ್ಯಾಲೆಯಲ್ಲಿರುವಾಗಲೇ ಸಿಎಂ ನಾಳೆ ಕರೆದಿರುವ ಸಂಪುಟ ಸಭೆ ರಾಜಕೀಯ ವಲದಯಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ಕಳೆದ ಬಾರಿ ನಡೆದ ಸಂಪುಟ ಸಭೆಯಲ್ಲಿ ಸಂಪುಟದಿಂದ ಕೈಬಿಡುವ ಕೆಲ ಸಚಿವರ ಹೆಸರುಗಳ ಸುಳಿವು ನೀಡಿದ್ದರು …

Read More »

ಇಂದು ಜೆ. ಪಿ ನಡ್ಡಾ ಹಾಗೂ ಸಚಿವ ರಮೇಶ ಜಾರಕಿಹೊಳಿ ಭೇಟಿ; ಕುತೂಹಲ ಮೂಡಸಿದ ಬಿಜೆಪಿ ಹೈಕಮಾಂಡ ನಡೆ

ನವದೆಹಲಿ: ದಿಡೀರ್ ಬೆಳವಣಿಗೆಯಲ್ಲಿ ದೆಹಲಿಗೆ ತೆರಳಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ನಡ್ಡಾ ಸೂಚನೆ ಮೇರೆಗೆ ರಮೇಶ ಜಾರಕಿಹೊಳಿ ಕಳೆದ ರಾತ್ರಿಯೇ ದೆಹಲಿ ತಲುಪಿದ್ದು, ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿಯಲ್ಲಿ ಭರ್ಜರಿ ಕಸರತ್ತು ನಡೆದಿರುವ ಬೆನ್ನಲ್ಲೇ ಸಿಎಮ ಯಡಿಯೂರಪ್ಪ ಅವರನ್ನು ದೂರವಿಟ್ಟು …

Read More »

ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ : ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ.

ಬೆಂಗಳೂರು: ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ ಎಂದು ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಹೇಳಿದರು. ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯ ನೀರಾವರಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದೆ. ಯಾವ ರಾಜಕೀಯ ವಿಷಯಗಳ ಬಗ್ಗೆಯೂ ಅವರ ಜೊತೆ ಚರ್ಚೆ ಮಾಡಿಲ್ಲ ಎಂದ ಅವರು ಬೆಳಗಾವಿ ಲೋಕಸಭಾ …

Read More »

ಸಿ.ಪಿ.ಯೋಗೇಶ್ವರ್ ಪರ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್

ಬೆಂಗಳೂರು: ನನಗೆ ಸಿ.ಪಿ.ಯೋಗೇಶ್ವರ್ ತುಂಬಾ ಪರಿಚಯ ಹಾಗೂ ಆತ್ಮೀಯರು. ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ. ಕೊನೆಯವರೆಗೂ ಅವರ ಪರ ಬ್ಯಾಟಿಂಗ್ ಮಾಡುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟಿದ್ದು. ಪಕ್ಷದ ಕೆಲವು ಶಾಸಕರು ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಸದಾಶಿವ ನಗರದ ತಮ್ಮ …

Read More »

ಬಿಜೆಪಿಯ ಪವರ್ ಸೆಂಟರ್(ಶಕ್ತಿ ಕೆಂದ್ರ) ಎಂದೇ ಗುರುತಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಧಿಡೀರ್ ಭೇಟಿ !…

ಬೆಂಗಳೂರು: -ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದೋ ಅಥವಾ ನಾಳೆಯೋ ಎಂಬ ತೂಗುಯ್ಯಾಲೆಯಲ್ಲಿರುವಾಗಲೇ ಬಿಜೆಪಿಯ ಪವರ್ ಸೆಂಟರ್ ಎಂದೇ ಗುರುತಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಧಿಡೀರ್ ಭೇಟಿ ನೀಡಿರುವುದು ಭಾರೀ ಕುತೂಹಲಕ್ಕೆ ಎಡೆ ಮಾಡಿದೆ. ವರಿಷ್ಠರ ಬುಲಾವ್ ಮೇರೆಗೆ ಸಚಿವ ರಮೇಶ್ ಜಾರಕಿಹೊಳಿ ಇಂದು ದೆಹಲಿಗೆ ತೆರಳಿದ್ದು, ಈಗ ಬಿಜೆಪಿಯಲ್ಲಿ ನಡೆಯುತ್ತಿರುವ ವದಂತಿಗಳಿಗೆ ರೆಕ್ಕೆಪುಕ್ಕ ಬಂದಂತಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಜಾರಕಿಹೊಳಿ ದೆಹಲಿಗೆ …

Read More »

ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ : ಚುನಾವಣಾ ಆಯೋಗದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ 6 ಸಾವಿರ ಗ್ರಾಮಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣೆ ಆಯೋಗ ಸಿದ್ಧತೆ ನಡೆಸಿದ್ದು, ಈ ನಡುವೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಚುನಾವಣೆ ಆಯೋಗ ಸ್ಪಷ್ಟಪಡಿಸಿದೆ. ರಾಜ್ಯದ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಿರುತ್ತಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗವು ಈಗಾಗಲೇ ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ …

Read More »

ಡಿ.5 ರ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ ಕರವೇ ಗಜಸೇನೆ : ಪವನ ಮಾಹಾಲಿಂಗಪುರ ಹೇಳಿಕೆ.

ಗೋಕಾಕ : ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಡಿ.5 ರಂದು ಹಲವು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಘಟನೆಯಿಂದ ಬಂದ್ ಗೆ ಬೆಂಬಲವಿಲ್ಲ ಎಂದು ಕರವೇ ಗಜಸೇನೆ ಉತ್ತರ ಕರ್ನಾಟಕ ಯುವ ಘಟಕ ಅಧ್ಯಕ್ಷರಾದ ಪವನ ಮಾಹಾಲಿಂಗಪುರ ಅವರು ತಿಳಿಸಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು ಡಿಸೆಂಬರ್ 5 ರಂದು ಮಾಡುತ್ತಿರುವ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ,ಆದರೆ ಪ್ರಾದಿಕಾರದ ವಿರುದ್ಧ ವಿಭಿನ್ನ …

Read More »