ರಾಜ್ಯ ಸರ್ಕಾರ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ …
Read More »ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಮುಂದೆ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ: ಶಾಸಕ ಸತೀಶ ಜಾರಕಿಹೊಳಿ.
ಬೆಳಗಾವಿ: ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಕೂಡ ಮುಂದೆ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. https://www.facebook.com/269481180133745/posts/1110317432716778/?sfnsn=wiwspwa&d=w&vh=e ಖಾಸಗಿ ಮಾಧ್ಯಮದವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಸದ್ಯ ರಾಜಕೀಯ, ಸಾಮಾಜಿಕ ಹಾಗೂ ಉದ್ಯಮ ಮೂರು ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಅದೇ ರೀತಿ ನನ್ನ ಮಕ್ಕಳು ಕೂಡ ರಾಜಕೀಯ, ಸಾಮಾಜಿ ಮತ್ತು ಉದ್ಯಮ ಕ್ಷೇತ್ರದಲ್ಲಿ ಛಾಪು ಮೂಡಿಸಲಿದ್ದಾರೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ. ಪುತ್ರ, ಪುತ್ರಿ ಸದ್ಯ …
Read More »ಗೋಕಾಕ ನಗರದಲ್ಲಿ ಚನ್ನಬಸವೇಶ್ವರ ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟನೆ.
ಗೋಕಾಕ : ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡವನ್ನು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಶನಿವಾರದಂದು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು , ಸುಣಧೋಳಿಯ ಶಿವಾನಂದ ಮಹಾಸ್ವಾಮಿಗಳು , ಗಣ್ಯರಾದ ಮಲ್ಲಿಕಾರ್ಜುನ ಈಟಿ , ಎಂ.ಎಸ್. ವಾಲಿ , ಲೋಕಯ್ಯಾ ಹಿರೇಮಠ, ಬಸವರಾಜ ಹಿರೇಮಠ …
Read More »ಮಕ್ಕಳ-ಶಿಕ್ಷಕರ ಆರೋಗ್ಯಕ್ಕಿಂತ ಇನ್ನಾವ ಕಾರ್ಯಕ್ರಮವೂ ಮುಖ್ಯವಲ್ಲ : ಸುರೇಶ್ ಕುಮಾರ್
ಬೆಂಗಳೂರು: ಕೋವಿಡ್ ಕಾಲದಲ್ಲಿ ಅನುಷ್ಠಾನಕ್ಕೆ ಬಂದ ವಿದ್ಯಾಗಮ ಯೋಜನೆಯ ಕಾರಣದಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆಯಲ್ಲಿ ವಿದ್ಯಾಗಮ ಕಾರ್ಯಕ್ರಮ ನಿಲ್ಲಿಸಲು ಆಗ್ರಹಗಳು ಕೇಳಿ ಬರುತ್ತಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. https://m.facebook.com/story.php?story_fbid=3912186332142016&id=100000520624203 ವಿಶೇಷವಾಗಿ ಸಾಮಾಜಿಕ, ಆರ್ಥಿಕವಾಗಿ ದುರ್ಬಲರಾದ ಮಕ್ಕಳ ಶೈಕ್ಷಣಿಕ ಅಗತ್ಯತೆಗಳನ್ನು ಪೂರೈಸುತ್ತಿರುವ ವಿದ್ಯಾಗಮ ಕಾರ್ಯಕ್ರಮವನ್ನು ನಿಲ್ಲಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಇಂದು ಬಹುಪಾಲು ನಮ್ಮ ಸರ್ಕಾರಿ ಶಾಲೆಗಳಿಗೆ …
Read More »ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ:* *ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ
ಬೆಂಗಳೂರು, ಅಕ್ಟೋಬರ್ ೧೦-೨೦೨೦: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ಮತ್ತು ನ್ಯಾಯಬದ್ಧ ವಾದವನ್ನು ಮಂಡಿಸಲಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭರವಸೆ ನೀಡಿದ್ದಾರೆ. …
Read More »ಶಾಲೆ ಪ್ರಾರಂಭ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಾಲೆಗಳನ್ನು ಆರಂಭಿಸುವ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತ ದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ …
Read More »ಸತೀಶ ಶುಗರ್ಸ್ ಕಾರ್ಖಾನೆಯಿಂದ ರೈತರಿಗೆ ಎರಡನೇ ಕಂತಿನ ಹಣ ಘೋಷಣೆ!
ಬೆಳಗಾವಿ: ಕಳೆದ 2019-20ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರ ಖಾತೆಗೆ ಪ್ರಥಮ ಕಂತು 2500 ರೂ. ದಂತೆ ಸತೀಶ ಶುಗರ್ಸ ಕಾರ್ಖಾನೆಗೆ ಈಗಾಗಲೇ ಪಾವತಿಸಿದ್ದು, ಎರಡನೇ ಕಂತು ಪ್ರತಿ ಟನ್ 225 ರೂ. ನೀಡಲು ಘೋಷಣೆ ಮಾಡಲಾಗಿದೆ. ಈ ಎರಡನೇ ಕಂತನ್ನುಒಂದು ವಾರದ ಒಳಗಾಗಿ ಸಂಬಂಧಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು. 2019-20ರ ಹಂಗಾಮಿನ ಪ್ರತಿಟನ್‍ಕಬ್ಬಿನ ದರ ಒಟ್ಟು2725 ರೂ. ಪಾವತಿಸಿದಂತಾಗುವುದು.(ಕಬ್ಬುಕಟಾವು ಮತ್ತುಕಬ್ಬು ಸಾರಿಗೆದರವನ್ನು ಪ್ರತ್ಯೇಕವಾಗಿ ನೀಡಲಾಗಿದೆ). …
Read More »ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ!
ಬೆಂಗಳೂರು, ಅಕ್ಟೋಬರ್ 09: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
Read More »ಸಚಿವ ರಮೇಶ ಜಾರಕಿಹೊಳಿ ಅವರ “ಮಹಾ” ಭೇಟಿ ||ಕುತೂಹಲಕಾರಿ ಬೆಳವಣಿಗೆಯತ್ತ ಮಹಾರಾಷ್ಟ್ರ ರಾಜಕೀಯ.
ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಾ ? ಎಂಬ ಕುತೂಹಲ ಕೆರಳಿಸಿದೆ. ಕಳೆದ ತಿಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ, ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …
Read More »ಕೆಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಮೇಶ್ ಜಾರಕಿಹೊಳಿ ಸಂತಾಪ
ಬೆಂಗಳೂರು. ಅ. 8: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಮವಿಲಾಸ ಪಾಸ್ವಾನ್ ಅವರು ಎಂಟು ಬಾರಿ ಸಂಸದರಾಗಿ, ಹಲವು ಬಾರಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳ ಮತ್ತು ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವರು …
Read More »