ಗೋಕಾಕ: ಸಾರ್ವಜನಿಕರ ರಸ್ತೆ ಸಂಚಾರ ಸುಗಮಕ್ಕಾಗಿ ಕುಸಿದಿರುವ ಮೆಳವಂಕಿ ಸೇತುವೆ ಬಳಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬುಧವಾರದಂದು ಗುದ್ದಲಿ ಪೂಜೆ ನೆರವೇರಿಸಲಾಯಿತು. ಜಿ.ಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಕಳೆದ ಸೋಮವಾರದಂದು ಬೆಳಗಿನ ಜಾವ ಮೆಳವಂಕಿ ಸೇತುವೆ ಕುಸಿದು ಬಿದ್ದಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಗೋಕಾಕದಿಂದ ಕೌಜಲಗಿ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಇದರಿಂದ ತುಂಬ ತೊಂದರೆಯಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »ಕೋವಿಡ್-೧೯ ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ …
Read More »ಲಂಚ ಪಡೆಯುತ್ತಿದ್ದ ವಿಶೇಷ ಭೃಷ್ಟ ಮಹಿಳಾ ತಹಶೀಲ್ದಾರ್ ಎಸಿಬಿ ಬಲೆಗೆ!
ಬೆಂಗಳೂರು,ಅ.6: ಬರೋಬರಿ 5 ಲಕ್ಷ ಲಂಚ ಪಡೆಯುವ ವೇಳೆ ನಗರದ ಮಹಿಳಾ ವಿಶೇಷ ತಹಶೀಲ್ದಾರ್ ಒಬ್ಬರು ಭ್ರಷ್ಟಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೆಜಿ ರಸ್ತೆಯಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೆಡ್ …
Read More »ಊಟ ಮಾಡಿಸಿ ಕೈ ತೊಳೆಯಲು ಹೋದ ಅಮ್ಮ – ಮಹಡಿಯಿಂದ ಬಿದ್ದು ಕಂದಮ್ಮ ಸಾವು
ಮಂಡ್ಯ: ತಾಯಿ ಮಗುವಿಗೆ ಊಟ ಮಾಡಿಸಿ ಕೈ ತೊಳೆಯಲು ಹೋದ ವೇಳೆ ಮೂರು ವರ್ಷದ ಕಂದಮ್ಮ ಮಹಡಿಯ ಮೇಲಿಂದ ಬಿದ್ದು ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿ. ರಾಜಕುಮಾರ್ ಬಡಾವಣೆಯಲ್ಲಿ ಸತೀಶ್ ಅವರದ್ದು ಮಹಡಿಯ ಮನೆಯಾಗಿದೆ. ಎಂದಿನಂತೆ ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ ಊಟ ಮಾಡಿಸಿದ್ದಾರೆ. ನಂತರ …
Read More »ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸಿಎಂ ಭೇಟಿ; ಕುಟುಂಬಕ್ಕೆ ಸಾಂತ್ವನ
ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ …
Read More »ಮೆಳವಂಕಿ ಸೇತುವೆ ಕುಸಿತ ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
ಗೋಕಾಕ: ಮೆಳವಂಕಿ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಇಂದು ಬೆಳಗಿನ ಜಾವ ಸೇತುವೆ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿರುವ ಅವರು, ಕೂಡಲೇ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ಹಹಿಸಿ ಬೈಪಾಸ್ ರಸ್ತೆ ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ನಾಳೆಯಿಂದಲೇ ಕೆಲಸ ಆರಂಭಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ …
Read More »ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ
ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …
Read More »ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿ, ಕಾಲಿಗೆ ಬಿದ್ದು ಬಿಟ್ಬಿಡಿ ಎಂದ!
ಯಾದಗಿರಿ: ಹನಿ ನೀರಾವರಿ ಯೋಜನೆಯಡಿ ಸಬ್ಸಿಡಿ ಹಣ ಬಿಡುಗಡೆ ಮಾಡಲು 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಎವರ್ ಗ್ರೀನ್ ಕಂಪನಿಯ ಸಬ್ಸಿಡಿ ಹಣ 1.77 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಮಲ್ಲಿಕಾರ್ಜುನ ಮೊದಲ ಕಂತಿನಲ್ಲಿ 5 ಸಾವಿರ …
Read More »ಬಾಬ್ರಿ ಕಟ್ಟಡ ಕುರಿತು ತೀರ್ಪು – ಸತ್ಯಮೇವ ಜಯತೇ ಎಂದ ಸಚಿವ ರಮೇಶ ಜಾರಕಿಹೊಳಿ
ಬಾಬ್ರಿ ಕಟ್ಟಡ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯವು ಇಂದು ನೀಡಿದ ತೀರ್ಪು ಐತಿಹಾಸಿಕವಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಬಣ್ಣಿಸಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ ಮಾತನಾಡಿದ ಸಚಿವ ಜಾರಕಿಹೊಳಿ, ಸತ್ಯ ಎಂದಿಗೂ ಸತ್ಯವೇ, ಭಾರತೀಯ ಜನತಾ ಪಾರ್ಟಿ ಸಹಾ ಇದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿತ್ತು. ಈಗ ನ್ಯಾಯದೇವತೆಯೂ ಸಹಾ ನಮ್ಮ ನಂಬಿಕೆಯನ್ನು ಪುರಸ್ಕರಿಸಿದಂತಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು. ನಮ್ಮ ಭಾರತೀಯ ಜನತಾ ಪಾರ್ಟಿಯ ಹಿರಿಯ …
Read More »ಮರೆಯಾದ ಸಂಗೀತದ ಮೇರು ಪರ್ವತ ಎಸ್‍ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ
ಗೋಕಾಕ : ಭಾರತ ಕಂಡ ಸಂಗೀತ ಸಾರ್ವಭೌಮ, ಗಾನ ಗಾರುಡಿಗ, ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಮಣ್ಯಂ(74) ಅವರ ಅಗಲಿಕೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಸಂಗೀತ ಕ್ಷೇತ್ರದಲ್ಲಿ ಡಾ. ಎಸ್.ಪಿ.ಬಾಲಸುಬ್ರಮಣ್ಯಂ ಅವರು ಅನನ್ಯ ಕೊಡುಗೆ ನೀಡಿದ್ದಾರೆ. ಕಳೆದ 50 ವರ್ಷಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡುವ ಮೂಲಕ …
Read More »