Breaking News

ರಾಜ್ಯ

ಸೆಪ್ಟಂಬರ್ 21ರಿಂದ ಕೇವಲ ಶಾಲೆಗಳು ಮಾತ್ರ ತೆರೆಯಲಿದೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ

ಮೈಸೂರು: ಸೆಪ್ಟಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿದೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೆ. 30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು. ಕೇಂದ್ರದ ಗ್ರೀನ್ ಸಿಗ್ನಲ್ ಬರುವವರೆಗೂ ತರಗತಿಗಳ ಆರಂಭ ಇಲ್ಲ. ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಖಾಸಗಿ ಶಾಲೆ ಪಡೆಯಬೇಕು. ಒಂದು ವೇಳೆ ಸಮಸ್ಯೆ ಆದರೆ ಡಿಡಿಪಿಐ, ಬಿಇಒ ಈ‌ ಬಗ್ಗೆ ಕ್ರಮ‌ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ …

Read More »

ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ & ರಮೇಶ್ ಜಾರಕಿಹೊಳಿ‌ ಭೇಟಿ !ಮಹಾ ರಾಜಕಾರಣದಲ್ಲಿ ಭಾರಿ ಸಂಚಲನ..

ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಮತ್ತು ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ಮುಖಂಡರಾದ ಕರ್ನಾಟಕದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ‌ …

Read More »

ಮೇಕೆದಾಟು ; ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ‌*

ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಕೇಂದ್ರ ಜಲಶಕ್ತಿ ಸಚಿವರಾದ *ಶ್ರೀ ಗಜೇಂದ್ರ ಸಿಂಗ್ ಶೇಖಾವತ್* ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ …

Read More »

SSLCಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ಸತೀಶ ಜಾರಕಿಹೊಳಿಯಿಂದ ಸನ್ಮಾನ

ಬೆಳಗಾವಿ: ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ  ಪ್ರಥಮ ಸ್ಥಾನದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಕೆಪಿಸಿಸಿ  ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಸನ್ಮಾನಿಸಿದರು. ಇಲ್ಲಿನ ಸದಾಶಿವ ನಗರ ತಮ್ಮ ನಿವಾಸದಲ್ಲಿ  ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಪ್ರೋತ್ಸಾಹಧನ ನೀಡುವ ಮೂಲಕ  ಅಭಿನಂದಿಸಿದರು. ಶೇ 97 ರಷ್ಟು ಫಲಿತಾಂಶ ಪಡೆದು ಹುಕ್ಕೇರಿ ತಾಲೂಕಿಗೆ ಪ್ರಥಮ ಬಂದ ಜ್ಯೋತಿಬಾ ಬಾಗೇವಾಡಿ,  ರೋಹಿಣಿ,  ಪ್ರಶಾಂತ ಪಾಟೀಲ್, ಪ್ರಶಾಂತ ಪೂಜಾರಿ, ಜಯಲಕ್ಷ್ಮಿ, ಸುನಿತಾ ಪಾರಿಶವಾಡ್, …

Read More »

ಲಂಚ ಪ್ರಕರಣ: ಎಫ್‌ಡಿಎ ಬಂಧನ, ನಾಲ್ವರ ವಿರುದ್ಧ ಕೇಸ್…!

ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಾಲ್ವರು ನೌಕರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಬ್ಬ …

Read More »

ಮೇಕೆದಾಟು, ಎತ್ತಿನಹೊಳೆ ನೀರಾವರಿ ಯೋಜನೆ : ಶೀಘ್ರವೇ ದೆಹಲಿಗೆ ಸಿಎಂ ನೇತೃತ್ವದ ನಿಯೋಗ – ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.

ಬೆಂಗಳೂರು : ರಾಜ್ಯದಲ್ಲಿನ ಮಹತ್ವದ ಮೇಕೆದಾಟು, ಎತ್ತಿನಹೊಳೆ ಯೋಜನೆ ಸಹಿತ ಬೃಹತ್ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ತಾಂತ್ರಿಕ ಮತ್ತು ಕಾನೂನು ತೊಡಕುಗಳ ನಿವಾರಣೆಗೆ ತಕ್ಷಣದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹೊಸದಿಲ್ಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನಕ್ಕೆ ಕೆಲ ಕಾನೂನು ಮತ್ತು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು …

Read More »

ಶಾಲೆಗಳು ಕೊರೋನಾ ಹೆಸರಿನಲ್ಲಿ ಹೆಚ್ಚಿನ ಶುಲ್ಕ ಪಡೆದರೆ ಶಿಸ್ತುಕ್ರಮ : ಸಚಿವ ಎಸ್. ಸುರೇಶ್‌ಕುಮಾರ್

ಧಾರವಾಡ: ‘ಶಾಲಾ ಶುಲ್ಕ ಭರಿಸಿಕೊಳ್ಳುವುದರ ಜತೆಗೆ ಸ್ಯಾನಿಟೈಸೇಷನ್‌ ನೆಪದಲ್ಲಿ ಕೊರೊನಾ ಶುಲ್ಕವನ್ನು ಪಾಲಕರಿಂದ ವಸೂಲು ಮಾಡಿದ್ದು ಕಂಡುಬಂದರೆ, ಅಂಥ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಕೋವಿಡ್ ಕಾನೂನಿನಡಿ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದರು. ‘ವಿದ್ಯಾಗಮ’ ಅನುಷ್ಠಾನ ಕುರಿತು ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಲಾ ಶುಲ್ಕ ವಿಚಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳ …

Read More »

ಅರಭಾವಿ ಬಿಜೆಪಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ..!!

ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ. ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಅವರು ನೇಮಕ ಮಾಡಿ …

Read More »

ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ಎಸಿಬಿ: ಕೆಜಿಗಟ್ಟಲೆ ಚಿನ್ನಾಭರಣ ವಶ…..!

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಖಚಿತ ಮಾಹಿತಿಯ ಆಧಾರದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ.ಅಧಿಕಾರಿಗಳು ಇಬ್ಬರು ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಾಏಕಿ ದಾಳಿ ನಡೆಸಿ 15 ಲಕ್ಷ ರೂ.ನಗದು ಮತ್ತು ಮೂರು ಕೆಜಿಯಷ್ಟು ಚಿನ್ನಾಭರಣ ವಶಪಡಿಸಿಕೊಂಡು, ದಾಖಲೆ ಪರಿಶೀಲನೆ ಕಾರ್ಯ ಮುಂದುವರಿಸಿದ್ದಾರೆ. ಬೆಂಗಳೂರು ಕೊಳಚೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಂಎಸ್‍ಎನ್ ರಾಜು ಅವರಿಗೆ ಸೇರಿದ ತುಮಕೂರಿನ ವಾಸದ ಮನೆ, ಬೆಂಗಳೂರು …

Read More »

ಪದವಿ ಶೈಕ್ಷಣಿಕ ವರ್ಷ ಆರಂಭ: ಸೆಪ್ಟೆಂಬರ್ 1ರಿಂದ ಆನ್ ಲೈನ್ ||ಅಕ್ಟೋಬರನಿಂದ ನೇರ(ಆಫ್‍ಲೈನ್) ತರಗತಿ .

ಬೆಂಗಳೂರು, ಆ.26: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ(ಆಫ್‍ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ …

Read More »