Breaking News

ರಾಜ್ಯ

ರಾಜ್ಯದಲ್ಲಿ ಬಾರಿ ಮಳೆ ಸಾಧ್ಯತೆ; ಜು 15 ರ ವರೆಗೆ ಹೈ ಅಲರ್ಟ !

ಬೆಂಗಳೂರು, ಜು.10- ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, …

Read More »

ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪದಗ್ರಹಣ

ಬೆಂಗಳೂರು : ಇತ್ತೀಚೆಗೆ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕಮಾಡಿ ರಾಷ್ಟ್ರಪತಿಗಳು ಆದೇಶಿಸಿದ್ದರು. ಇಂತಹ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಂತ ಥಾವರ್ ಚಂದ್ ಗೆಹ್ಲೋಟ್ ಅವರು, ಇಂದು ಬೆಳಿಗ್ಗೆ 10.30ಕ್ಕೆ ಪದಗ್ರಹಣಕ್ಕೆ ಸಮಯ ನಿಗದಿ ಪಡಿಸಲಾಗಿದೆ.ಈ ಕುರಿತಂತೆ ವಾರ್ತಾ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಂತ ತಾವರ್ ಚಂದ್ ಗೆಹ್ಲೋಟ್ ಅವರು, ಜುಲೈ.11ರಂದು ಬೆಳಿಗ್ಗೆ 10.30ಕ್ಕೆ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಿಗದಿಯಾಗಿರುವಂತ …

Read More »

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೆ. ಅಣ್ಣಾಮಲೈ ನೇಮಕ!

ಚೆನ್ನೈ: ಕರ್ನಾಟಕ ಕೇಡರ್​ನ ಮಾಜಿ ಐಪಿಎಸ್​​​​ ಅಧಿಕಾರಿ ಕೆ.ಅಣ್ಣಾಮಲೈಗೆ ಅದೃಷ್ಟ ಒಲಿದು ಬಂದಿದೆ. ಸಂಪುಟ ವಿಸ್ತರಣೆ ಬೆನ್ನಲ್ಲೇ ಅಣ್ಣಮಲೈರನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಿಸಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ಎಲ್​.ಮುರುಗನ್​ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷರ ಹುದ್ದೆಗೆ ಅಣ್ಣಮಲೈರನ್ನು ನೇಮಿಸಲಾಗಿದೆ. ಖಡಕ್​​ ಅಧಿಕಾರಿಯಾಗಿ ಗುರುತ್ತಿಸಿಕೊಂಡಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು. ತಮಿಳುನಾಡಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅವರಕುರುಚಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ …

Read More »

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸೈಕಲ್ ರ‍್ಯಾಲಿ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಈ ಮೊದಲು ದಿನ ಬಳಕೆ ವಸ್ತುಗಳ ಬೆಲೆ ಹಾಗೂ ಇಂಧನ ಬೆಲೆ ಏರಿಕೆ …

Read More »

8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ಸಿಗುವುದು ಅನುಮಾನ!

ಬೆಂಗಳೂರು : ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಕಾರಣದಿಂದ ಸರ್ಕಾರಿ/ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ಸಿಗುವುದು ಅನುಮಾನ ಎನ್ನಲಾಗಿದೆ. 2019-20 ನೇ ಸಾಲಿನಲ್ಲಿ ರಾಜ್ಯದಲ್ಲಿ 2,44,901 ಬಾಲಕಿಯರು ಹಾಗೂ 2,59,624 ಬಾಲಕರಿಗೆ ಸೈಕಲ್ ವಿತರಣೆ ಮಾಡಲಾಗಿತ್ತು. ಕಳೆದ ವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಅಂದಾಜು ಇತ್ತು. ಆದರೆ ಕೊರೊನಾ …

Read More »

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ತಿರಸ್ಕರಣೆ ಮಾಡಿ, ಪುನರಾವರ್ತಿತ ವಿದ್ಯಾರ್ಥಿಗಳ ಗಮನಕ್ಕೆ!

ಬೆಂಗಳೂರು : 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಈ ಹಿಂದಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ತಿರಸ್ಕರಣೆ ಮಾಡಿ, ಪುನರಾವರ್ತಿತ ಅಭ್ಯರ್ಥಿಯಾಗಿದ್ದರೇ, ಹಿಂದಿನ ಪರೀಕ್ಷೆಯ ಅಂಕ ಪಡೆಯಬಹುದು, ಇಲ್ಲವೇ ಫಲಿತಾಂಶ ಘೋಷಣೆಯ ಬಗ್ಗೆ ಅವಕಾಶವನ್ನು ನೀಡಿ ತಮ್ಮ ನಿಲುವನ್ನು ಅರ್ಜಿಯೊಂದಿಗೆ ಸಲ್ಲಿಸಲು ಜುಲೈ.12, 2021ರವರೆಗೆ ಅವಕಾಶ ನೀಡಲಾಗಿದೆ ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19ರ ಸಾಂಕ್ರಾಮಿಕ ರೋಗದ ತೀವ್ರತೆ ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ …

Read More »

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಮಗ್ರ ಅಭಿವೃದ್ಧಿಗಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್.ಡಿ.ಪಿ.ಆರ್. ಇಲಾಖೆಯ 25 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೆಳವಂಕಿ ಗ್ರಾಮ ಪಂಚಾಯತಿ ಸಮಗ್ರ …

Read More »

ಗೋಕಾಕದಲ್ಲಿ ಕೋವಿಡ ಲಸಿಕೆ ಕೊರತೆ, ಕಾದು ನೋಡುತ್ತಿರುವ ಜನತೆ!

–C L ಖಡಕಭಾಂವಿ ಗೋಕಾಕ: ತಾಲೂಕಿನಲ್ಲಿ ದಿನೇ ದಿನೇ ಕೊರೊನಾ ಲಸಿಕೆ ಕೊರತೆ ಹೆಚ್ಚಾಗುತ್ತಿದೆ. ಲಸಿಕೆ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಕ್ಸಿನ್ ಕೇಂದ್ರದಲ್ಲಿ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ನಗರ ಹಾಗೂ ಅನೇಕ ಹಳ್ಳಿಗಳಲ್ಲಿ ಜನರು ಲಸಿಕೆಗಾಗಿ ಕಾಯುತ್ತಿದ್ದಾರೆ. ನಿನ್ನೆ ಲಸಿಕೆ ಪಡೆಯಲು ಬಂದಾಗ ನಾಳೆ ಬನ್ನಿ ಎಂದಿದ್ದರು. ಆದರೆ ಇಂದು ಔಟ್ ಆಫ್ ಸ್ಟಾಕ್ ಎಂದು ಹೇಳುತ್ತಿದ್ದಾರೆ.ಈಗ “ನಾವು ಏನು ಮಾಡಬೇಕು, ಇನ್ನೂ ಏವಾಗ …

Read More »

ಗೋಕಾಕ ಮತಕ್ಷೇತ್ರದ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ.

ಗೋಕಾಕ: ಮತಕ್ಷೇತ್ರದ ಗ್ರಾಮಗಳಲ್ಲಿ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ …

Read More »

ಮೂಡಲಗಿಯಲ್ಲಿ ನೂತನ ಕ್ರೀಡಾ ಮಳಿಗೆ ಉದ್ಘಾಟಿಸಿದ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ

ಮೂಡಲಗಿ: ಪಟ್ಟಣದ ಗೋಕಾಕ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ‘ಪುಣ್ಯಕೋಟಿ ಸ್ಪೋರ್ಟ್ಸ್ ಮಳಿಗೆ’ಯನ್ನು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನೂತನ ಕ್ರೀಡಾ ಸಾಮಗ್ರಿಗಳ ಮಳಿಗೆಗೆ ಶುಭ ಹಾರೈಸಿದರು. ಮಳಿಗೆಯಲ್ಲಿನ ಸಾಮಗ್ರಿಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಳಿಗೆಯ ಮಾಲೀಕರಾದ ಚಂದ್ರೇಶ ಶೆಟ್ಟಿ ಹಾಗೂ ಬಸವರಾಜ ಹೊಸಮನಿ ಅವರು ರಾಹುಲ್ ಅವರನ್ನು ಸನ್ಮಾನಿಸಿದರು. ಮಳಿಗೆಯ ಮಾಲೀಕರ ಸ್ನೇಹಿತರು, ಬಂಧುಗಳು ಸೇರಿ ಇನ್ನಿತರರು …

Read More »