Breaking News

ರಾಜ್ಯ

” ನೆರೆ ರಾಜ್ಯದ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ “

ಬೆಳಗಾವಿ : ಸಂಭವನೀಯ ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ರಾಜ್ಯದ ಗಡಿಭಾಗದಲ್ಲಿ ಇರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ ಶನಿವಾರ ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್‌. ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಒಂದು ವೇಳೆ …

Read More »

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ;ಗೋಕಾಕ ನಗರದಲ್ಲಿ ಜೆಡಿಎಸ್ ದಿಂದ ಪ್ರತಿಭಟನೆ.

ಗೋಕಾಕ್ : ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಾತ್ಯತೀತ ಜನತಾದಳ ತಾಲೂಕು ಘಟಕದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಅವರ ನೇತೃತ್ವದಲ್ಲಿ ತಹಶೀಲ್ದಾರ ಮುಖಾಂತರ ರಾಜ್ಯಪಾಲರಿಗೆ ಗುರುವಾರದಂದು ತಹಶೀಲ್ದಾರ ಕಛೇರಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಂಕರ ಮಾಡಲಗಿ ಕೊರೋನಾ ಸಂಕಷ್ಟದ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ತೈಲ, ಗ್ಯಾಸ್ ,ವಿದ್ಯುತ್ ದರ, ರಸಗೋಬ್ಬರ ಹಾಗೂ ವಿವಿಧ ವಸ್ತುಗಳ ಬೆಲೆಗಳನ್ನು ಬೇಕಾಬಿಟ್ಟಿಯಾಗಿ ಏರಿಸಿರುವದರಿಂದ ಜನರ ಬದುಕು …

Read More »

ಆಕ್ಸಿಜನ್ ಪ್ಲಾಂಟ್ ಲೋಕಾರ್ಪಣೆ, ಟ್ಯಾಬ್, ಹೊಲಿಗೆ ಯಂತ್ರ ವಿತರಣೆ ಮಾಡಿದ ರಮೇಶ್ ಜಾರಕಿಹೊಳಿ.

ಗೋಕಾಕ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ಲೋಕಾರ್ಪಣೆ ರಮೇಶ್ ಜಾರಕಿಹೊಳಿ ಅವರು ಮಾಡಿದರು. ವಿವಿಧ ಸರ್ಕಾರಿ ಯೋಜನೆಗಳಿಗೆ ಚಾಲನೆ – ಗೃಹಕಚೇರಿ ಎದುರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾ‌ಬ್‌ ವಿತರಣೆ – ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ, ಮಡೆಪ್ಪಾ ತೋಳಿನವರ, ನಗರ ಬಿಜೆಪಿ …

Read More »

ಪಕ್ಷ ಸಂಘಟನೆಗೆ ಒತ್ತು ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೂಚನೆ

ಬಾಗಲಕೋಟೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸತೀಶ ಜಾರಕಿಹೊಳಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಸನ್ಮಾನಿಸಿದರು. ರಾಹುಲ್ ಅವರನ್ನು ಸಂತಸದಿಂದ ಬರಮಾಡಿಕೊಂಡ ಕಾರ್ಯಕರ್ತರು: ಸತೀಶ ಅವರೊಂದಿಗೆ ಆಗಮಿಸಿದ್ದ ಕಾಂಗ್ರೆಸ್ ಯುವ ನಾಯಕ‌ ರಾಹುಲ್ ಜಾರಕಿಹೊಳಿ ಅವರನ್ನು ಕೂಡ ಮುಖಂಡರು ಹಾಗೂ ಕಾರ್ಯಕರ್ತರು ನಗುಮೊಗದಿಂದಲೇ ಬರಮಾಡಿಕೊಂಡರು. ರಾಹುಲ್ …

Read More »

ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಅವರು ಚಾಲನೆ !

ಗೋಕಾಕ: ಕರ್ನಾಟಕ ಕಟ್ಟದ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಮಾನ್ಯ ಶಾಸಕರಾದ ರಮೇಶ್ ಜಾರಕಿಹೊಳಿ ಅವರ ಕೋರಿಕೆಯ ಮೇರೆಗೆ ಗೋಕಾಕ ಮತಕ್ಷೇತ್ರಕ್ಕೆ 2500 ಆಹಾರ ಸಾಮಗ್ರಿಗಳ ಕೀಟ್ ಕಟ್ಟದ ಮತ್ತು ಇತರೆ ನಿರ್ಮಾಣ ನೊಂದಾಯಿತ ಕಾರ್ಮಿಕರಿಗೆ ನಗರದ ಶಾಸಕರ ಕಛೇರಿಯಲ್ಲಿ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಅವರು ವಿತರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಡೆಪ್ಪಾ ತೋಳಿನವರ, …

Read More »

ಗ್ರಾಪಂ. ತ್ಯಾಜ್ಯ ವಿಲೇವಾರಿ ; ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿ: ಸತೀಶ ಜಾರಕಿಹೊಳಿ

ಬೆಳಗಾವಿ: ಕೆಎಲ್ ಇ ತ್ಯಾಜ್ಯ ವಿಲೇವಾರಿಯನ್ನು ಹೊನಗಾ ವ್ಯಾಪ್ತಿಯ ಹೊನ್ನಾಳಿಯಲ್ಲಿ ತಂದು ಸುಟ್ಟು ಹಾಕಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ದುರ್ನಾತ ಬೀರಿ ಸಮಸ್ಯೆಯಾಗುತ್ತಿದ್ದು, ಇದಕ್ಕೆ ಸೂಕ್ತ ಮಾರ್ಗ ನೀಡಿ ಎಂದು ಗ್ರಾಪಂ.ಅಧ್ಯಕ್ಷ ಆಗ್ರಹಿಸಿದರು. ಇದಕ್ಕೆ , ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ” ಶಾಸಕ ಸತೀಶ ಜಾರಕಿಹೊಳಿ” ಅವರು ಸಮಸ್ಯೆಯಾದರೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎಂದು ಸಲಹೆ ನೀಡಿದರು. ಇಲ್ಲಿನ ತಾಲೂಕು ಪಂಚಾಯತ ಸಭಾಂಗಣದಲ್ಲಿ ಇಂದು( ಮಂಗಳವಾರ) ನಡೆದ ತಾಲೂಕು ಪಂಚಾಯತ …

Read More »

ಗೋಕಾಕದಲ್ಲಿ ಲಸಿಕೆ ಪಡೆಯಲು ಜನರು ನೂಕು-ನುಗ್ಗಲು॥ಸಾಮಾಜಿಕ ಅಂತರವಿಲ್ಲ ॥ವೈದ್ಯಾಧಿಕಾರಿಗಳು ಏನ ಹೇಳ್ತಾರೆ? ॥

– C L ಖಡಕಭಾಂವಿ. ಗೋಕಾಕ : ಕೋವಿಡ್ ಸೋಂಕು ಹೊಡೆದಟ್ಟಲು ಲಸಿಕಾ ಅಭಿಯಾನ ಪ್ರಾರಂಭಿಸಲಾಗಿದೆ. ಆದರೆ, ಈ ಅಭಿಯಾನದಲ್ಲಿ ನಾಗರಿಕರು ಸಾಮಾಜಿಕ ಅಂತರವನ್ನ ಮರೆತಿರೋದು ಕೋವಿಡ್ ಮತ್ತಷ್ಟು ವ್ಯಾಪಿಸಲಿದೆಯೇ ಎನ್ನುವ ಅನುಮಾನ ಮೂಡುತ್ತಿದೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ಪಡೆಯಲು ಜನ ಜಂಗುಳಿ ಸೇರಿದ್ದು, ಸಾಮಾಜಿಕ ಅಂತರ ಮರೆತ ಘಟನೆ ಗೋಕಾಕದಲ್ಲಿ ನಡೆದಿದ್ದು ಕೋವಿಡ್-19 ಲಸಿಕಾ ಕೇಂದ್ರಕ್ಕೆ ನೂರಾರು ಜನರು ದೌಡಾಯಿಸಿ,ಲಸಿಕೆ …

Read More »

3ನೇ ಅಲೆ ಹರಡದಂತೆ ಸರ್ಕಾರ ಮುಂಜಾಗ್ರತೆ ವಹಿಸಬೇಕು: ಸತೀಶ ಜಾರಕಿಹೊಳಿ

ಬೆಂಗಳೂರು: ಕೋವಿಡ್ 1, 2 ಅಲೆಬಂದು ಹೋಗಿದೆ. 3ನೇ ಅಲೆ ಬರಲಿದೆ. ಮೊದಲೆರಡು ಅಲೆಗಳಲ್ಲಿ ಬೇರೆಬೇರೆ ಸಮಸ್ಯೆಗಳು ಇದ್ದವು. ಈಗ ಬೇರೆ ಸಮಸ್ಯೆಗಳು ಎದುರಾಗಬಹುದು. ಸರ್ಕಾರ ಇವುಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಮತ್ತು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಸತೀಶ ಜಾರಕಿಹೊಳಿ ಹೇಳಿದರು. ಮಾನವ ಬಂಧುತ್ವ ವೇದಿಕೆಯಿಂದ ಇಂದು (ಜೂ.20) ರಂದು ನಡೆದ 10 ದಿನಗಳ ಆರೋಗ್ಯ ಬಂಧುತ್ವ ಅಭಿಯಾನದ ಸಮಾರೋಪ …

Read More »

ಸುಳೇಭಾವಿಯಲ್ಲಿ ರಮೇಶ ಸಾಹುಕಾರ್ ಅಭಿಮಾನಿಗಳಿಂದ‌ ನೆರವಿನ ಹಸ್ತ||ಕಡು ಬಡವರನ್ನು ಗುರುತಿಸಿ ಸಹಾಯ ನೀಡಿದ ಅಭಿಮಾನಿಗಳು||

ಬೆಳಗಾವಿ: ಲಾಕ್‌ಡೌನ್‌ದಿಂದ ಸಂಕಷ್ಟಕ್ಕೀಡಾಗಿರುವ ತಾಲೂಕಿನ ಸುಳೇಭಾವಿ ಗ್ರಾಮದ ಕಡು ಬಡವರನ್ನು ಗುರುತಿಸಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ರವಿವಾರ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು. ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಆವರಣದಲ್ಲಿ ದಿನಸಿ ಕಿಟ್‌ಗಳನ್ನು ನೀಡಲಾಯಿತು. ಗ್ರಾಮದಲ್ಲಿ ಕಡು ಬಡವರನ್ನು ಗುರುತಿಸಿ ಅಗತ್ಯ ಇರುವ ಅಗತ್ಯ ವಸ್ತುಗಳ ಕಿಟ್‌ಗಳನ್ನು ನೀಡಿ ಮಾನವೀಯತೆ ಮೆರೆಯಲಾಯಿತು. ಗೋಕಾಕ ನಗರ ಬಿಜೆಪಿ ಘಟಕ ಅಧ್ಯಕ್ಷ ಭೀಮಶಿ …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ 13 ಪ್ರಾಥಮಿಕ …

Read More »