Breaking News

ಅಂತರಾಷ್ಟ್ರೀಯ

*ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ.!*

ಗೋಕಾಕ: ಗೋಕಾಕ ಮತಕ್ಷೇತ್ರದ ಉಪ್ಪಾರಟ್ಟಿ ಹಾಗೂ ಮಾಲದಿನ್ನಿ ಗ್ರಾಮದಲ್ಲಿ ೧ ಕೋಟಿ ೬೦ ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ಶನಿವಾರದಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನೀರಾವರಿ ಇಲಾಖೆಯಿಂದ ಎಸ್‌ಇಪಿಟಿಎಸ್‌ಪಿ ಯೋಜನೆಯಡಿಯಲ್ಲಿ ೮೫ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ, ೧೫ ಲಕ್ಷ ರೂಪಾಯಿ ವೆಚ್ಚದ ಸಮುದಾಯ ಭವನ. ೨೦ ಲಕ್ಷ ರೂಪಾಯಿ …

Read More »

*ಖಿಳೇಗಾವ್ ಕೆಂಪವಾಡ ಬಸವೇಶ್ವರ ಏತ ನೀರಾವರಿ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌.*

ಅಥಣಿ ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಸ್ಥಳ ಪರಿವೀಕ್ಷಣೆ ಮಾಡಿದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ನಂತರ ಐನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ …

Read More »

ಗ್ರಾಮ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಿ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ.

ಬೆಳಗಾವಿ: ಗ್ರಾಪಂಗೆ ಆಯ್ಕೆಯಾಗಿರುವ ನೂತನ ಸದಸ್ಯರು  ಗ್ರಾಮಗಳ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಸಲಹೆ ನೀಡಿದರು. ಸವದತ್ತಿ ತಾಲೂಕಿನ ಮುರಗೋಡದಲ್ಲಿ ಇಂದು ನೂತನ ಗ್ರಾಮ ಪಂಚಾಯಿತಿ    ಸದಸ್ಯರ  ಭೇಟಿ ಮಾಡಿ ಮಾತುಕತೆ ನಡೆಸಿ ಅಭಿನಂದನೆ ಸಲ್ಲಿಸಿದರು.  ಗ್ರಾಮದ ಜನತೆ ನಿಮ್ಮ ಮೇಲೆ ವಿಶ್ವಾಸವಿಟ್ಟು,  ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ.  ಅದೇ ರೀತಿ ನೀವು ಕೂಡ ಗ್ರಾಮ ಅಭಿವೃದ್ದಿಗೆ ಮಹತ್ವ ನೀಡಬೇಕು. ಸರ್ಕಾರದ ಯೋಜನೆಗಳ …

Read More »

ನೆರೆ ಸಂತ್ರಸ್ಥರ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಸಂಸದ ಈರಣ್ಣ ಕಡಾಡಿ ಅವರೊಂದಿಗೆ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಹೈಡ್/ಡೆಲಿಟ್ ಆದ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಬೇಕು. ಮಾರ್ಚ ತಿಂಗಳ ಅಂತ್ಯದೊಳಗೆ ವಸತಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ …

Read More »

ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ : ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ …

Read More »

ಮೂಡಲಗಿಗೆ ಶೀಘ್ರ ಉಪನೋಂದಣಾಧಿಕಾರಿಗಳ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿಂದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಾಧಿಕಾರಿಗಳ ಕಛೇರಿ …

Read More »

*ಹಿರಿಯ ಪ್ರಚಾರಕ ದೇಸಾಯಿ ನಿಧನಕ್ಕೆ ಕಂಬನಿ ಮಿಡಿದ ಸಚಿವ ರಮೇಶ್ ಜಾರಕಿಹೊಳಿ‌*

ಕಳೆದ ಏಳು ದಶಕಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಮಾಜ ಸೇವೆ ಮಾಡುತ್ತಿದ್ದ *ಶ್ರೀ ಬಾಬುರಾವ್ ದೇಸಾಯಿ* ಅವರ ಸಾವು ಅತೀವ ದುಃಖವನ್ನುಂಟುಮಾಡಿದೆ ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಕಂಬನಿ‌ ಮಿಡಿದಿದ್ದಾರೆ. ಸಂಘದ ವಿವಿಧ ಸ್ತರದ ಜವಾಬ್ದಾರಿಗಳೊಂದಿಗೆ ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ಅಯೋಧ್ಯೆಯ ರಾಮ ಜನ್ಮಭೂಮಿ ಆಂದೋಲನದ‌ ಪ್ರಮುಖ ಸಂಚಾಲಕರಾಗಿ‌ ಕೆಲಸ‌ ಮಾಡಿದ್ದ ದೇಸಾಯಿ ಅವರು …

Read More »

*ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಕಾಂಗ್ರೆಸ್ ದೇಶಕ್ಕೆ ಮಾದರಿ : ಶಾಸಕ ಸತೀಶ ಜಾರಕಿಹೊಳಿ ಹೇಳಿಕೆ*

ಚಿಕ್ಕೋಡಿ:  ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷ ಪೂರೈಸಿದ  ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಉತ್ತಮ ಆಡಳಿತ ನೀಡಿದ ಉದಾಹರಣೆ ಇದೆ. ಅದೇ ರೀತಿ ಮತ್ತೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಯಕ್ಸಂಬಾ ಪಟ್ಟಣದಲ್ಲಿ ಶುಕ್ರವಾರ ನಡೆದ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸತ್ಕಾರ ಹಾಗೂ ಅನ್ನಪೂರ್ಣೇಶ್ವರಿ ಸಂಸ್ಥೆ ಆಯೋಜಿಸಿರುವ ಹೊಲಿಗೆ ಯಂತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಹಿಂದೆ ಕಾಂಗ್ರೆಸ್ …

Read More »

ಶಿವಮೊಗ್ಗ ದುರಂತಕ್ಕೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಕಂಬನಿ.

ಶಿವಮೊಗ್ಗ :  ಜಿಲ್ಲೆಯ ಹುಣಸೋಡು  ಗಣಿ ಪ್ರದೇಶದಲ್ಲಿ ಜಿಲಿಟಿನ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದಿರುವ ಈ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ …

Read More »

ಕೇಂದ್ರ ಮಾಜಿ ಸಚಿವ ಬುಟಾ ಸಿಂಗ್ ವಿಧಿವಶ :ಸಂತಾಪ ಸೂಚಿಸಿದ ಶಾಸಕ ಸತೀಶ್ ಜಾರಕಿಹೊಳಿ.

ಹೊಸದಿಲ್ಲಿ:  ಕೇಂದ್ರ ಸಚಿವ ಹಾಗೂ ರಾಜಸ್ಥಾನದ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಬುಟಾ ಸಿಂಗ್ (86) ಅವರು ಶನಿವಾರ ವಿಧಿವಶವರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬುಟಾ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಜಲೋರ್-ಸಿರೋಹಿ ಸಂಸದೀಯ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದ ಬುಟಾ ಸಿಂಗ್ ಅವರು, ಲಕ್ಷಾಂತರ ಬೆಂಬಲಿಗರನ್ನು ಹೊಂದಿದ್ದಾರೆ. ಬುಟಾ ಸಿಂಗ್ ಅವರ …

Read More »