ಲಖನೌ: ಬಹುತೇಕ ನಿಯಂತ್ರಣಕ್ಕೆ ಬಂದಿದ್ದ ಕರೊನಾ ಸೋಂಕು ದೀಪಾವಳಿ ಹಬ್ಬದ ನಂತರ ಕೊಂಚ ಏರಿಕೆ ಕಾಣಲಾರಂಭಿಸಿದೆ. ಕೆಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣಕ್ಕೆಂದು ಉತ್ತರ ಪ್ರದೇಶ ಸರ್ಕಾರ ಕಠಿಣ ನಿಯಮವನ್ನು ಜಾರಿಗೊಳಿಸಿದೆ. ಉತ್ತರ ಪ್ರದೇಶದಲ್ಲಿ ಬುಧವಾರದಿಂದ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಯನ್ನು ಜಾರಿಗೊಳಿಸಲಾಗಿದೆ. ಈ ಕಾಯ್ದೆಯ ಅನುಸಾರ ಇನ್ನು ಆರು ತಿಂಗಳ ಕಾಲ ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ನಿಗಮಗಳಲ್ಲಿ ಯಾವುದೇ ರೀತಿಯ ಮುಷ್ಕರ …
Read More »ಕೊರೋನಾ ಲಸಿಕೆ : ಔಷಧಿ ಸಂಸ್ಥೆಗೆ ಮೋದಿ ಭೇಟಿ ಸಾಧ್ಯತೆ
ಪುಣೆ, ನವೆಂಬರ್ 26: ಕೊರೊನಾ ವೈರಸ್ ಸೋಂಕಿಗೆ ಲಸಿಕೆ ಅಂತಿಮಗೊಂಡು ಮಾರುಕಟ್ಟೆಗೆ ಬರುವ ಆಶಯ ವ್ಯಕ್ತವಾಗಿದ್ದು, ಕೋವಿಡ್ 19 ಲಸಿಕೆ ಉತ್ಪಾದನೆ ಮತ್ತು ಹಂಚಿಕೆಯ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಜೆನ್ನೋವಾ ಬಯೋಫಾರ್ಮಸಿಟಿಕಲ್ಸ್ ಸಂಸ್ಥೆಗಳಿಗೆ ಶನಿವಾರ ಅಥವಾ ಭಾನುವಾರ ಭೇಟಿ ನೀಡುವ ಸಾಧ್ಯತೆ ಇದೆ. ಈ ಎರಡೂ ಸಂಸ್ಥೆಗಳು ಮಹಾರಾಷ್ಟ್ರದ ಪುಣೆಯಲ್ಲಿದ್ದು, ಲಸಿಕೆ ಉತ್ಪಾದನೆ ಮತ್ತು ಪರೀಕ್ಷೆಯ ವಿವಿಧ …
Read More »ನಿವಾರ್ ಚಂಡಮಾರುತ ಕುರಿತು ಗೃಹ ಅಮಿತ್ ಶಾ ತಮಿಳುನಾಡು, ಪುದುಚೇರಿ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ
ಚೆನ್ನೈ : ನಿವಾರ್ ಚಂಡಮಾರುತವು ಮತ್ತಷ್ಟು ಬಲವನ್ನು ಕಡಿಮೆ ಮಾಡುತ್ತದೆ ಮತ್ತು ಮುಂದಿನ ಮೂರು ಗಂಟೆಗಳಲ್ಲಿ ಚಂಡಮಾರುತದ ಬಿಳುಗಾಳಿಯನ್ನು ಸೃಷ್ಟಿ ಮಾಡಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಬೆಳಿಗ್ಗೆ ಪ್ರಕಟಿಸಿದೆ. ಗುರುವಾರ ಮುಂಜಾನೆ ಪುದುಚೇರಿ ಬಳಿ ನಿವಾರ್ಚಂಡಮಾರುತದಿಂದಾಗಿ ಭೂಕುಸಿತದ ಸಂಭವಿಸಿತ್ತು. ಪುದುಚೇರಿ ಮತ್ತು ತಮಿಳುನಾಡು ಎರಡೂ ಕಡೆ ಭಾರೀ ಮಳೆಯಾಗಿದೆ. ಐಎಂಡಿ ಪ್ರಕಾರ, ನಿವಾರ್ ಕೇಂದ್ರಾಡಳಿತ ಭೂಪ್ರದೇಶವನ್ನು ದಾಟಿದ ನಂತರ ತೀವ್ರವಾದ ಬಿರುಗಾಳಿಯಿಂದ ತೀವ್ರ ಚಂಡಮಾರುತಕ್ಕೆ ದುರ್ಬಲಗೊಂಡಿತು. …
Read More »ಡಿ.31ರ ವರೆಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಬಂದ್
ಕೊರೋನಾ ಹಾವಳಿಯಿಂದ ಬಂದ್ ಆಗಿರುವ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಡಿಸೆಂಬರ್ 31ರವೆಗೂ ಬಂದ್ ಆಗಿರಲಿದೆ ಅಂತ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಪ್ರಕಟಣೆ ಹೊರಡಿಸಿದೆ. ಇದರ ಪ್ರಕಾರ ಕಾರ್ಗೋ ಅಥವಾ ಸರಕು ವಿಮಾನ ಹೊರತುಪಡಿಸಿ, ಕೇಸ್ ಟು ಕೇಸ್ ಬೇಸಿಸ್ ಮೇಲೆ ಡಿಜಿಸಿಎ ಅನುಮತಿ ನೀಡಿರುವ ವಿಮಾನಗಳನ್ನ ಹೊರತುಪಡಿಸಿ ಬೇರೆ ಯಾವುದೇ ವಿಮಾನ ಭಾರತದಿಂದ ವಿದೇಶಕ್ಕೆ ಹಾರಾಟ ನಡೆಸುವಂತಿಲ್ಲ ಮತ್ತು ವಿದೇಶದಿಂದ ಯಾವುದೇ ವಿಮಾನ ಭಾರತದಲ್ಲಿ ಲ್ಯಾಂಡ್ ಆಗುವಂತಿಲ್ಲ. ಡಿಸೆಂಬರ್ …
Read More »ಪೊಲೀಸ್ ವಿರುದ್ಧ ಪೊಲೀಸರಿಂದ ದೂರು!
ಬೆಂಗಳೂರು : ಠಾಣೆಯಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಠಾಣೆಯ ಇನ್‌ಸ್ಪೆಕ್ಟರ್ ವಿರುದ್ಧ ಪೊಲೀಸ್ ಸಹದ್ಯೋಗಿಗಳೇ ಜಂಟಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇನ್‌ಸ್ಪೆಕ್ಟರ್ ರಾಘವೇಂದ್ರ ಬಾಬು ಎಂಬುವವರು ಜನವರಿ 18ರಂದು ಕೊಡಿಗೇಹಳ್ಳಿ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದಾರೆ. ಮುಖ್ಯಪೇದೆಯೊಬ್ಬರ ಚಾಡಿ ಮಾತನ್ನು ಕೇಳಿಕೊಂಡು ಸಿಬ್ಬಂದಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ. ಠಾಣೆಗೆ ಬರುವ ದೂರುದಾರರಿಗೂ ಭೀತಿ ಹುಟ್ಟಿಸಿ, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಮುಖ್ಯಪೇದೆ …
Read More »ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಕಳೆದ ವರ್ಷ ಪ್ರವಾಹ ಹಾಗೂ ನಿರಂತರ ಮಳೆಯಿಂದ ಹಾನಿಗೀಡಾಗಿರುವ ಸಂತ್ರಸ್ತರ ಕುಟುಂಬಗಳಿಗೆ 15 ದಿನಗಳೊಳಗಾಗಿ ವಸತಿ ಸೌಕರ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ನಗರದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಅವರು, ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಬೇಡಿಕೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಂಡುಕೊಳ್ಳಬೇಕೆoದು ಅವರು ಹೇಳಿದರು. 2019 ರ ಅಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರವಾಹ …
Read More »ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅ.8ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ …
Read More »ನೀರಾವರಿ ಯೋಜನೆಗಳಿಗೆ ಅನುಮತಿ; ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ ಜಾರಕಿಹೊಳಿ.
ನವದೆಹಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಯೋಜನೆಗೆ ಬೇಕಾಗಿರುವ ಕೇಂದ್ರ ಸರ್ಕಾರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಅವರು ಮಾತನಾಡಿದರು. ರಾಜ್ಯದ ವಿವಿಧ ಯೋಜನೆಗಳ …
Read More »ಬಲಿಪಾಡ್ಯಮಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
ಇಂದು *ಬಲಿಪಾಡ್ಯಮಿ.* ಚಕ್ರವರ್ತಿ ಬಲೀಂದ್ರರು ಭೂಲೋಕಕ್ಕೆ ಬರುವ ದಿನ ಎಂದು ಪ್ರತೀತಿ ಇರುವ ಈ ದಿನ ನಮ್ಮ-ನಿಮ್ಮೆಲ್ಲರ ಮನೆಗಳಲ್ಲಿ ಸಂಭ್ರಮವನ್ನು ತರಲಿ. ಅಂಧಕಾರವನ್ನು ಕಳೆಯುವ *ಕಾರ್ತಿಕ ಮಾಸ* ಪ್ರಾರಂಭವಾಗುವುದೇ ಪಾಡ್ಯದ ಈ ದಿನದಂದು ಬೆಳಗುವ ದೀಪದ ಬೆಳಕಿನಿಂದ. ಇದು ಎಲ್ಲರ ಬಾಳನ್ನು ಬೆಳಗಿಸಲಿ. ಸಂಕಷ್ಟಗಳು ಹಾಗೂ ಸಾಂಕ್ರಾಮಿಕದ ಕತ್ತಲು ಕಳೆದು ಸಂತಸ ಸಂಭ್ರಮಗಳ ಬೆಳಗು ಮೂಡಲಿ ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಶುಭ ಕೋರಿದ್ದಾರೆ. ನಮ್ಮನ್ನು ಕಾಯುತ್ತಿರುವ …
Read More »ದೀಪಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
*ದೀಪಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ* ಅಂಧಕಾರವನ್ನು ಹೊಡೆದೋಡಿಸಿ ಬೆಳಕಿನತ್ತ ಸಾಗುವ ದೀಪಾವಳಿ ಹಬ್ಬದ ಈ ಶುಭ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ನಾಡಿನ ಜನತೆಗೆ ಶುಭಹಾರೈಸಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಸುರಕ್ಷಿತವಾಗಿ ದೀಪದ ಹಬ್ಬವನ್ನು ಆಚರಿಸಿ ಎಂದು ಸಚಿವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ನಮ್ಮ ನಮ್ಮ ಮನೆಗಳಲ್ಲಿ ನಂದಾದೀಪವನ್ನು ಬೆಳಗೋಣ ; ಮಾಲಿನ್ಯರಹಿತ ಹಸಿರು …
Read More »