ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಾ ? ಎಂಬ ಕುತೂಹಲ ಕೆರಳಿಸಿದೆ. ಕಳೆದ ತಿಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ, ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …
Read More »ಕೆಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಮೇಶ್ ಜಾರಕಿಹೊಳಿ ಸಂತಾಪ
ಬೆಂಗಳೂರು. ಅ. 8: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಮವಿಲಾಸ ಪಾಸ್ವಾನ್ ಅವರು ಎಂಟು ಬಾರಿ ಸಂಸದರಾಗಿ, ಹಲವು ಬಾರಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳ ಮತ್ತು ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವರು …
Read More »ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸಿಎಂ ಭೇಟಿ; ಕುಟುಂಬಕ್ಕೆ ಸಾಂತ್ವನ
ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ …
Read More »ಬಾಬ್ರಿ ಕಟ್ಟಡ ಕುರಿತು ತೀರ್ಪು – ಸತ್ಯಮೇವ ಜಯತೇ ಎಂದ ಸಚಿವ ರಮೇಶ ಜಾರಕಿಹೊಳಿ
ಬಾಬ್ರಿ ಕಟ್ಟಡ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯವು ಇಂದು ನೀಡಿದ ತೀರ್ಪು ಐತಿಹಾಸಿಕವಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಬಣ್ಣಿಸಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ ಮಾತನಾಡಿದ ಸಚಿವ ಜಾರಕಿಹೊಳಿ, ಸತ್ಯ ಎಂದಿಗೂ ಸತ್ಯವೇ, ಭಾರತೀಯ ಜನತಾ ಪಾರ್ಟಿ ಸಹಾ ಇದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿತ್ತು. ಈಗ ನ್ಯಾಯದೇವತೆಯೂ ಸಹಾ ನಮ್ಮ ನಂಬಿಕೆಯನ್ನು ಪುರಸ್ಕರಿಸಿದಂತಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು. ನಮ್ಮ ಭಾರತೀಯ ಜನತಾ ಪಾರ್ಟಿಯ ಹಿರಿಯ …
Read More »ಎಲ್.ಕೆ .ಅಡ್ವಾಣಿ ಸೇರಿ 32 ಜನ ನಿರ್ದೋಷಿಗಳು.
ನವದೆಹಲಿ:ದೇಶವೇ ಕುತೂಹಲದಿಂದ ಕಾಯುತ್ತಿರುವ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ. ಲಕ್ನೋದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು …
Read More »ಗಾನ ಗಂಧರ್ವ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ.
ಗಾನ ಗಂಧರ್ವ *ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ* ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ ಪಡೆದಿದ್ದ *ಎಸ್ ಪಿ ಬಿ* ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ ತುಂಬಾ ಬಡವಾಗಿದೆ. ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ *ಎಸ್.ಪಿ. ಬಾಲಸುಬ್ರಹ್ಮಣ್ಯಂ* ಅವರು 16 ಭಾರತೀಯ ಭಾಷೆಗಳಲ್ಲಿ 4೦,೦೦೦ ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ …
Read More »ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ. ನಾರಾಯಣರಾವ್ ನಿಧನ!
ಬೆಂಗಳೂರು : ಕೊರೊನಾದಿಂದ ಬಳಲುತ್ತಿದ್ದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಇಂದು ನಿಧನರಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಮೃತಪಟ್ಟ ರಾಜಕೀಯ ಜನಪ್ರತಿನಿಧಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ನಿನ್ನೆಯಷ್ಟೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೊನಾದಿಂದಾಗಿ ಸಾವನಪ್ಪಿದ್ದರು. ಇದರ ಬೆನ್ನಲ್ಲೆ ಈಗ ಮತ್ತೊಬ್ಬ ಜನಪ್ರತಿನಿಧಿ ಕೊರೊನಾಗೆ ಬಲಿಯಾಗಿರುವುದು, ಇಡೀ ಕರ್ನಾಟಕವನ್ನು ಬೆಚ್ಚಿಬಿಳಿಸಿದೆ. ಸುಮಾರು 25 ದಿನಗಳಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ …
Read More »ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿoದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭçಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004 ರಿಂದ ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿ 2019 …
Read More »ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ!
ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ ನಷ್ಟವಾಗಿದೆ. …
Read More »