ಬಾಗಲಕೋಟೆ: ವಾಲ್ಮೀಕಿ ಸಮುದಾಯಕ್ಕೆ ರಾಜ್ಯದಲ್ಲಿ 70 ರಿಂದ 80 ಸೀಟು ಗೆಲ್ಲಿಸುವ ಸಾಮರ್ಥ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಖಾಸಗಿ ಹೋಟೆಲ್ ಸಭಾಭವನದಲ್ಲಿ ರವಿವಾರ ನಡೆದ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಎಸ್ಟಿ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಎಸ್ಟಿ ಸಮುದಾಯದ ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಮುದಾಯದ ಜನರಿಗೆ ಪಕ್ಷ ಸಂಘಟನೆ, ಸೈದ್ಧಾಂತಿಕ ತರಬೇತಿ: ಬೇರೆ ಬೇರೆ ಪಕ್ಷಗಳತ್ತ …
Read More »ನಕಲಿ ಕೋವಿಡ ಪಾಸಿಟಿವ್ ರಿಪೋರ್ಟ್ ಸೃಷ್ಟಿಸಿದವರ ಬಂಧನ!
ಬಾಗಲಕೋಟೆ: ನಕಲಿ ಗಂಟಲು ದ್ರವ ಮಾದರಿ ಸಂಗ್ರಹಿಸಿ ಅದನ್ನು ಕೋವಿಡ್ ಪಾಸಿಟಿವ್ ಎಂದು ಖೊಟ್ಟಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ ಪರಿಹಾರದ ಮೊತ್ತ ಪಡೆಯುವ ಪ್ರಯತ್ನ ನಡೆಸಿದ್ದ ಇಲ್ಲಿನ ಜಿಲ್ಲಾ ಆಸ್ಪತ್ರೆಯ ಇಬ್ಬರು ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಖಾಸಗಿಯವರು ನಡೆಸುವ ಸಿಟಿ ಸ್ಕ್ಯಾನ್ ವಿಭಾಗದ ಸ್ಟಾಫ್ ನರ್ಸ್ ಬಸವರಾಜ ಬಿಲಕೇರಿ ಹಾಗೂ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಮೇಲೆ ನೇಮಕವಾಗಿದ್ದ ಡಾಟಾ ಎಂಟ್ರಿ ಆಪರೇಟರ್ ಬಸನಗೌಡ ಗಿರಿಯಪ್ಪಗೌಡ ಬಂಧಿತರು. …
Read More »ಸಿದ್ದು, ಡಿಕೆಶಿ ಅಷ್ಟೇ ಅಲ್ಲ, ಸಿಎಂ ಕುರ್ಚಿಗಾಗಿ ಇನ್ನೂ ಬಹಳಷ್ಟು ಜನ ರೇಸ್ ನಲ್ಲಿ ಇದ್ದಾರೆ : ಸತೀಶ್ ಜಾರಕಿಹೊಳಿ ಹೇಳಿಕೆ.
ಬಾಗಲಕೋಟೆ : ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಷ್ಟೇ ಅಲ್ಲ, ಇನ್ನೂ ಬಹಳಷ್ಟು ಮಂದಿ ಇದ್ದಾರೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಅದಕ್ಕಾಗಿ ಸಂಘಟನೆ, ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದರು. ಯಡಿಯೂರಪ್ಪ ಅವರು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಇರುತ್ತಾರೋ, ಇಲ್ಲವೋ …
Read More »ನೀರು ಮತ್ತು ನೈರ್ಮಲ್ಯ ಇಲಾಖೆಯ ಬಾಗಲಕೋಟೆ ಉಪ ವಿಭಾಗದ ಸಹಾಯಕ ಎಂಜಿನಿಯರ್ ಎಸಿಬಿ ಬಲೆಗೆ!
ಬಾಗಲಕೋಟೆ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬಾಗಲಕೋಟೆ ಉಪ ವಿಭಾಗದ ಸಹಾಯಕ ಅಭಿಯಂತರ ಅಶೋಕ ತೋಪಲಕಟ್ಟಿ (ಎ.ಎಸ್. ತೋಪಲಕಟ್ಟಿ) ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ 5.15 ಲಕ್ಷ ಮೊತ್ತದ ನಿಷೇಧಿತ ನೋಟು ಪತ್ತೆ ಯಾಗಿದ್ದು, ಅವುಗಳನ್ನು ನೋಡಿದ ಅಧಿಕಾರಿಗಳೂ ದಂಗಾದ ಪ್ರಸಂಗ ನಡೆದಿದೆ. ಕಳೆದ 2016ರಲ್ಲಿಯೇ ಹಳೆಯ 500 ಹಾಗೂ ಸಾವಿರ ಮುಖ ಬೆಲೆಯ ನೋಟುಗಳು ನಿಷೇಧ ಮಾಡಿದ್ದು, ಈಗ ಹಳೆಯ ನೋಟು …
Read More »ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ. ನಾರಾಯಣರಾವ್ ನಿಧನ!
ಬೆಂಗಳೂರು : ಕೊರೊನಾದಿಂದ ಬಳಲುತ್ತಿದ್ದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಇಂದು ನಿಧನರಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಮೃತಪಟ್ಟ ರಾಜಕೀಯ ಜನಪ್ರತಿನಿಧಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ನಿನ್ನೆಯಷ್ಟೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೊನಾದಿಂದಾಗಿ ಸಾವನಪ್ಪಿದ್ದರು. ಇದರ ಬೆನ್ನಲ್ಲೆ ಈಗ ಮತ್ತೊಬ್ಬ ಜನಪ್ರತಿನಿಧಿ ಕೊರೊನಾಗೆ ಬಲಿಯಾಗಿರುವುದು, ಇಡೀ ಕರ್ನಾಟಕವನ್ನು ಬೆಚ್ಚಿಬಿಳಿಸಿದೆ. ಸುಮಾರು 25 ದಿನಗಳಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ …
Read More »ಭ್ರಷ್ಟ ಇಂಜಿನಿಯರ್ ಲಂಚದಾಹ : ಎಸಿಬಿ ಬಲೆಗೆ…..!
ಬದಾಮಿ: ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಎಇಇ(ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನೀಯರ್) .ಕೆ.ಡಿ ಕರಮಳ್ಳಿ , ಲಂಚ ಸ್ವೀಕರಿಸುತ್ತಿರುವ ಸಮಯದಲ್ಲಿ ಎಸಿಬಿ ಅಧಿಕಾರಿಗಳ ದಾಳಿ ಬಲೆಗೆ ಬಿದ್ದಿದ್ದಾರೆ. 2018-19 ನೇ ಸಾಲಿನಲ್ಲಿ ಬಾದಾಮಿ ತಾಲೂಕಿನ ಕಾತರಕಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಕೊಳ್ಳಲಾದ ಕಾಮಗಾರಿಗಳಿಗೆ ಸರಬರಾಜು ಮಾಡಿದ ಕಚ್ಚಾವಸ್ತುಗಳು ಸಂಭಂಧಿಸಿದ ವೋಚರ್ ಮತ್ತು ಅಳತೆ ಪುಸ್ತಕಗಳನ್ನು ನೀಡಲು ಗುತ್ತಿಗೆದಾರರಿಗೆ 60 ಸಾವಿರ ಲಂಚದ …
Read More »ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಾಥ್ !
ವಿಜಯಪುರ: ಆಲಮಟ್ಟಿಯ ಲಾಲ್‌ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಗಳವಾರ ಬಾಗಿನ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ,ವಿಧಾನ ಪರಿಷತ್ ವಿರೋಧ ಪಕ್ಷದನಾಯಕ ಎಸ್.ಆರ್.ಪಾಟೀಲ್, ಜಿ.ಪಂ ಅದ್ಯಕ್ಷೆ ಬಾಯಕ್ಕ ಮೇಟಿ, ಮುದ್ದೇಬಿಹಾಳ ಶಾಸಕ ನಡಹಳ್ಳಿ, ಎಸ್. ಕೆ ಬೆಳ್ಳುಬ್ಬಿ, ಸೇರಿದಂತೆ ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಯ …
Read More »