Breaking News

ಬೆಂಗಳೂರು

ಕೊರೊನಾ 3ನೇ ಅಲೆ ಆತಂಕ; ಕರ್ನಾಟಕ ರಾಜ್ಯ ಸರ್ಕಾರ ಹೈ ಅಲರ್ಟ್ ಸೂಚನೆ.

ಬೆಂಗಳೂರು: 8 ಜಿಲ್ಲೆಗಳಲ್ಲಿ ಕೊವಿಡ್ ಸ್ಥಿತಿಗತಿ ಬಗ್ಗೆ ಸಭೆ ನಡೆಸಿದ್ದೇನೆ. 2ನೇ ಅಲೆಯಲ್ಲೂ ಕೇರಳದಿಂದಲೇ ಸೋಂಕು ಹೆಚ್ಚಾಗಿತ್ತು. ಹೀಗಾಗಿ ಕೇರಳ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಗಳಲ್ಲಿ ವೈದ್ಯಕೀಯ ಸೌಲಭ್ಯ ಹೆಚ್ಚಿಸಲು ಸೂಚಿಸಿದ್ದೇನೆ. ವ್ಯಾಕ್ಸಿನ್‌ ನೀಡುವುದನ್ನೂ ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದು ಕೊವಿಡ್ ಹೆಚ್ಚಿರುವ ಜಿಲ್ಲೆಗಳ ಜತೆ ಸಭೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರಾಜ್ಯಕ್ಕೆ ವ್ಯಾಕ್ಸಿನ್ ಪ್ರಮಾಣ ಹೆಚ್ಚಿಸುವುದಾಗಿ ಕೇಂದ್ರ ಭರವಸೆ ನೀಡಿದೆ. ಕೇಂದ್ರ ಆರೋಗ್ಯ …

Read More »

ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ …

Read More »

ರಾಜೀನಾಮೆ ಬಗ್ಗೆ ಬಹಿರಂಗ ಸುಳಿವು ಕೊಟ್ರಾ ಸಿಎಂ ಬಿ.ಎಸ್. ಯಡಿಯೂರಪ್ಪ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಹುತೇಕ ಪಕ್ಕಾ ಆಗಿದ್ದು, ಇದೇ ಮೊದಲ ಬಾರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬಗ್ಗೆ ಬಹಿರಂಗ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ. ಆದ್ರೆ ನನ್ನ ಕೆಲಸವನ್ನು ಮೆಚ್ಚಿ ಅಧಿಕಾರ ಕೊಟ್ಟಿದ್ದಾರೆ. ರಾಷ್ಟ್ರೀಯ ನಾಯಕರು ಕೊಡುವ ಸೂಚನೆಯಂತೆ ನಾನು ಕೆಲಸಗಳನ್ನು ಮಾಡುತ್ತೇನೆ. ಜುಲೈ 25ರಂದು ವರಿಷ್ಠರು ಸ್ಪಷ್ಟ ಸಂದೇಶ ನೀಡುತ್ತಾರೆ. ಅವರು ನೀಡುವ ಸೂಚನೆಗೆ …

Read More »

ಇನ್ನೂ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ!

ಬೆಂಗಳೂರು, ಜು.21- ಕಳೆದ ಎಂಟತ್ತು ದಿನಗಳಿಂದ ರಾಜ್ಯದ ಹಲವೆಡೆ ಬೀಳುತ್ತಿರುವ ಮಳೆ ಇದೇ ರೀತಿ ಇನ್ನೂ ಒಂದು ವಾರ ಕಾಲ ಮುಂದುವರಿಯುವ ಮುನ್ಸೂಚನೆಗಳಿವೆ. ಮುಂಗಾರು ಚೇತರಿಕೆಯಾಗಿದ್ದು, ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಹಲವು ಜಿಲ್ಲೆಗಳಲ್ಲಿ ಮುಂಗಾರು ಹಂಗಾಮಿನ ಮಳೆ ಕೊರತೆ ನಿವಾರಣೆಯಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಆದರೂ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನ ಹಲವೆಡೆ …

Read More »

ನಾಯಕತ್ವ ಬದಲಾವಣೆ ಚರ್ಚೆ,ಸಚಿವ ಶ್ರೀರಾಮುಲುಗೆ ದೆಹಲಿ ವರಿಷ್ಠರು ಬುಲಾವ್ .

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ, ವಿವಿಧ ಮಠಾಧೀಶರ ಭೇಟಿ, ಶಾಸಕಾಂಗ ಸಭೆ ರದ್ದು, ಜುಲೈ 26ರ ಗಡುವು.. ಎಲ್ಲದರ ಮಧ್ಯೆ ಸಚಿವ ಶ್ರೀರಾಮುಲುಗೆ ದೆಹಲಿ ವರಿಷ್ಠರು ಬುಲಾವ್ ನೀಡಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ. ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರು ಇಂದು ಬೆಳಗ್ಗೆ ದೆಹಲಿಗೆ ಭೇಟಿ ನೀಡಿದ್ದಾರೆ. ಸಚಿವರಿಗೆ ದೆಹಲಿ ಬಿಜೆಪಿ ವರಿಷ್ಠರೇ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ. ನಾಯಕತ್ವ ಬದಲಾವಣೆ ಚರ್ಚೆ ತಾರಕ್ಕೇರಿರುವ ಸಂದರ್ಭದಲ್ಲಿ ಹೈಕಮಾಂಡ್ ಬುಲಾವ್ ಬಿಜೆಪಿಯ ಎರಡೂ …

Read More »

ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ರದ್ದು!

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಜುಲೈ 25 ರಂದು ಸಿಎಂ ಯಡಿಯೂರಪ್ಪ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದೆಲ್ಲಾ ಹೇಳಲಾಗಿತ್ತು. ಸ್ವಾಮೀಜಿಗಳು ಕೂಡ ಸಿಎಂ ಬೆನ್ನಿಗೆ ನಿಂತು ಬಿ.ಎಸ್.ವೈ. ಬದಲಾವಣೆ ಮಾಡಿದ್ರೆ ಸರಿ ಇರಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಕೂಡ ಯಡಿಯೂರಪ್ಪನವರಿಗೆ ಬೆಂಬಲ ನೀಡಿದ್ದು, ಈ ರೀತಿ ಅನೇಕ ಬೆಳವಣಿಗೆಗಳ ನಡುವೆ ಬಿಜೆಪಿಯಲ್ಲಿ ತೆರೆಮರೆಯಲ್ಲೇ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಲು …

Read More »

ಸಿಎಂ ಹುದ್ದೆಗೆ ಏರೋದಕ್ಕೆ ಲಾಭಿ ಆರಂಭ! ಈ ರೇಸ್ ನಲ್ಲಿ ಯಾರ ಇದ್ದಾರೆ ನೋಡಿ.

ಬೆಂಗಳೂರು : ರಾಜ್ಯದಲ್ಲಿ ಜುಲೈ.26ರ ಲೆಕ್ಕಾಚಾರ ಗರಿಗೆದರಿದೆ. ಸಿಎಂ ಬದಲಾವಣೆ ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ಹುದ್ದೆಗೆ ಏರೋದಕ್ಕೆ ಲಾಭಿ ಆರಂಭಗೊಂಡಿದ್ದು, ಈ ರೇಸ್ ನಲ್ಲಿ ಬಿಜೆಪಿಯ ಹಾಲಿ ಸಚಿವರು, ಶಾಸಕರು ತೆರೆ ಮರೆಯಲ್ಲಿ ಲಾಭಿ ನಡೆಸುತ್ತಿದ್ದಾರೆ. ಅದರಲ್ಲೂ ಲಿಂಗಾಯತ ಸಮುದಾಯದ ಅನೇಕ ಹೆಸರುಗಳು ಸಿಎಂ ಪಟ್ಟದ ರೇಸ್ ನಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೆಹಲಿಯ ಪ್ರವಾಸದಲ್ಲಿ ಅನಾರೋಗ್ಯದ ನೆಪದಿಂದಾಗಿ ತಮ್ಮ …

Read More »

ಸಿಸಿಬಿ ಇನ್‌ಸ್ಪೆಕ್ಟರ್ ಸೋಗಿನಲ್ಲಿ 10 ಲಕ್ಷ ರೂ. ಪಡೆದು ವಂಚನೆ!

ಬೆಂಗಳೂರು: ಜಮೀನು ವ್ಯಾಜ್ಯ ಸರಿಪಡಿಸುವುದಾಗಿ ಸಿಸಿಬಿ ಇನ್‌ಸ್ಪೆಕ್ಟರ್ ಸೋಗಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಿಂದ 10 ಲಕ್ಷ ರೂ. ಪಡೆದು ವಂಚಿಸಿದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಜಯನಗರದ ನಿವಾಸಿ ವೆಂಕಟೇಶ್ ಬಂಧಿತ. ಜೆಪಿ ನಗರ ನಿವಾಸಿ ನಾರಾಯಣ್ (88) ಕೊಟ್ಟ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಜಯನಗರ ಪೊಲೀಸರು ವೆಂಕಟೇಶ್‌ನ್ನು ಬಂಧಿಸಿದ್ದಾರೆ. ದೂರುದಾರ ನಾರಾಯಣ್ ನಗರದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ತಾವರೆಕೆರೆ ಹೋಬಳಿ ನರಸಿಂಹಪುರ ಗ್ರಾಮದಲ್ಲಿ 11 ಎಕರೆ …

Read More »

ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶ!

ಮಂಡ್ಯ: ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದಾರೆ. ಕೆಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾದೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಮಾದೇಗೌಡರು ಶಾಸಕರಾಗಿ, ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು. ಕಾವೇರಿ ನದಿ ನೀರಿನ ಹೋರಾಟಗಳ ರೂವಾರಿಯಾಗಿದ್ದ ಅವರು, ನೀರು ಬಿಡುವ ವಿಚಾರದಲ್ಲಿ ಸರ್ಕಾರದ ನಿಲುವು ವಿರೋಧಿಸಿ ಸಂಸದ ಸ್ಥಾನಕ್ಕೆ …

Read More »

ವಿದೇಶಿಯರ ಅಡ್ಡೆಗಳ ಮೇಲೆ ಸಿಸಿಬಿ ದಾಳಿ!

ಬೆಂಗಳೂರು: ಅಪರಾಧಗಳ ರಾಜಧಾನಿಯಾಗಿ ಮಾರ್ಪಾಡು ಆಗುತ್ತಿದೆಯಾ ಅನ್ನುವಷ್ಟು ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಲು ದೃಢ ಸಂಕಲ್ಪ ತೊಟ್ಟಿರುವ ಬೆಂಗಳೂರು ಪೊಲೀಸರು ಕಳೆದ ವಾರ ಸಾವಿರಾರು ರೌಡಿಗಳನ್ನು ಕರೆದು, ಕಟ್ಟೆಚ್ಚರ ನೀಡಿ ಕಳಿಸಿದ್ದಾರೆ. ಅದಾದ ಮೇಲೆ ಪಿಂಚಣಿದಾರರ ಸ್ವರ್ಗವೆಂಬ ಹೆಗ್ಗಳಿಕೆಯ ಬೆಂಗಳೂರಿಗೆ ಪಾತಕ ವಿದೇಶಿಗರು ಪೀಡೆಯಾಗಿ ಪರಿವರ್ತನೆಗೊಂಡಿದ್ದಾರೆ. ಹಾಗಾಗಿ ಇಂದು ಸಿಸಿಬಿ ಪೊಲೀಸರು ಫೀಲ್ಡಿಗೆ ಇಳಿದು ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ವಿದೇಶಿಗರನ್ನು ವಿಚಾರಿಸಿಕೊಂಡಿದ್ದಾರೆ. ಸಿಸಿಬಿ …

Read More »