ಗೋಕಾಕ: ಗೋಕಾಕ್ ನಗರಸಭೆ ಸ.ಕಾ.ಅ.ಪರಿಸರ ಎಮ್ ಎಚ್ ಗಜಕೋಶ,ಹಿರಿಯ ಅರೋಗ್ಯ ನಿರೀಕ್ಷಕರಾದ ಜಯೇಶ ತಾಂಬೋಳೆ ರವರ ತಂಡ ನಗರದ ಪ್ರಮುಖ ಹೋಲ್ಸೇಲ್ ಅಂಗಡಿ ಹಾಗೂ ಕಿರಾಣಿ ಅಂಗಡಿಗಳಿಗೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಅಂದಾಜು 15ಕ್ಕೂ ಹೆಚ್ಚು ಕೆಜಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಜಪ್ತಿ ಮಾಡಿಕೊಂಡಿದ್ದಾರೆ.ಹಾಗೂ ನಾಲ್ಕು ಅಂಗಡಿಗಳಿಗೆ 2000 ದಂಡವನ್ನು ವಿಧಿಸಿದ್ದಾರೆ. ದೇಶಾದ್ಯಂತ ಪ್ಲಾಸ್ಟಿಕ್ ಬಳಕೆ ನಿಷೇಧ: ಗೋಕಾಕ್ ನಗರಸಭೆ ವತಿಯಿಂದ ಕಾರ್ಯಾಚರಣೆ. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ …
Read More »ಕುಟುಂಬ ಪ್ರಬೋಧನ ಕಾರ್ಯಕ್ರಮ!
ಘಟಪ್ರಭಾ: ಕುಟುಂಬ ಪ್ರಬೋಧನ- ಕರ್ನಾಟಕ ಉತ್ತರ (ರಾಷ್ಟ್ರೀಯ ಸ್ವಯಂಸೇವಕ ಸಂಘದ ಗತಿ ವಿಧಿ) ಕುಟುಂಬ ಮಿತ್ರ ಅಧ್ಯಕ್ಷ ಹರೀಶ್ ಕಾಳೆ ಅವರ ನೇತೃತ್ವದಲ್ಲಿ ಮತ್ತು ಅವರ ಸಂಗಡಿಗರಿಂದ ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆಂಪಣ್ಣ ಚೌಕಶಿ ಮತ್ತು ಸಹೋದರರ ಫಾರ್ಮ್ ಹೌಸದಲ್ಲಿ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಜೀವನದಲ್ಲಿ ಅತ್ಯಂತ ಮುಖ್ಯವಾದ ಉದ್ದೇಶ ಶರೀರ ಮತ್ತು ಜ್ಞಾನ, ಯೋಗಾಸನದ ಬಗ್ಗೆ ಮಕ್ಕಳಿಗೆ ಒಳ್ಳೆಯ ಜ್ಞಾನ ಕೊಡಬೇಕು ಮನೆಯ ಕುಟುಂಬದಲ್ಲಿ ಸೌಹಾರ್ದತೆಗೆಯಿಂದ …
Read More »ರೈತರು ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಂಡರೆ ಆರ್ಥಿಕ ಪ್ರಗತಿ ಸಾಧ್ಯ: ಶಾಸಕ ರಮೇಶ್ ಜಾರಕಿಹೊಳಿ
ಗೋಕಾಕ: ರೈತರು ಕೃಷಿಯೊಂದಿಗೆ ಹೈನುಗಾರಿಕೆ, ಕುರಿ ಸಾಕಾಣಿಕೆಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಕುರಿ ಮತ್ತು ಉಣ್ಣೆ ಅಭಿವೃದ್ಧಿ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುರಿಗಾಹಿಗಳಿಗೆ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಗಳು ಮತ್ತು ಕೃತಕ ಗರ್ಭಧಾರಣೆ ಕಾರ್ಯಕರ್ತರಿಗೆ ದ್ರವಸಾರ ಜನಕ ಜಾಡಿ ವಿತರಿಸಿ ಮಾತನಾಡಿದರು. …
Read More »2 ಕೋಟಿ ರೂ ವೆಚ್ಚದ ಪ್ರಭಾ ಶುಗರ್ಸ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅಶೋಕ ಪಾಟೀಲ
ಘಟಪ್ರಭಾ* : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು . ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-೪೫ ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …
Read More »ರಾಜಾಸ್ಥಾನದ ಕನ್ಹಯ್ಯಾ ಲಾಲ್ ಹತ್ಯೆ ಗೋಕಾಕದಲ್ಲಿ ಶ್ರೀರಾಮ ಸೇನೆಯಿಂದ ಪ್ರತಿಭಟನೆ.!
ಗೋಕಾಕ: ಕನ್ಹಯ್ಯಾ ಲಾಲ್ ಹತ್ಯೆ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೇದರಿಕೆ ಹಾಕಿರುವದನ್ನು ಖಂಡಿಸಿ ಇಲ್ಲಿಯ ಶ್ರೀರಾಮ ಸೇನೆಯ ಕಾರ್ಯಕರ್ತರು ಶುಕ್ರವಾರದಂದು ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು. ಶ್ರೀರಾಮ ಸೇನೆಯ ಅಧ್ಯಕ್ಷ ರವಿ ಪೂಜೇರಿ ಮಾತನಾಡಿ, ರಾಜಸ್ಥಾನದ ಉದಪುರ ನಿವಾಸಿ ಕನ್ಹಯ್ಯಲಾಲ್ ಅವರನ್ನು ಮತಾಂದರು ಅಮನುಷವಾಗಿ ಕೊಲೆ ಮಾಡಿ, ದೇಶದ ಪ್ರಧಾನಿಯವರಿಗೆ ಬೇದರಿಕೆಯೊಡ್ಡಿದ್ದು ಗಂಭೀರ ಪ್ರಕರಣ, ಇದರ ಹಿಂದೆ ದೊಡ್ಡ ಜಾಲವೇ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆ!
ಹೊನಕುಪ್ಪಿ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಮಸ್ಥರು ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ …
Read More »ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಯುವ ನಾಯಕಿ ಪ್ರೀಯಾಂಕ ಜಾರಕಿಹೊಳಿ!
ಗೋಕಾಕ : ೩ನೇ ದಕ್ಷಿಣ ವಲಯ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಶಾಲಾ ಮಕ್ಕಳಿಗೆ ಯುವ ನಾಯಕಿ ಪ್ರೀಯಾಂಕಾ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದರು. ೨೫ ಹಾಗೂ ೨೬ ರಂದು ಶಿವಮೊಗ್ಗದಲ್ಲಿ ನಡೆದ ದಕ್ಷಿಣ ವಲಯ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ೧೭ ವರ್ಷದ ಒಳಗಿನ ಗೋಕಾಕದ ಶಾಲಾ ಮಕ್ಕಳಾದ ಕೇದಾರಿ ಜಿದ್ದಿಮನಿ ಪ್ರಥಮ ಸ್ಥಾನ, ಅಭನ್ ಸಾಬ್ ಮುಲ್ಲಾ ದ್ವಿತೀಯ ಸ್ಥಾನ, ಈಶ್ವರ್ ಗಾಣಿಗೇರ್ ದ್ವಿತೀಯ ಸ್ಥಾನ, ಆದರ್ಶ …
Read More »ನಾಟಕ, ಸಂಗೀತ ಇತರ ಕಲೆಗಳಿಗೆ ನಿರಂತರ ಪ್ರೋತ್ಸಾಹಕ್ಕೆ ಬದ್ಧ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆದ 13 ದಿನಗಳ ಕಲೆಗಳ ಕಲರವ ಕಾರ್ಯಕ್ರಮದ ಸಮಾರೋಪ ಸಮಾರಂಭ ಬೆಳಗಾವಿ: ನಾಟಕ, ಸಂಗೀತ ಮತ್ತು ಇತರ ಕಲೆಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡಲು ನೂತನ ತರಬೇತಿ ಕೇಂದ್ರವನ್ನು ತೆರೆಯಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ಅಕಾಡೆಮಿಯಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆದ 13 ದಿನಗಳ ಕಲೆಗಳ ಕಲರವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ …
Read More »ಎಲ್ಆರ್ ಜೆ ಟ್ರೋಫಿ 2022 ಯಲ್ಲಿ ಕೊಲ್ಹಾಪುರ ತಂಡ ಭರ್ಜರಿ ಗೆಲುವು!
ಗೋಕಾಕ : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ಎಲ್ಆರ್ ಜೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಲ್ಹಾಪುರ ತಂಡ ಮೊದಲ ಸ್ಥಾನ ಪಡೆದು 1.50.000 ನಗದು ಬಹುಮಾನ ವಿಜೇತರಾಗಿದ್ದಾರೆ. ರಬಕವಿ ಹಾಗೂ ಕೊಲ್ಹಾಪುರ ಅಂತಿಮ ಪಂದ್ಯದಲ್ಲಿ ಕೊಲ್ಹಾಪುರ ತಂಡ ಗೆಲುವು ಸಾಧಿಸಿದೆ. ಎರಡನೇ ಸ್ಥಾನದಲ್ಲಿ ರಬಕವಿ ತಂಡ 75.000 ನಗದು ಬಹುಮಾನ ಪಡೆದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಜಾವೀದ್ ಗೋಕಾಕ, ಡಿವಾಎಸ್ಪಿ ಮನೋಜಕುಮಾರ ನಾಯ್ಕ್ …
Read More »ಅಪಘಾತದಲ್ಲಿ 7 ಜನ ಸಾವು; ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಂತಾಪ!
ಗೋಕಾಕ: ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ಕ್ರೂಸರ್ ವಾಹನ ಬಳ್ಳಾರಿ ನಾಲೆಗೆ ಉರುಳಿ ಬಿದ್ದು 7 ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿ, ಆತ್ಮಕ್ಕೆ ಶಾಂತಿ ಸಿಗಲೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರು ಶೀಘ್ರ ಚೆತರಿಸಿಕೊಳ್ಳಲಿ. ಮೃತರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ದೇವರು …
Read More »