ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ ೧೬ ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ ೧೦ ಸಾವಿರ ರೂ.ಗಳ ಸಹಾಯಧನದ ಚೆಕ್‌ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ ೧೬ ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್‌ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ ನಿವೃತ್ತಿಯಾದ …
Read More »ಗೋಕಾಕದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !
ಗೋಕಾಕ: ಹೊರವಲಯ ಮಹಾಂತೇಶ ನಗರದಲ್ಲಿ ಘಟನೆ ನಡೆದಿದ್ದು ,ಮಂಜು ಮುರಕಿಭಾವಿ(22) ಕೊಲೆಯಾದ ಯುವಕನಾಗಿದ್ದು,ತಡರಾತ್ರಿ ಯುವಕನ ಹತ್ಯೆಗೈದು ಪರಾರಿಯಾಗಿರುವ ದುಷ್ಕರ್ಮಿಗಳು,ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಮಂಜು ಮುರಕಿಭಾವಿ,ಎಂಬಾತನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »ನೂತನ ಆಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿ
ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಜನ ಸೇವೆಗೆ ಸಿದ್ಧವಾಗಿರುವ ಹೊಸ ಆಂಬ್ಯುಲೆನ್ಸ್ ವಾಹನಗಳಿಗೆ ಚಾಲನೆ ನೀಡಿದರು. 2020-2021 ನೇ ಸಾಲಿನ ಪರಿಶಿಷ್ಟ ಪಂಗಡದ (ಎಸ್.ಟಿ.ಪಿ) ಅಡಿಯ ಅನುವಾನದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಇಸ್ಲಾಂಪೂರ, ಬಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಹುಕ್ಕೇರಿ ತಾಲೂಕಾ ವೈದ್ಯಾಧಿಕಾರಿ ಡಾ.ಉದಯ ಕುಡಚಿ, ಜಿ.ಪಂಚಾಯ್ತಿ ಸದಸ್ಯ ಮಂಜುನಾಥ್ ಪಾಟೀಲ್, ಸೊಮನಗೌಡಾ ಪಾಟೀಲ್, ಪಜಲ್ ಮಕಾಂದರ, …
Read More »ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಜ್ಜಾಗಿ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಮಗೂ ಪ್ರವಾಹ ಭೀತಿ …
Read More »ಬಸವಗೋಪಾಲ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಅಡಿಗಲ್ಲು ಸಮಾರಂಭ.
ಬಸವಗೋಪಾಲ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಅಡಿಗಲ್ಲು ಸಮಾರಂಭ. ಅರಭಾವಿ: ತಾಲೂಕಿನ ಅರಭಾಂವಿ -ದುರದುಂಡಿಯ ಸತ್ತಿಗೇರಿ ತೋಟದಲ್ಲಿ ಶ್ರೀ ಬಸವಗೋಪಾಲ ನೀಲಮಾಣಿಕ ಮಠ, ಸುಕ್ಷೇತ್ರದ ಬಂಡಿಗಣಿ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳ ಆಶ್ರಯದಲ್ಲಿ ಶ್ರೀ ಬಸವಗೋಪಾಲ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಅಡಿಗಲ್ಲು ಸಮಾರಂಭ ಪ್ರಯುಕ್ತ ಭೂದೇವಿ ಹಾಗೂ 2000 ಕ್ಕೂ ಹೆಚ್ಚು ಮುತ್ತೈದೆಯರಿಗೆ ಉಡಿ ತುಂಬವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ತಾಲೂಕಿನ ದುರದುಂಡಿ ಗ್ರಾಮದ ಸತ್ತಿಗೇರಿ …
Read More »ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿಟ್ಟು ಗ್ರಾಮದ ಅಭಿವೃದ್ಧಿಗೆ ಪಣ ತೊಡಿ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು …
Read More »ಗೋಕಾಕ ತಾಲೂಕಿನ ಪ್ರವಾಸಿ ತಾಣಗಳ ವೀಕ್ಷಣೆಗೆ ನಿರ್ಭಂದ: ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.
ಗೋಕಾಕ: ಕೊವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ದೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಶನಿವಾರ, ರವಿವಾರ ಮತ್ತು ಸಾರ್ವಜನಿಕ ರಜೆ ದಿನಗಳಂದು ಸಾರ್ವಜನಿಕ ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಆದೇಶ ಹೊರಡಿಸಿದ್ದಾರೆ. ಈ ಸ್ಥಳಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಮತ್ತು ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು …
Read More »ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈ ಜೋಡಿಸಿ,ಪ್ರಗತಿ ಪಥದತ್ತ ಸಾಗಲು ನೆರವಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ.
ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ವಿಶೇಷ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ಸುಧಾರಣೆ ತರಲು ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಮಂಗಳವಾರ ರಾತ್ರಿ ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ …
Read More »ಕುಡಿದ ಅಮಲಿನಲ್ಲಿ ರೈಲಿಗೆ ತಲೆ ಕೊಟ್ಟ ವ್ಯಕ್ತಿ.
ಘಟಪ್ರಭಾ :ಕುಡಿದ ಅಮಲಿನಲ್ಲಿ ರೈಲಿಗೆ ವ್ಯಕ್ತಿಯೊರ್ವ ತಲೆ ಕೊಟ್ಟ ಘಟನೆ ನಿನ್ನೆ ರಾತ್ರಿ ಘಟಪ್ರಭಾ ರೈಲ್ವೆ ಗೇಟ್ ಹತ್ತಿರ ನಡೆದಿದೆ. ಮೃತ ವ್ಯಕ್ತಿಯನ್ನು ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ನಿಂಗಪ್ಪ ಗವಾನಿ(55) ಎಂದು ತಿಳಿದು ಬಂದಿದೆ. ಈತ ಕಳೆದ ಕೆಲವು ವರ್ಷಗಳಿಂದ ಮಲ್ಲಾಪೂರ ಪಿ.ಜಿಯ ಒಬ್ಬರ ಹೊಲಗದ್ದೆಯಲ್ಲಿ ಕುಟುಂಬ ಸಮೇತ ದುಡಿಯಲು ಇದ್ದನೆಂದು ತಿಳಿದು ಬಂದಿದೆ. ಈತ ಕುಡಿತದ ಚಟದ ಹಿಂದೆ ಬಿದ್ದು, ಮದ್ಯದ ದಾಸನಾಗಿದ್ದನೆಂದು ಹೇಳಲಾಗುತ್ತಿದೆ. ಈತ ಕುಡಿಯಲು …
Read More »ವೀರ ಯೋಧನ ಅಂತಿಮ ದರ್ಶನ ಪಡೆದ ಗಣ್ಯರು!
ಗೋಕಾಕ: ನಾಗಾಲ್ಯಾಂಡನ ಗಡಿ ಪ್ರದೇಶದಲ್ಲಿ ಅಪಘಾತದಲ್ಲಿ ಮೃತರಾದ ವೀರ ಯೋಧನ ಮಂಜುನಾಥ ಗೌಡಣ್ಣವರ ಅಂತ್ಯಕ್ರಿಯೆ ಶಿವಾಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜರುಗಿತು. ಮಂಗಳವಾರದಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಪಾರ್ಥಿವ ಶರೀರವನ್ನು ತರಲಾಯಿತು. ಯೋಧನ ಪಾರ್ಥಿವ ಶರೀರವನ್ನು ಕೆಲವು ಸಮಯ ಶಿವಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಯಿತು. ನಂತರ ಗ್ರಾಮದಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಲಾಯಿತು. ಸಂಸದೆ ಮಂಗಲಾ ಅಂಗಡಿ, …
Read More »