Breaking News

ಗೋಕಾಕ

ಹಿರಣ್ಯಕೇಶಿ ನದಿ ಹೂಳೆತ್ತುವ ಹೆಸರಿನಲ್ಲಿ ಜಿ.ಪಂ. ಅಧಿಕಾರಿಗಳ ಹುಚ್ಚಾಟ; ಶಾಸಕ ಸತೀಶ ಜಾರಕಿಹೊಳಿ ತೀವ್ರ ಆಕ್ರೋಶ

ಹುಕ್ಕೇರಿ: ತಾಲೂಕಿನ ಹಿರಣ್ಯಕೇಶಿ ನದಿ ಹೂಳೆತ್ತುವ ಹೆಸರಿನಲ್ಲಿ ಜಿಲ್ಲಾ ಪಂಚಾಯತ ಅಧಿಕಾರಿಗಳು ಹುಚ್ಚಾಟ ನಡೆಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಇಂದು (ಸೋಮವಾರ) ಏರ್ಪಡಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಉದ್ಯೋಗ ಖಾತರಿ ಯೋಜನೆಯಲ್ಲಿ ಕಳೆದ ವರ್ಷ ಹಿರಣ್ಯಕೇಶಿ ನದಿ ಹೂಳೆತ್ತುವುದಕ್ಕಾಗಿ …

Read More »

ಗೋಕಾಕದಲ್ಲಿ ಲಸಿಕೆ ಪಡೆಯಲು ಜನರು ನೂಕು-ನುಗ್ಗಲು॥ಸಾಮಾಜಿಕ ಅಂತರವಿಲ್ಲ ॥ವೈದ್ಯಾಧಿಕಾರಿಗಳು ಏನ ಹೇಳ್ತಾರೆ? ॥

– C L ಖಡಕಭಾಂವಿ. ಗೋಕಾಕ : ಕೋವಿಡ್ ಸೋಂಕು ಹೊಡೆದಟ್ಟಲು ಲಸಿಕಾ ಅಭಿಯಾನ ಪ್ರಾರಂಭಿಸಲಾಗಿದೆ. ಆದರೆ, ಈ ಅಭಿಯಾನದಲ್ಲಿ ನಾಗರಿಕರು ಸಾಮಾಜಿಕ ಅಂತರವನ್ನ ಮರೆತಿರೋದು ಕೋವಿಡ್ ಮತ್ತಷ್ಟು ವ್ಯಾಪಿಸಲಿದೆಯೇ ಎನ್ನುವ ಅನುಮಾನ ಮೂಡುತ್ತಿದೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ಪಡೆಯಲು ಜನ ಜಂಗುಳಿ ಸೇರಿದ್ದು, ಸಾಮಾಜಿಕ ಅಂತರ ಮರೆತ ಘಟನೆ ಗೋಕಾಕದಲ್ಲಿ ನಡೆದಿದ್ದು ಕೋವಿಡ್-19 ಲಸಿಕಾ ಕೇಂದ್ರಕ್ಕೆ ನೂರಾರು ಜನರು ದೌಡಾಯಿಸಿ,ಲಸಿಕೆ …

Read More »

3ನೇ ಅಲೆ ಹರಡದಂತೆ ಸರ್ಕಾರ ಮುಂಜಾಗ್ರತೆ ವಹಿಸಬೇಕು: ಸತೀಶ ಜಾರಕಿಹೊಳಿ

ಬೆಂಗಳೂರು: ಕೋವಿಡ್ 1, 2 ಅಲೆಬಂದು ಹೋಗಿದೆ. 3ನೇ ಅಲೆ ಬರಲಿದೆ. ಮೊದಲೆರಡು ಅಲೆಗಳಲ್ಲಿ ಬೇರೆಬೇರೆ ಸಮಸ್ಯೆಗಳು ಇದ್ದವು. ಈಗ ಬೇರೆ ಸಮಸ್ಯೆಗಳು ಎದುರಾಗಬಹುದು. ಸರ್ಕಾರ ಇವುಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಮತ್ತು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಸತೀಶ ಜಾರಕಿಹೊಳಿ ಹೇಳಿದರು. ಮಾನವ ಬಂಧುತ್ವ ವೇದಿಕೆಯಿಂದ ಇಂದು (ಜೂ.20) ರಂದು ನಡೆದ 10 ದಿನಗಳ ಆರೋಗ್ಯ ಬಂಧುತ್ವ ಅಭಿಯಾನದ ಸಮಾರೋಪ …

Read More »

ಸುಳೇಭಾವಿಯಲ್ಲಿ ರಮೇಶ ಸಾಹುಕಾರ್ ಅಭಿಮಾನಿಗಳಿಂದ‌ ನೆರವಿನ ಹಸ್ತ||ಕಡು ಬಡವರನ್ನು ಗುರುತಿಸಿ ಸಹಾಯ ನೀಡಿದ ಅಭಿಮಾನಿಗಳು||

ಬೆಳಗಾವಿ: ಲಾಕ್‌ಡೌನ್‌ದಿಂದ ಸಂಕಷ್ಟಕ್ಕೀಡಾಗಿರುವ ತಾಲೂಕಿನ ಸುಳೇಭಾವಿ ಗ್ರಾಮದ ಕಡು ಬಡವರನ್ನು ಗುರುತಿಸಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ರವಿವಾರ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು. ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಆವರಣದಲ್ಲಿ ದಿನಸಿ ಕಿಟ್‌ಗಳನ್ನು ನೀಡಲಾಯಿತು. ಗ್ರಾಮದಲ್ಲಿ ಕಡು ಬಡವರನ್ನು ಗುರುತಿಸಿ ಅಗತ್ಯ ಇರುವ ಅಗತ್ಯ ವಸ್ತುಗಳ ಕಿಟ್‌ಗಳನ್ನು ನೀಡಿ ಮಾನವೀಯತೆ ಮೆರೆಯಲಾಯಿತು. ಗೋಕಾಕ ನಗರ ಬಿಜೆಪಿ ಘಟಕ ಅಧ್ಯಕ್ಷ ಭೀಮಶಿ …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ 13 ಪ್ರಾಥಮಿಕ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, …

Read More »

ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬವನ್ನು ಮಕ್ಕಳಿಗೆ ಪುಡ್ ಕಿಟ್ ವಿತರಿಸುವ ಮೂಲಕ ಸರಳವಾಗಿ ಆಚರಣೆ

ಗೋಕಾಕ: ಕಾಂಗ್ರೆಸ್​ ನಾಯಕರಾಗಿರುವ ರಾಹುಲ್​ ಗಾಂಧಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 51ನೇ ಜನ್ಮದಿನ ಆಚರಿಸುತ್ತಿರುವ ರಾಹುಲ್​ ಗಾಂಧಿಗೆ ಕಾಂಗ್ರೆಸ್​ ನಾಯಕರು ಶುಭಾಶಯಗಳ ಮಹಾಪೂರ ಹರಿಸಿದ್ದಾರೆ. ಕಾಂಗ್ರೆಸ್​ ಮಾಜಿ ಅಧ್ಯಕ್ಷರ ಹುಟ್ಟುಹಬ್ಬದ ಅಂಗವಾಗಿ ಈ ದಿನವನ್ನು ಕಾರ್ಯಕರ್ತರು ಸೇವಾ ದಿನವಾಗಿ ಆಚರಿಸುತ್ತಿದ್ದಾರೆ. ಹಲವೆಡೆ ಕೋವಿಡ್​ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರಿಗೆ ಫೇಸ್​ ಮಾಸ್ಕ್​ಅಗತ್ಯ ಔಷಧದ ಕಿಟ್​ ಹಾಗೂ ಊಟವನ್ನು ಹಂಚುವ ಮೂಲಕ ತಮ್ಮ ನಾಯಕನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಅದೇ ರೀತಿಯಾಗಿ ಗೋಕಾಕ ನಗರದಲ್ಲಿ …

Read More »

ತುರ್ತುಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ.ಜಿಲ್ಲೆಯಲ್ಲಿ ವ್ಯಾಪಕ ಮಳೆ: ವೇದಗಂಗಾ ನದಿಪಾತ್ರಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ.

ಬೆಳಗಾವಿ: ಕಳೆದ ಮೂರು‌ ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವೇದಗಂಗಾ ನದಿ ಪಾತ್ರದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಿಪ್ಪಾಣಿ ಸಮೀಪದ ಜತ್ರಾಟ ಹಾಗೂ ಅಕ್ಕೋಳ ಸುತ್ತಮುತ್ತಲಿನ ಪ್ರದೇಶಗಳಿಗೆ ಶುಕ್ರವಾರ(ಜೂ.18) ಭೇಟಿ ನೀಡಿದ ವೇದಗಂಗಾ ನದಿ ಹರಿವು ಪ್ರಮಾಣವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜತೆ‌ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ನದಿ ನೀರಿನ‌ ಪ್ರಮಾಣ ಹೆಚ್ಚಾದರೆ ಮುಂಜಾಗ್ರತಾ ಕ್ರಮವಾಗಿ ನದಿತೀರದ ಗ್ರಾಮಗಳ ಜನರನ್ನು …

Read More »

ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ 2 ತಿಂಗಳೊಳಗೆ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಇನ್ನೇರಡು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಮೂಡಲಗಿ ಪಟ್ಟಣಕ್ಕೆ ಜನ ಸಂಚಾರಕ್ಕೆ ಅನುಕೂಲವಾಗಲು ಸುತ್ತಮುತ್ತಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು …

Read More »

ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಲೋಳಸೂರ-ಬಳೋಬಾಳ ರಸ್ತೆ ಕಾಮಗಾರಿ ತಿಂಗಳೊಳಗೆ ಪೂರ್ಣ ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ …

Read More »