ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಕೊರೊನಾ ಮೊದಲ ಡೋಸ್ ಲಸಿಕೆ ಪಡೆದರು. ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಕೊರೊನಾ ಕುರಿತು ಎಚ್ಚರ ವಹಿಸುವ ಕುರಿತು ಜನರಿಗೆ ಸಂದೇಶ ಸಾರುವ ನಿಟ್ಟಿನಲ್ಲಿ ಸತೀಶ ಅವರು ಲಸಿಕೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು. ಸುರಕ್ಷತಾ …
Read More »ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ: ಸತೀಶ್ ಜಾರಕಿಹೊಳಿ
ಗೋಕಾಕ: “ಕೊರೊನಾ ಹಿನ್ನೆಲೆಯಲ್ಲಿ ರಾಜ್ಯವನ್ನು ಸಂಪೂರ್ಣ ಬಂದ್ ಮಾಡಿರುವುದರಿಂದ ಜನಸಾಮಾನ್ಯರು ಹಾಗೂ ಸಣ್ಣಪುಟ್ಟ ವ್ಯಾಪಾರಸ್ತರು ತೊಂದರೆಗೀಡಾಗಿದ್ದಾರೆ. ಹೀಗಾಗಿ, ಸರ್ಕಾರ ಇವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ಸಂಪೂರ್ಣವಾಗಿ ಗೊಂದಲದಲ್ಲಿದೆ. ಕೆಲವು ದಿನಗಳ ಹಿಂದೆ 2 ದಿನ ಅರ್ಧ ಬಂದ್ ಮಾಡಿದರು. ಈಗ 14 ದಿನ ಸಂಪೂರ್ಣ ಬಂದ್ ಮಾಡಿದ್ದಾರೆ. ಇದರಿಂದ …
Read More »ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ :ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ ಮಾದರಿ …
Read More »ಜನರ ಜೀವ ಅಮೂಲ್ಯವಾದದ್ದು ಅದನ್ನು ರಕ್ಷಿಸಿಕೊಳ್ಳುವತ್ತ ಗಮನಹರಿಸಿ : ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು. ರೋಗದ ಲಕ್ಷಣಗಳು ಕಂಡುಬಂದಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಕೋವಿಡ್ ಪರೀಕ್ಷೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಟಾಸ್ಕಪೋರ್ಸ್ ಕಮೀಟಿ 3ನೇ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋಕಾಕ ಹಾಗೂ …
Read More »ವಿದ್ಯಾರ್ಥಿಗಳ ಜೀವದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಟಿಯು ಆಡಳಿತ!
ರಾಜ್ಯಾದ್ಯಂತ ವಿವಿಧ ಪರೀಕ್ಷೆಗಳು ಮುಂದುಡಿಕೆ ಮಾಡಿದ್ದಾರೆ, ಆದರೆ VTU ಆಡಳಿತ ಮಂಡಳಿ ಮಾತ್ರ ಪರೀಕ್ಷೆ ಮುಂದೂಡಿಲ್ಲ, ಪರೀಕ್ಷೆ ಮಾಡಲೇಬೇಕೆಂಬ ಹಠಮಾರಿ ಧೋರಣೆ ತೋರುತ್ತಿದೆ.ಎಲ್ಲರಿಗೂ ಒಂದು ರೂಲ್ಸ್ ಆದರೆ VTU ಗೆ ಇನ್ನೊಂದು ರೂಲ್ಸ್ ಅಂತ ಪ್ರತಿಭಾವಂತ ನಾಗರಿಕರ ಮಾತಾಗಿದೆ. ಮಹಾಮಾರಿ ಕೊರೋನಾ ಹೊಡೆತಕ್ಕೆ ರಾಜ್ಯವೇ ಬೆಚ್ಚಿಬೀಳ್ತಿದೆ. ಇತ್ತ ಕೊರೋನಾ ಕರಿನೆರಳು ಶಿಕ್ಷಣ ಕ್ಷೇತ್ರವನ್ನು ಬಿಟ್ಟಿಲ್ಲ. ಒಂದೆಡೆ ಪೋಷಕರಿಗೆ ಮಕ್ಕಳ ಚಿಂತೆಯಾದ್ರೆ, ಮತ್ತೊಂದೆಡೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಚಿಂತೆ. ಈ ನಡುವೆ ಇದನ್ನು …
Read More »ಕೊರೋನಾ ಚೈನ್ ಬ್ರೇಕ್ ಮಾಡುವುದೇ ತಮ್ಮ ಉದ್ಧೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ
ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ ಸೋಮವಾರ ದಿ. 26 ರಿಂದ ಮೇ 4 ರವರೆಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಬೆಳಿಗ್ಗೆ 7 ರಿಂದ ಮದ್ಯಾಹ್ನ 1 ರವರೆಗೆ ಸಾರ್ವಜನಿಕರಿಗೆ ಅಗತ್ಯವಿರುವ ಅಂಗಡಿ ಮುಗ್ಗಟ್ಟುಗಳನ್ನು ತೆರೆದು ತಮ್ಮ ವ್ಯವಹಾರಗಳನ್ನು ನಡೆಸಿಕೊಳ್ಳಬೇಕು. ಮದ್ಯಾಹ್ನ 1 ಗಂಟೆಯ ನಂತರ ಕಡ್ಡಾಯವಾಗಿ ತಮ್ಮ ಅಂಗಡಿಗಳನ್ನು ಬಂದ್ ಮಾಡಿ ತಾಲೂಕಾ ಆಡಳಿತದೊಂಡಿಗೆ ಸಹಕರಿಸಬೇಕು. ಗೋಕಾಕ : …
Read More »ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …
Read More »ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.
ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಮೂಡಲಗಿಗೆ ಏ-14ರಂದು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ …
Read More »ಕರದಂಟು ನಾಡಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಬೃಹತ ರೋಡ್ ಶೋ.
ಗೋಕಾಕ: ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಮಂಗಳವಾರ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿ, ಚುನಾವಣಾ ಪ್ರಚಾರ ಮಾಡಿದರು. ಕೊಳವಿ ಹನುಮಂತ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಪ್ರಚಾರ ಆರಂಭಿಸಿ, ಬಸವೇಶ್ವರ ವೃತ್ತ, ರವಿವಾರ ಪೇಟೆ, ಗುರುವಾರ ಪೇಟೆ, ಮಾರುಕಟ್ಟೆ ಸೇರಿ ನಗರದ ವಿವಿಧ ಬಡಾವಣೆಗಳಲ್ಲಿ ಮತಯಾಚಿಸಿದರು. ಮೊಲದ ಬಾರಿ ಲೋಕಸಭೆ ಪ್ರವೇಶ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ ಸತೀಶ ಜಾರಕಿಹೊಳಿ ಅವರ ತವರೂರಿನಲ್ಲಿ ಇಂದು …
Read More »ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಿ: ಬಸವರಾಜ ಖಾನಪ್ಪನವರ
ಮೂಡಲಗಿ: ಬರುವ ಮೇ 9 ರಂದು ಜರಗುವ ಬೆಳಗಾವಿ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಚುನಾವಣೆಗೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಿಸಿ ಚುನಾವಣೆಗೆ ಸ್ವರ್ಧಿಸಿದ್ದು, ಈ ಬಾರಿ ಎಲ್ಲ ಕನ್ನಡಿಗರು ನನ್ನನ್ನು ಬೆಂಬಲಿಸಿ ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಬೇಕೆಂದು ಅಭ್ಯರ್ಥಿ ಬಸವರಾಜ ಖಾನಪ್ಪನವರ ಮನವಿ ಮಾಡಿದರು. ರವಿವಾರದಂದು ಮೂಡಲಗಿ ತಾಲೂಕಿನ ಹುಣಶ್ಯಾಳ ಪಿ.ಜಿ ಹಾಗೂ ಸುಣಧೋಳಿ ಗ್ರಾಮದಲ್ಲಿ ಕಸಾಪ ಸದಸ್ಯರನ್ನು ಭೇಟಿಯಾಗಿ ಮತಯಾಚನೆ ಮಾಡಿ ಹುಣಶ್ಯಾಳ ಪಿ.ಜಿ ಯ …
Read More »