Breaking News

ಬೆಳಗಾವಿ

ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸಿಎಂ ಭೇಟಿ; ಕುಟುಂಬಕ್ಕೆ ಸಾಂತ್ವನ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ‌ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ …

Read More »

ಒತ್ತಡಕ್ಕೆ ಮಣಿಯದೆ ಧೈರ್ಯದಿಂದ ಪಕ್ಷ ಸಂಘಟಿಸಿ:ಗೋಕಾಕ ಕೈ ಕಾರ್ಯಕರ್ತರಿಗೆ ಸತೀಶ ಜಾರಕಿಹೊಳಿ ಕರೆ

ಗೋಕಾಕ:  ಯಾವುದೇ ಒತ್ತಡಕ್ಕೆ ಮಣಿಯದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೈರ್ಯದಿಂದ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಗೋಕಾಕ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಸೂಚಿಸಿದರು.  ಇಂದು ಗೋಕಾಕ ಕ್ಷೇತ್ರದ ಅಂಕಲಗಿ-ಅಕ್ಕತಂಗೇರಹಾಳ ಮತ್ತು ಖನಗಾಂವ್ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು,  ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಡೆದ ಉಪಚುನಾವಣೆ ನಂತರ ಕೊರೋನಾ ಹಿನ್ನಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ …

Read More »

ಮೆಳವಂಕಿ ಸೇತುವೆ ಕುಸಿತ ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಗೋಕಾಕ: ಮೆಳವಂಕಿ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಇಂದು ಬೆಳಗಿನ ಜಾವ ಸೇತುವೆ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿರುವ ಅವರು, ಕೂಡಲೇ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ಹಹಿಸಿ ಬೈಪಾಸ್ ರಸ್ತೆ ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ನಾಳೆಯಿಂದಲೇ ಕೆಲಸ ಆರಂಭಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ …

Read More »

ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ‌ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ

ಗೋಕಾಕ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ  ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ‌ ಪ್ರಕರಣ ಖಂಡಿಸಿ ಗೋಕಾಕ ನಗರದಲ್ಲಿ ಭಾನುವಾರ ರಾತ್ರಿ  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ‌ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ  …

Read More »

ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ

ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …

Read More »

ಸೋಮವಾರ ಗೋಕಾಕ ನಗರ ಬಂದ್ ಕರೆ !

ಗೋಕಾಕ: ನಗರದಲ್ಲಿ ರಾಜಸ್ತಾನ ವ್ಯಾಪಾರಿಗಳ ಕಳಪೆ ಗುಣಮಟ್ಟದ ವಸ್ತುಗಳ ಕಡಿಮೆ ಬೆಲೆ ಮಾರಾಟದಿಂದ ಸ್ಥಳೀಯ ವ್ಯಾಪಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ರಾಜಸ್ತಾನ ಹಠಾವೋ..ಗೋಕಾಕ್ ಬಚಾವೋ ಎಂಬ ಅಭಿಯಾನದ ಮೂಲಕ ವ್ಯಾಪಾರಸ್ಥ ಸಂಘದಿಂದ ಸೋಮವಾರ ಗೋಕಾಕ ನಗರ ಬಂದ್ ಕರೆ ನೀಡಿದ್ದಾರೆ. ಗೋಕಾಕ್ ನಗರದಲ್ಲಿ ರಾಜಸ್ತಾನಿ ವ್ಯಾಪಾರಿಗಳು ಕಳಪೆ ಗುಣಮಟ್ಟದ ವಸ್ತು, ಸಾಮಗ್ರಿಗಳನ್ನು ತಂದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯ ವ್ಯಾಪಾರಸ್ಥರು ತೊಂದರೆಯಾಗಿದೆ. ವ್ಯಾಪಾರದಲ್ಲಿ ಮೊದಲೇ ನಷ್ಟ ಅನುಭವಿಸುತ್ತಿರುವ ನಮಗೆ …

Read More »

ಮೂಡಲಗಿ ತಾಲೂಕಾ ಪತ್ರಕರ್ತರ ಪ್ರತಿಭಟನೆ | ಸರ್ಕಾರದ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ

ಸರ್ಕಾರದಿಂದ ಮಾಧ್ಯಮ ಕ್ಷೇತ್ರದ ಕಗ್ಗೊಲೆ ಖಂಡನೀಯ ಮೂಡಲಗಿ : ಸಿಎಂ ಪುತ್ರನ ಬಂಡವಾಳ ಬಯಲು ಮಾಡಿದ ಹಿನ್ನಲೆ ಮುಖ್ಯಮಂತ್ರಿ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಪವರ ಟಿವಿ ಚಾನಲ್ ಬಂದ್ ಮಾಡಿದ ಘಟನೆ ಖಂಡಿಸಿ ಬುಧುವಾರದಂದು ಮೂಡಲಗಿ ತಾಲೂಕಾ ಪತ್ರಕರ್ತರ ಬಳಗದಿಂದ ಪಟ್ಟಣದ ಕಲ್ಮೇಶ್ವರ ಸರ್ಕಲ್‌ನಲ್ಲಿ ಸರ್ಕಾರದ ವಿರುದ್ದ ಪ್ರತಿಭಟಿಸಿ, ಕೆಲ ಸಮಯಗಳ ಕಾಲ ರಸ್ತೆ ಬಂದ್ ಮಾಡಿ ಸ್ಥಳೀಯ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಹಾಗೂ ಸಿಸಿಬಿ ಅಧಿಕಾರಿಗಳ ಮೇಲೆ …

Read More »

ಬಾಬ್ರಿ ಕಟ್ಟಡ ಕುರಿತು ತೀರ್ಪು – ಸತ್ಯಮೇವ ಜಯತೇ ಎಂದ ಸಚಿವ ರಮೇಶ ಜಾರಕಿಹೊಳಿ‌

ಬಾಬ್ರಿ ಕಟ್ಟಡ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯವು ಇಂದು ನೀಡಿದ ತೀರ್ಪು ಐತಿಹಾಸಿಕವಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಬಣ್ಣಿಸಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ ಮಾತನಾಡಿದ ಸಚಿವ ಜಾರಕಿಹೊಳಿ‌, ಸತ್ಯ ಎಂದಿಗೂ ಸತ್ಯವೇ, ಭಾರತೀಯ ಜನತಾ ಪಾರ್ಟಿ ಸಹಾ ಇದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿತ್ತು. ಈಗ ನ್ಯಾಯದೇವತೆಯೂ ಸಹಾ ನಮ್ಮ ನಂಬಿಕೆಯನ್ನು ಪುರಸ್ಕರಿಸಿದಂತಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು. ನಮ್ಮ ಭಾರತೀಯ ಜನತಾ ಪಾರ್ಟಿಯ ಹಿರಿಯ …

Read More »

ಪ್ರಕಾಶ ಬಾಗೇವಾಡಿ ಅಕಾಲಿಕ‌ ನಿಧನಕ್ಕೆ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರು ಸಂತಾಪ.

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ. ತುಕ್ಕಾನಟ್ಟಿ ಗ್ರಾಮದ ಪ್ರಮುಖರಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಸತೀಶ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ ಕುಟುಂಬಕ್ಕೆ …

Read More »

ಪ್ರಕಾಶ್ ಬಾಗೇವಾಡಿ*ಅವರ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ.

ಗೋಕಾಕ ತಾಲೂಕಿನ ತುಕ್ಕಾನಟ್ಟಿ ಗ್ರಾಮದ  ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ನನ್ನ ಸ್ನೇಹಿತ *ಶ್ರೀ ಪ್ರಕಾಶ್ ಬಾಗೇವಾಡಿ* ಅವರ ಅಕಾಲಿಕ ನಿಧನ ನನ್ನ ಮನಸ್ಸಿಗೆ ನೋವನ್ನು ತಂದಿದೆ. ನಮ್ಮ ಕುಟುಂಬದ ಆಪ್ತರಾಗಿದ್ದ ಇವರು, ಶೈಕ್ಷಣಿಕ ಸಂಸ್ಥೆಯನ್ನು ಸ್ಥಾಪಿಸಿ, ನೂರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದರು. ಅಕಾಲಿಕವಾಗಿ ಚಿಕ್ಕ ವಯಸ್ಸಿನಲ್ಲೇ ನಿಧನರಾದ ಇವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಇವರ ಕುಟುಂಬದ ಸದಸ್ಯರಿಗೆ ಶೋಕ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ …

Read More »