Breaking News

ಬೆಳಗಾವಿ

*”ರಸ್ತೆ ಸುರಕ್ಷತಾ ಸಪ್ತಾಹ” ವಿಧ್ಯಾರ್ಥಿಗಳಿಗೆ ,ರಸ್ತೆ ಸುರಕ್ಷತಾ ನಿಯಮಗಳನ್ನು ತಿಳಿಸಿದ ಪಿಎಸ್ಐ ಎನ್ ಖಿಲಾರೆ*

ಗೋಕಾಕ : ಪ್ರತಿನಿತ್ಯ ವಾಹನಗಳ ಅಪಘಾತಗಳು ಹೆಚ್ಚಾಗುತ್ತಿದ್ದು , ತಳ ಮಟ್ಟದಿಂದ ಜಾಗೃತಿ ಮೂಡಿಸಿ, ವಿಧ್ಯಾರ್ಥಿಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಅರಿತುಕೊಂಡು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಗೋಕಾಕ ಗ್ರಾಮೀಣ ಪಿಎಸ್ಐ ಎನ್ ಖಿಲಾರೆ ಅವರು ತಿಳಿಸಿದರು. ತಾಲೂಕಿನ ಮರಡಿಮಠ ಗ್ರಾಮದ ಕಾಡಸಿದ್ದೇಶ್ವರ ಮಠದ ಕಾಲೇಜಿನಲ್ಲಿ ಸಿಪಿಐ ಗೋಪಾಲ ರಾಠೋಡ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಅವರು ವಾಹನ ಚಾಲಕರು ಹಾಗೂ …

Read More »

*ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಸಿಪಿಐ ಗೋಪಾಲ ರಾಠೋಡ.*

ಗೋಕಾಕ: ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು ಎಂದು ಗೋಕಾಕ ಸಿಪಿಐ ಗೋಪಾಲ ರಾಠೋಡ ಸಲಹೆ ನೀಡಿದರು. ನಗರದ ಆಟೋ ನಿಲ್ದಾಣಗಳಲ್ಲಿ ಹಾಗೂ ಖಾಸಗಿ ಮಿನಿ ಬಸ್ ನಿಲ್ದಾಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಮಾಡುವ ಮೂಲಕ ವಾಹನ ಚಾಲಕರಿಗೆ ರಸ್ತೆ ನಿಯಮಗಳ ಬಗ್ಗೆ ತಿಳಿಸಿದರು. ಅತಿ ವೇಗದ ಚಾಲನೆ, ವಾಹನ ಚಾಲನೆಯ ವೇಳೆ ಮದ್ಯ ಸೇವನೆಯೇ ಮೊದಲಾಗಿ ರಸ್ತೆ ಸುರಕ್ಷತೆ ನಿಯಮ ಉಲ್ಲಂಘನೆ …

Read More »

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ

*ನೋಯಿಡಾದಲ್ಲಿಂದು ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ* *ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ)* : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ ನೋಯಿಡಾ ನಗರದಲ್ಲಿ ಸೋಮವಾರದಿಂದ ಆರಂಭಗೊಂಡಿರುವ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್‍ನ ನಂದಿನಿ ಉತ್ಪನ್ನಗಳ …

Read More »

32 ಪಲಾನಭವಿಗಳಿಗೆ ಮನೆ ಮಂಜೂರಾತಿ ಆದೇಶ ಪ್ರತಿ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಗೋಕಾಕ: ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪೂರ ಗ್ರಾಪಂನ ಬಸವ ವಸತಿ ಯೋಜನೆಯಡಿ 2021-2022ನೇ ಸಾಲಿನಲ್ಲಿ ಮನೆ ಮಂಜೂರಾದ 32 ಪಲಾನಭವಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ನಗರದ ಹಿಲ್ಲ್‌ ಗಾರ್ಡನ್‌ ಕಚೇರಿಯಲ್ಲಿ ಮನೆ ಮಂಜೂರಾತಿ ಆದೇಶ ಪ್ರತಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪಾಶ್ಚಾಪೂರ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸರಸ್ವತಿ ಕುರುಬರ, ಗ್ರಾಪಂ ಸದಸ್ಯರು ಹಾಗೂ ಮನೆ ಮಂಜೂರಾದ 32 ಪಲಾನಭವಿಗಳು ಇದ್ದರು.

Read More »

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…? *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ*

ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …

Read More »

ಕಾರ್ಯನಿರತ ಪತ್ರಕರ್ತರ ಸಂಘ ಜನರ ಧ್ವನಿಯಾಗಿ ಕಾರ್ಯನಿರ್ವಸುತ್ತಿದೆ : ಗೌರಾವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ

ಗೋಕಾಕ ಸೆ 10 : ಸ್ವಾತಂತ್ರ್ಯಕ್ಕಿಂತ ಪೂರ್ವದಿಂದಲೂ ಕಾರ್ಯನಿರತ ಪತ್ರಕರ್ತರ ಸಂಘ ಜನರ ಧ್ವನಿಯಾಗಿ ಕಾರ್ಯನಿರ್ವಸುತ್ತಿದೆ ಎಂದು ಗೋಕಾಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲೂಕು ಘಟಕದ ಗೌರಾವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು.   ಶನಿವಾರದಂದು ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದಿಂದ ಮಾನ್ಯತೆ ಪಡೆದ ಏಕೈಕ ಪತ್ರಕರ್ತರ ಸಂಘವಾಗಿ ನೈಜ ವರದಿಗಳೊಂದಿಗೆ ಜನರ ವಿಶ್ವಾಸಗಳಿಸಿದೆ. ಸಂಘದಿಂದ ಜಿಲ್ಲಾ ಗೌರಾವಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ …

Read More »

*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಶ್ರೀಕ್ಷೇತ್ರ ಗೋಡಚಿಯಲ್ಲಿ ಅನ್ನ ಸಂತರ್ಪಣೆ!*

ಗೋಡಚಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಶ್ರೀ ಕ್ಷೇತ್ರ ಗೋಡಚಿಯಲ್ಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …

Read More »

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ ವ್ಯಕ್ತಿತ್ವ. …

Read More »

ಸಚಿವ ಉಮೇಶ್ ಕತ್ತಿ ವಿಧಿವಶ: ಬುಧವಾರ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ!

ಬೆಳಗಾವಿ: ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ(61) ವಿಧಿವಶ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಬಾಗೇವಾಡಿಗೆ ಕೊಂಡೊಯ್ದು 5 ಗಂಟೆಗೆ ಅವರ ತೋಟದಲ್ಲಿ‌ ಅಂತಿಮ ವಿಧಿ ವಿಧಾನ ನಡೆಸಲಾಗುತ್ತೆ. ಸಕಲ ಸರ್ಕಾರಿ ಗೌರವಗಳನ್ನ …

Read More »

ಸಚಿವ ಉಮೇಶ್‌ ಕತ್ತಿ ಹೃದಯಾಘಾತ, ಆಸ್ಪತ್ರೆಗೆ ದಾಖಲು!

ಬೆಂಗಳೂರು: ಸಚಿವ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಇಲ್ಲಿನ ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಉಮೇಶ್‌ ಕತ್ತಿ ಅವರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. Minister Umesh katti has a heart attack admitted to hospital

Read More »