Breaking News

ಬೆಳಗಾವಿ

ಕಳಪೆ ಕಾಮಗಾರಿಯಾದರೆ ಸಂಬಂಧಿಸಿದವರೆ ಹೊಣೆಗಾರರು, ಹುಕ್ಕೇರಿ ಕೆಡಿಪಿ ಸಭೆಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಖಡಕ್ ಎಚ್ಚರಿಕೆ

ಹುಕ್ಕೇರಿ : ತಾಲೂಕಿನ ಯಮಕನಮರಡಿ ಕ್ಷೇತ್ರದಲ್ಲಿ ಕಳಪೆ ಕಾಮಗಾರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ಸತೀಶ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸರ್ಕಾರಿ ಕಾಮಗಾರಿಗಳಲ್ಲಿ ಕಳಪೆ ಮಟ್ಟದ ಕಾಮಗಾರಿ ಕಂಡು ಬಂದಲ್ಲಿ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಾರ್ನಿಂಗ್ ಮಾಡಿದರು. ತಾಪಂ, …

Read More »

ಶತಾಯಷಿ ಭೀಮವ್ವ ರಂಗಪ್ಪ ಬಿ.ಪಾಟೀಲ್ ನಿಧನ; ಬಾಲಚಂದ್ರ ಜಾರಕಿಹೊಳಿ ಸಂತಾಪ!

ಮೂಡಲಗಿ :* ತಾಲ್ಲೂಕಿನ ತಿಗಡಿ ಗ್ರಾಮದ ಉಪ್ಪಾರ ಸಮಾಜದ ಹಿರಿಯ ಜೀವ, ಶತಾಯುಷಿ ಭೀಮವ್ವ‌ ರಂಗಪ್ಪ. ಬಿ.ಪಾಟೀಲ್ (೧೦೧) ಅವರು ಸೋಮವಾರದಂದು ನಿಧನರಾದರು. ಮೃತರಿಗೆ ಗುತ್ತಿಗೆದಾರ ವಾಯ್. ಆರ್. ಬಿ.ಪಾಟೀಲ್ ಸೇರಿ ಐದು ಜನ ಮಕ್ಕಳು, ಮೂವರು ಪುತ್ರಿಯರು, ೭೬ ಜನ ಮೊಮ್ಮಕ್ಕಳು, ಮರಿ ಮಕ್ಕಳು, ಗಿರಿ ಮಕ್ಕಳು ಸೇರಿದಂತೆ ಅಪಾರ ಬಂಧು- ಬಳಗವಿದೆ. ಮೃತರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯರು …

Read More »

ಅತಿವೃಷ್ಟಿ ಹಾನಿ ಪರಿಶೀಲನೆ- 24 ಗಂಟೆಗಳಲ್ಲಿ ಪರಿಹಾರ ವಿತರಣೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಳೆಯ ನಡುವೆಯೂ ನಗರದ ವಿವಿಧ ಪ್ರದೇಶಗಳಲ್ಲಿ ಮಿಂಚಿನ ಸಂಚಾರ ಕೈಗೊಂಡು ಹಾನಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ನೀರು ನುಗ್ಗಿದ ಮನೆಗಳಿಗೆ 24 ಗಂಟೆಗಳಲ್ಲಿ ತಲಾ ಹತ್ತು ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು. ಯಳ್ಳೂರ ರಸ್ತೆಯ ಕೇಶವ ನಗರ, ಭಾರತ ನಗರ, ಅನಗೋಳದ ರಘುನಾಥ ಪೇಟ ಮತ್ತಿತರ ಕಡೆಗಳಲ್ಲಿ ಸಂಚರಿಸಿದ ಅವರು, ಯಾವುದೇ ಕಾರಕ್ಕೂ …

Read More »

*ಗೋಕಾಕ ಆರ್ ಟಿಓ ಕಛೇರಿ ಹತ್ತಿರ ಭೀಕರ ಅಪಘಾತ, ವೃದ್ಧ ಮಹಿಳೆ ಸ್ಥಳದಲ್ಲೇ ಸಾವು*

ಗೋಕಾಕ: ಆರ್ ಟಿಓ ಕಚೇರಿ ಎದುರಿನ ರಸ್ತೆಯ ಬಳಿ ಅಪಘಾತ ಸಂಭವಿಸಿದ್ದು 65 ವರ್ಷದ ವೃದ್ಧ ಮಹಿಳೆ ಮೃತಪಟ್ಟ ಘಟನೆ ನಡೆದಿದೆ .ಮೃತಪಟ್ಟ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಿಲ್ಲ . ವೃದ್ಧ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕರೆ ಗೋಕಾಕ ಶಹರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಗೋಕಾಕ ಪೊಲೀಸರು ಕೋರಿದ್ದಾರೆ .

Read More »

*ಜೂಜಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆದ ಪೊಲೀಸರು: ಬಂಧಿತರಿoದ 1 ಲಕ್ಷ 85 ಸಾವಿರ ಹಣ 11 ಮೊಬೈಲ್ 8 ಬೈಕ್ ವಶ*

ಗೋಕಾಕ : ಗ್ರಾಮೀಣ ಪೊಲೀಸ್ ಠಾಣಾ ಸರಹದ್ದಿನ ಕೊಣ್ಣೂರು ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟವಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆಯುವಲ್ಲಿ ಜಿಲ್ಲಾ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯ ಕೊಣ್ಣೂರು ಗ್ರಾಮದಲ್ಲಿ ಸಾರ್ವಜನಿಕವಾಗಿ ಇಸ್ಪೀಟ್ ಅಂದರ್ ಬಾಹರ್ ಜೂಜಾಟವಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆಯುವಲ್ಲಿ ಬೆಳಗಾವಿಯ ಅಪರಾಧ ವಿಭಾಗ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಸಿಇಎನ್ ಅಪರಾಧ ಠಾಣೆಯ …

Read More »

ಪತ್ತೆಯಾಗದ ಚಿರತೆ; ಭಯದಲ್ಲಿ ಹೊರಗೆ ಬಾರದ ಜನ!

ಬೆಳಗಾವಿ: ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ನುಗ್ಗಿದ ಚಿರತೆ 24 ತಾಸುಗಳ ನಂತರವೂ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ನಿರಂತರ ಶೋಧ ನಡೆಸಿದ್ದಾರೆ.   ಇನ್ನೊಂದೆಡೆ, ಚಿರತೆ ಭಯದಿಂದಾಗಿ ಈ ಪ್ರದೇಶದಲ್ಲಿ ಜನರು ಮನೆಯಿಂದ ಹೊರಬಂದಿಲ್ಲ.ಪ್ರತಿ ದಿನ ವಾಯು ವಿಹಾರಿಗಳಿಂದ ತುಂಬಿರುತ್ತಿದ್ದ ಇಲ್ಲಿನ ಜಾಧವ ನಗರ, ಹನುಮಾನ್ ನಗರ, ಸಹ್ಯಾದ್ರಿ ನಗರ, ಟಿ.ವಿ ಸೆಂಟರ್ ಮುಂತಾದ ಪ್ರದೇಶದ ರಸ್ತೆಗಳು ಶನಿವಾರ ಬೆಳಿಗ್ಗೆ ಬಿಕೋ ಎನ್ನುತ್ತಿದ್ದವು. …

Read More »

ಶ್ರೀ ಸಾಯಿ ಸಮರ್ಥ ಫೌಂಡೇಶನ್ ಕಾರ್ಯ ಶ್ಲಾಘನೀಯ: ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ಗೋಕಾಕ: ಪ್ರಾಚೀನ ಭಾರತ ಕರ್ಮಭೂಮಿಯಾಗಿದ್ದು, ಉತ್ತಮ ಸಂಸ್ಕಾರದಿಂದಾಗಿ ಇಡೀ ಜಗತ್ತಿನಾದ್ಯಂತ ಖ್ಯಾತಿ ಪಡೆದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವಿಭಾಗೀಯ ಸಂಚಾಲಕ ಎಂ ಡಿ ಚುನಮರಿ ಹೇಳಿದರು. ಶುಕ್ರವಾರದಂದು ನಗರದ ರೋಟರಿ ರಕ್ತ ಭಂಡಾರದ ಸಭಾಂಗಣದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್ ಗೋಕಾಕ ಇದರ 2ನೇ ವಾರ್ಷಿಕೋತ್ಸವ ನಿಮಿತ್ಯ ಕಂಪ್ಯೂಟರ್ ತರಬೇತಿ ಕೇಂದ್ರದ ಉದ್ಘಾಟನೆ ಮತ್ತು ನೇತ್ರ ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ರಕ್ತದಾನ ಮಾಡಿದವರಿಗೆ ನಡೆದ ಸತ್ಕಾರ ಸಮಾರಂಭದಲ್ಲಿ …

Read More »

ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ ಅಂಬೇಡ್ಕರ್ ನಗರದಲ್ಲಿ ಘಟನೆ!

ಗೋಕಾಕ ಅ 5 : ಮನೆಯಿಂದ ಶೌಚಾಲಯಕ್ಕೆ ತೆರಳುತ್ತಿರುವ ಮಹಿಳೆಯ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ 21 ನೇ ವಾರ್ಡ್‍ನ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಅಬೇದಾ ಮುಸ್ತಫಾ ಕಲ್ಲೋಳಿ ಎಂಬ ಮಹಿಳೆ ಮಧ್ಯಾಹ್ನ ಶೌಚಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಬೀದಿ ನಾಯಿಯು ಮಹಿಳೆಯ ಕಾಲಿಗೆ ಕಚ್ಚಿ ಗಂಭೀರವಾಗಿ ಗಾಯಗೋಳಿಸಿದ್ದು, ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂಬೇಡ್ಕರ್ ನಗರ ಸೇರಿದಂತೆ …

Read More »

ಹೆಚ್ಚುತ್ತಿರುವ ಬೀದಿ ನಾಯಿಗಳ, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸುವಂತೆ ಕರವೇ ಆಗ್ರಹ!

ಗೋಕಾಕ ಅ 4 : ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸಿ ಜನನಿಬಿಡು ಪ್ರದೇಶಗಳಲ್ಲಿ ಮೂತ್ರಾಲಯಗಳನ್ನು ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹೋರಾಟ ನಡೆಸಿದರು.   ಗುರುವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ ಕರವೇ ಕಾರ್ಯಕರ್ತರು ನಗರಸಭೆಯ ಕಾರ್ಯವೈಖರಿಯನ್ನು ಖಂಡಿಸಿ , ಪೌರಾಯುಕ್ತರಿಗೆ ಮನವಿ ಅರ್ಪಿಸಿದರು.   ಕಳೆದ ಹಲವಾರು ತಿಂಗಳನಿಂದಲೂ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು …

Read More »

ಬಸವ ಪಂಚಮಿ: ರೋಗಿಗಳಿಗೆ ಹಾಲು ವಿತರಿಸಿದ ರಾಹುಲ್ ಜಾರಕಿಹೊಳಿ

ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಗಿದ್ದು, ಬೆಳಗಾವಿ, ಗೋಕಾಕ, ಘಟಪ್ರಭ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಯೂ ಬಸವ ಪಂಚಮಿ ನಿಮಿತ್ತ ಬಡ ಮಕ್ಕಳಿಗೆ, ರೋಗಿಗಳಿಗೆ ಹಾಲು ವಿತರಿಸಲಾಯಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಾಲು ವಿತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಕಳೆದ ನಾಲ್ಕು ವರ್ಷಗಳಿಂದ …

Read More »