Breaking News

ಬೆಳಗಾವಿ

ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ : ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ

ಗೋಕಾಕ ಮಾ 3 :ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದರು ಗುರುವಾರದಂದು ನಗರದ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಶೂನ್ಯ ಸಂಪಾದನ ಮಠದ ಲಿಂಗೈಕ್ಯ ಶ್ರೀ ಬಸವ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ಪ್ರಥಮ ದಿನದ ಬಸವ ಧರ್ಮ ಸಮಾವೇಶವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಆರೋಗ್ಯದ ಜತೆ ಓದಿಗೂ ಆಸಕ್ತಿ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ವ್ಯಾಯಾಮ ಶಾಲಾ ಉಪಕರಣಗಳ ವಿತರಣಾ ಸಮಾರಂಭ ಯಮಕನಮರಡಿ: ಆರೋಗ್ಯವೇ ಭಾಗ್ಯವಾಗಿದ್ದು, ಯುವಕರು ಆರೋಗ್ಯದ ಕಡೆ ಗಮನ ಹರಿಸಬೇಕು. ನಿಮಗೆ ಬೇಕಾದ ಎಲ್ಲಾ ರೀತಿಯ ವ್ಯಾಯಾಮ ಸಾಮಗ್ರಿ ನೀಡಲು ಬದ್ಧರಿದ್ದು, ಓದಿಗೂ ಆಸಕ್ತಿ ತೊರಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ಅಲದಾಳ ಗ್ರಾಮದಲ್ಲಿ ನಡೆದ ವ್ಯಾಯಾಮ ಶಾಲಾ ಉಪಕರಣಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಮತ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಶಾಸಕರ …

Read More »

ಸಚಿವ ಈಶ್ವರಪ್ಪ ಹೇಳಿಕೆಯಿಂದ ರಾಜ್ಯದಲ್ಲಿ ಸಮಸ್ಯೆ ಉದ್ಭವ: ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ

ಗೋಕಾಕ: ಸಚಿವ ಈಶ್ವರಪ್ಪ ಹೇಳಿಕೆಯಿಂದ ರಾಜ್ಯದಲ್ಲಿಸಮಸ್ಯೆ ಉದ್ಭವಿಸಿದ್ದು, ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್‌ ಕಚೇರಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್‌ ವಿವಾದ ಬಿಜೆಪಿ ಸೃಷ್ಟಿ ಮಾಡಿದ ವಿವಾದ, ಹಿಜಾಬ್‌ ನೂರಾರು ವರ್ಷಗಳಿಂದ ನಡೆಯುತ್ತಾ ಬಂದಿದ್ದು, ಮೊದಲು ಯಾವ ಕಷ್ಟಗಳು ಬಂದಿರಲಿಲ್ಲ. ಈಗ ಉದ್ದೇಶ ಪೂರ್ವಕವಾಗಿ ಬಿಜೆಪಿ ಮಾಡಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಸ್ವತಂತ್ರ್ಯ ನೀಡಿದ್ದು, ಅವರ ಪಾಡಿಗೆ …

Read More »

ಛತ್ರಪತಿ ಶಿವಾಜಿ ಮಹಾರಾಜರು ಅತ್ಯಂತ ಧೈರ್ಯಶಾಲಿ ಸಾಮ್ರಾಟರಾಗಿದ್ದರು : ಅಮರನಾಥ ಜಾರಕಿಹೊಳಿ

ಗೋಕಾಕ: ಛತ್ರಪತಿ ಶಿವಾಜಿ ಮಹಾರಾಜರು ಅತ್ಯಂತ ಧೈರ್ಯಶಾಲಿ ಸಾಮ್ರಾಟರಾಗಿದ್ದು, ಭಾರತದಾಧ್ಯಂತ ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದ ಕೀರ್ತಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ನಗರದ ಮರಾಠಾ ಗಲ್ಲಿಯಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಆಡಳಿತದಲ್ಲಿ ಹಿಂದುಗಳಷ್ಟೇ ಮುಸ್ಲಿಂರು ಸಹ ಸಂಪೂರ್ಣ ಧಾರ್ಮಿಕ ಸ್ವಾತಂತ್ರವನ್ನು ಹೊಂದಿದ್ದರು. …

Read More »

ಸತೀಶ ಜಾರಕಿಹೊಳಿ ಪೌಂಡೇಶನ್‌ ದಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್‌ ಜಾರಕಿಹೊಳಿ  ಬಡ ವಿದ್ಯಾರ್ಥಿಗಳ ಶಿಕ್ಷಣ, ಕ್ರೀಡೆಗೆ ವಿಶೇಷ ಒತ್ತು ನೀಡಿದ್ದಾರೆ. ಈ ನಿಟ್ಟಿನಲ್ಲಿ ಬಡವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸತೀಶ್‌ ಜಾರಕಿಹೊಳಿ ಪೌಂಡೇಶನ್‌ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ನೀಡುವ  ಮಹತ್ವದ  ಕಾರ್ಯವನ್ನು ಹಮ್ಮಿಕೊಂಡಿದ್ದಾರೆ. ದ್ವೀತಿಯ ಪಿಯುಸಿ ತೇರ್ಗಡೆಯಾಗಿ ಸೈನಿಕರಾಗಿ ದೇಶಸೇವೆ  ಮತ್ತು  ಪೊಲೀಸ್‌  ಇಲಾಖೆಗೆ ಸೇರಿ ರಾಜ್ಯದಲ್ಲಿ ಸೇವೆ ಸಲ್ಲಿಸಬೇಕು ಎನ್ನುವವರಿಗೆ ಈ ತರಬೇತಿ ನೀಡಲಾಗುತ್ತಿದೆ. ತರಬೇತಿ ಅವಧಿಯಲ್ಲಿ ಲಿಖಿತ  …

Read More »

ಹೆಬ್ಬಾಳ ಜಿಪಂ. ವ್ಯಾಪ್ತಿಯ ಹಲವು ಗ್ರಾಮಗಳ ವಿವಿಧ ಕಾಮಗಾರಿಗೆ ಸತೀಶ್‌ ಜಾರಕಿಹೊಳಿ ಚಾಲನೆ

ಬೆಳಗಾವಿ : ಹೆಬ್ಬಾಳ ಜಿಲ್ಲಾ ಪಂಚಾಯ್ತಿ  ವ್ಯಾಪ್ತಿಯ ಅರ್ಜುನವಾಡ, ಕುರಣಿವಾಡಿ, ಹಂಚನಾಳ ಸೇರಿದಂತೆ ಹಲವು ಗ್ರಾಮಗಳ ವಿವಿಧ ಕಾಮಗಾರಿ ಹಾಗೂ ನೂತನ ಕಟ್ಟಡಗಳ ಉದ್ಘಾಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಸೋಮವಾರ  ನೆರವೇರಿಸಿದರು. ಅರ್ಜುನವಾಡ ಗ್ರಾಮದಲ್ಲಿ ಶಾಸಕರ ಅನುದಾನದಡಿಯಲ್ಲಿ ನಿರ್ಮಾಣಗೊಂಡ ಸಮುದಾಯ ಭವನ, ಅಂಗನವಾಡಿ ನೂತನ ಕಟ್ಟಡ ಉದ್ಘಾಟಿಸಿದರು. ಬಳಿಕ ಹುಕ್ಕೇರಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ತದನಂತರ ಅಂಬೇಡ್ಕರ್‌ ಸಮುದಾಯ ಭವನಕ್ಕೆ ಕುರ್ಚಿ, ಸೌಂಡ್‌ ಸಿಸ್ಟಮ್‌ ವಿತರಿಸಿದರು. …

Read More »

ಜೋಡೆತ್ತುಗಳ ಪ್ರದರ್ಶನಕ್ಕೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ

ಗೋಕಾಕ : ತಾಲ್ಲೂಕಿನ ಬೆನಚಿನಮರಡಿ ಗ್ರಾಮದಲ್ಲಿ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸದ ಅಂಗವಾಗಿ ಏರ್ಪಡಿಸಿದ ಜೋಡು ಎತ್ತುಗಳ ಪ್ರದರ್ಶನಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಸೋಮವಾರ ಚಾಲನೆ ನೀಡಿದರು. ತಾಲ್ಲೂಕಿನ ಸುತ್ತಮುತ್ತಲಿನ  ಗ್ರಾಮದ ರೈತರು ಪ್ರದರ್ಶನಕ್ಕೆ ತಂದಿರುವ ಎತ್ತುಗಳನ್ನು ಯುವ ನಾಯಕ ರಾಹುಲ್‌ ಜಾರಕಿಹೊಳಿ ವೀಕ್ಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ರೈತರು ಎತ್ತುಗಳನ್ನು ದೇವರು ರೂಪದಲ್ಲಿ ಪೂಜಿಸುತ್ತಾರೆ. ಅವುಗಳನ್ನು ತಮ್ಮ ಮಕ್ಕಳ ರೀತಿಯಲ್ಲಿ ಸಾಕಿದ್ದಾರೆ ಎಂದರು. ರೈತರು ತಮ್ಮ ಎತ್ತುಗಳನ್ನು …

Read More »

ಶೈಕ್ಷಣಿಕ ಅಭಿವೃದ್ಧಿಗೆ ಜೀವನವನ್ನೇ ಮುಡಿಪಾಗಿಟ್ಟ ಅಕ್ಷರ ತಾಯಿ ಸಾವಿತ್ರಿ ಬಾಯಿ ಫುಲೆ: ವಿವೇಕ್ ಜತ್ತಿ

ಗೋಕಾಕ: ಭಾರತ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ,  ಅಕ್ಷರ ತಾಯಿ ಸಾವಿತ್ರಿ ಬಾಯಿ ಫುಲೆಯವರ  191 ನೇ ಜಯಂತಿಯನ್ನು ಇಂದು ಇಲ್ಲಿನ ಹಿಲ್‌ ಗಾರ್ಡನ್‌ ನಲ್ಲಿ  ಆಚರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಭಾವಚಿತ್ರಕ್ಕೆ  ಪುಷ್ಟ ಅರ್ಪಿಸಿ, ಗೌರವ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್‌ ಮುಂಖಡ   ವಿವೇಕ್ ಜತ್ತಿ ಮಾತನಾಡಿ,   ಆಗಿನ ಕಾಲದ ಸಾಮಾಜಿಕ, ಸಮಾನತೆ, ದೀನ ದಲಿತರ, ಹಿಂದುಳಿದವರ ಶೈಕ್ಷಣಿಕ ಅಭಿವೃದ್ಧಿಗೆ ತಮ್ಮ ಜೀವನವನ್ನೇ …

Read More »

ನೂತನ ವಿಧಾನ ಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ ಮನೆಗೆ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಭೇಟಿ

ಗೋಕಾಕ :  ನೂತನ ವಿಧಾನಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ ನಿವಾಸಕ್ಕೆ ಹರಿಹರ ತಾಲ್ಲೂಕಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಭಾನುವಾರ ಭೇಟಿ ನೀಡಿ, ಸತ್ಕರಿಸಿ ಆಶೀರ್ವಾದ ಮಾಡಿದರು. ಸಣ್ಣ ವಯಸ್ಸಿನಲ್ಲಿಯೇ ವಿಧಾನಪರಿಷತ್‌ ಪ್ರವೇಶ ಮಾಡಿರುವುದು ಸಂತಸದ ವಿಷಯ. ಬಡವರ ಪರ ಕೆಲಸ ಮಾಡುವ ಅವಕಾಶ ದೊರೆತು ಬಂದಿದೆ. ಜನರು ತಮ್ಮ ಮೇಲೆ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದಾರೆ, ಬಡ ಜನರ ಪರ ಕೆಲಸ ಮಾಡುವಂತೆ ಸಲಹೆ ಸ್ವಾಮೀಜಿ ನೀಡಿದರು. ಎಲ್ಲ …

Read More »

ಕೇವಲ ತುರ್ತು ಸಂದರ್ಭದಲ್ಲಿ ಅಲ್ಲದೆ ಜೀವನದ ಪ್ರತಿ ಹಂತದಲ್ಲೂ ಮಾನವೀಯ ಗುಣಗಳನ್ನು ಅಳವಡಿಕೊಳ್ಳಿ: ಬಸವರಾಜ ಜವರಗಿ.

*ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯ ವತಿಯಿಂದ ಅಲೆಮಾರಿ ಜನಾಂಗದ ಬಡ ಜನರಿಗೆ ಬಟ್ಟೆ ವಿತರಣೆ* ಗೋಕಾಕ: ನಗರದ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯ ವತಿಯಿಂದ ಅಲೆಮಾರಿ ಜನಾಂಗದ ಬಡ ಜನರಿಗೆ ಬಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕೇವಲ ತುರ್ತು ಸಂದರ್ಭದಲ್ಲಿ ಅಲ್ಲದೆ ಜೀವನದ ಪ್ರತಿ ಹಂತದಲ್ಲೂ ಮಾನವೀಯ ಗುಣಗಳನ್ನು ಅಳವಡಿಕೊಳ್ಳುವುದು ಒಳಿತು. ಈ ಮೂಲಕ ಉತ್ತಮ ಉದಾತ್ತಾ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಎಂದು ಸಂಸ್ಥೆಯ ನಿರ್ದೇಶಕರಾದ …

Read More »