ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ದ್ವಾರದ ಬಳಿಯ ಧ್ವಜಸ್ತಂಭದಲ್ಲಿದ್ದ ಹಳೆಯದಾಗಿದ್ದ ಕನ್ನಡ ಬಾವುಟವನ್ನು ಬದಲಿಸಿ, ಹೊಸದನ್ನು ಮಂಗಳವಾರ ಹಾಕಲಾಗಿದೆ. ಇದರೊಂದಿಗೆ ಕನ್ನಡ ಹೋರಾಟಗಾರರ ಒತ್ತಾಯಕ್ಕೆ ಮನ್ನಣೆ ಸಿಕ್ಕಂತಾಗಿದೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ಧ್ವಜ ರಾರಾಜಿಸುತ್ತಿದೆ. ಹಳೆಯ ಬಾವುಟವನ್ನು ಬದಲಿಸಿ ಹೊಸದಾಗಿ ಧ್ವಜಾರೋಹಣಕ್ಕೆ ಮುಂದಾಗಿದ್ದ ಹಲವು ಜನ ಕನ್ನಡ ಹೋರಾಟಗಾರರನ್ನು ಜು.5ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಧ್ವಜವನ್ನು ಕನ್ನಡ ಹೋರಾಟಗಾರರೇ ಕಳೆದ ವರ್ಷ ಡಿ.28ರಂದು ಸ್ಥಾಪಿಸಿದ್ದರು. ಬಾವುಟದ ಬಣ್ಣ ಮಾಸಿ …
Read More »ಸಾರಿಗೆ ಸಚಿವರೇ ನಿಮ್ಮ ತವರು ಜಿಲ್ಲೆಯಲ್ಲೇ ಹೊಂಡ-ಗುಂಡಿ ಕೆಸೆರು ಗದ್ದೆಯಂತಾಗಿದೆ ಬೆಳಗಾವಿ ಬಸ್ ನಿಲ್ದಾಣ.
ಬೆಳಗಾವಿ: ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ನಿಲ್ದಾಣದ ಮರು ನಿರ್ಮಾಣ ಕಾಮಗಾರಿಯು ಕುಂಟುತ್ತಾ ಸಾಗಿರುವುದು ಪ್ರಯಾಣಿಕರಿಗೆ ಶಾಪವಾಗಿ ಪರಿಣಮಿಸಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳನ್ನು ಸಂಪರ್ಕಿಸುವ ಬಸ್‌ಗಳ ಪ್ರಮುಖ ನಿಲ್ದಾಣ ಎಂಬ ಹೆಗ್ಗಳಿಕೆ ಗಳಿಸಿದ್ದು, ಸಿದ್ಧಗೊಳ್ಳುವುದು ಯಾವಾಗ ಎನ್ನುವ ಪ್ರಶ್ನೆ ಪ್ರಯಾಣಿಕರಿಂದ ಕೇಳಿಬರುತ್ತಿದೆ. ಸದ್ಯ ಮಳೆಗಾಲವಾದ್ದರಿಂದ ಆವರಣವೆಲ್ಲವೂ ಕೆಸೆರು ಗದ್ದೆಯಂತಾಗಿದೆ. ಹೊಂಡ-ಗುಂಡಿಯೊಳಗೆ ಸರ್ಕಸ್ ಮಾಡಿಕೊಂಡು ಸಾಗಬೇಕಾದ ಪರಿಸ್ಥಿತಿ ಇದೆ. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ …
Read More »ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ: ಶಾಸಕ ಅನಿಲ ಬೆನಕೆ
ಬೆಳಗಾವಿ: ‘ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಅಧಿಕಾರಿಗಳು ಆದ್ಯತೆ ನೀಡುತ್ತಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೇಳಿದರು. ನಗರದ ಸುರೇಶ ಯಾದವ ಪ್ರತಿಷ್ಠಾನದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿಗೆ ವಿತರಿಸಲು ನೀಡಲಾದ 13ಸಾವಿರ ಮಾಸ್ಕ್‌ಗಳನ್ನು ಡಿಡಿಪಿಐ ಎ.ಬಿ. ಪುಂಡಲೀಕ ಅವರಿಗೆ ಬುಧವಾರ ಹಸ್ತಾಂತರಿಸಿ ಅವರು ಮಾತನಾಡಿದರು. ‘ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ …
Read More »ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸುವಂತೆ ಮುಖ್ಯಮಂತ್ರಿ ಗಳಿಗೆ ಹೊರಟ್ಟಿ ಒತ್ತಾಯ.
ಬೆಳಗಾವಿ: ಈ ಬಾರಿಯ ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಈ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ಅಧಿವೇಶನ ನಡೆಯಬೇಕೆಂದು 15 ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಜೊತೆದೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆಯನ್ನೂ ನಡೆಸಿದ್ದೇನೆಂದು ಹೇಳಿದ್ದಾರೆ. 2018ರ …
Read More »ವೀರ ಯೋಧನ ಅಂತಿಮ ದರ್ಶನ ಪಡೆದ ಗಣ್ಯರು!
ಗೋಕಾಕ: ನಾಗಾಲ್ಯಾಂಡನ ಗಡಿ ಪ್ರದೇಶದಲ್ಲಿ ಅಪಘಾತದಲ್ಲಿ ಮೃತರಾದ ವೀರ ಯೋಧನ ಮಂಜುನಾಥ ಗೌಡಣ್ಣವರ ಅಂತ್ಯಕ್ರಿಯೆ ಶಿವಾಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜರುಗಿತು. ಮಂಗಳವಾರದಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಪಾರ್ಥಿವ ಶರೀರವನ್ನು ತರಲಾಯಿತು. ಯೋಧನ ಪಾರ್ಥಿವ ಶರೀರವನ್ನು ಕೆಲವು ಸಮಯ ಶಿವಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಯಿತು. ನಂತರ ಗ್ರಾಮದಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಲಾಯಿತು. ಸಂಸದೆ ಮಂಗಲಾ ಅಂಗಡಿ, …
Read More »ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ.
ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಟ್ರಾö್ಯಕ್ಟರ್ ಮಾಲೀಕರು ಹಾಗೂ ಮಕ್ತೆದಾರರ …
Read More »ಒಂದೂವರೆ ಕಿ.ಮೀ. ಹೆಚ್ಚಾಗುತ್ತದೆಂದು ಹಿಂದೇಟು, “ಮೃತ್ಯುಕೂಪ” ರಸ್ತೆಯಲ್ಲಿ ಪ್ರಯಾಣ.
ರಾಮದುರ್ಗ (ಬೆಳಗಾವಿ ಜಿಲ್ಲೆ): ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ವಾಹನಗಳು ಅಪಾಯಕಾರಿಯಾದ ರಸ್ತೆಯಲ್ಲೇ ಸಂಚರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ‘ಮೃತ್ಯುಕೂಪ’ ಎಂದೇ ಅಪಖ್ಯಾತಿ ಹೊಂದಿದ್ದ ಇಲ್ಲಿನ ಮುಳ್ಳೂರು ಘಾಟ್‌ನಲ್ಲಿ ವಾಹನಗಳಲ್ಲಿ ಹೋಗುವವರು ಕೈಯಲ್ಲಿ ಜೀವ ಹಿಡಿದುಕೊಂಡೆ ಪ್ರಯಾಣಿಸಬೇಕಿತ್ತು. ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಪಘಾತಗಳಾಗಿ ಸಾವು-ನೋವು ಸಂಭವಿಸಿರುವ ಘಾಟ್ ಸುಧಾರಣೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಹೊಸ ಮಾರ್ಗ ನಿರ್ಮಿಸುವಂತೆ ಬೇಡಿಕೆ ಇತ್ತು. ಹಿಂದಿನ ಶಾಸಕ ಅಶೋಕ ಪಟ್ಟಣ ಅವರ ಪ್ರಯತ್ನದಿಂದ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ …
Read More »ಹಣ, ಎಟಿಎಂ ಕಾರ್ಡ್ ದೋಚಿದ್ದ ಇಬ್ಬರು ಕದೀಮರನ್ನ ಬಂಧಿಸಿದ ಬೆಳಗಾವಿ ಪೋಲಿಸ್
ಬೆಳಗಾವಿ: ಇಲ್ಲಿಯ ನ್ಯೂ ಗಾಂಧಿ ನಗರ ಬಳಿ ಬೈಪಾಸ್ ರಸ್ತೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯನ್ನು ಹಿಡಿದು ಹಲ್ಲೆ ಮಾಡಿ ಜೇಬಿನಲ್ಲಿದ್ದ ನಗದು ಹಣ, ಎಟಿಎಂ ಕಾರ್ಡ್ ಹಾಗೂ ಕೈಗಡಿಯಾರ ದೋಚಿದ್ದ ಇಬ್ಬರು ಕದೀಮರನ್ನು ಕೇವಲ ಎರಡೇ ದಿನದಲ್ಲಿ ಪೊಲೀಸರು ಬಂಧಿ ಸಿದ್ದಾರೆ. ನ್ಯೂ ಗಾಂಧಿ ನಗರದ ಆದಿಲ್ ಶಾ ಗಲ್ಲಿಯ ಫರ್ವೇಜ್ ಜಮೀರ ಪಾರಿಶವಾಡಿ ಹಾಗೂ ನ್ಯೂ ಗಾಂ ಧಿ ನಗರದ ಖುದಾದಾದ ಗಲ್ಲಿಯ ಜುಬೇರ್ ಅಬ್ದುಲ್‌ರಸೀದ ದಾಲಾಯತ್ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ನಗದು ಹಣ …
Read More »ಅಂಗನವಾಡಿ ಕೇಂದ್ರಕ್ಕೆ ಕುರ್ಚಿ, ಟೇಬಲ್, ಆಟದ ಸಾಮಗ್ರಿಗಳನ್ನು ಸತೀಶ್ ಜಾರಕಿಹೊಳಿ ವಿತರಣೆ
ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಹೊನಗಾ ಗ್ರಾಮದಲ್ಲಿ ರವಿವಾರ ಸಂಜೆ ವಿವಿಧ ಕಾಮಗಾರಿಗೆ ಚಾಲನೆ ನೀಡಿದರು. ನರೇಗಾ ಯೋಜನೆಯಡಿ 28.60 ಲಕ್ಷ ರೂ. ವೆಚ್ಚದಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. 13.76 ಲಕ್ಷ ರೂ. ಯೋಜನೆಯಡಿ ಎನ್.ಆರ್. ಎಲ್.ಎಮ್. (ನ್ಯಾಷನಲ್ ರೂರಲ್ ಲೈವ್ಲಿ ಹುಡ್ ಮಿಷನ್) ಕೇಂದ್ರದ ಕಾಮಗಾರಿಗೆ ಚಾಲನೆ ನೀಡಿದರು. 14 ನೇ ಹಣಕಾಸು ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ …
Read More »ಬೆಳಗಾವಿಯ ವಿವಿಧ ಪ್ರವಾಸಿ ತಾಣಗಳಿಗೆ ವಿಶೇಷ ಬಸ್ ಗಳ ಸೌಲಭ್ಯ!
ಬೆಳಗಾವಿ:ಉತ್ತರ ಕರ್ನಾಟಕ ಭಾಗದ ಕಾಶ್ಮೀರ ಎಂದು ಕರೆಸಿಕೊಳ್ಳುವ ಕುಂದಾನಗರಿ ಬೆಳಗಾವಿಯಲ್ಲಿ ಹಲವು ಪ್ರೇಕ್ಷಣೀಯ ಸ್ಥಳಗಳಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ NWKRTC ವಿಭಾಗ, ಪ್ರವಾಸಿಗರಿಗಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಮಳೆಗಾಲ ಬಂದರೆ ಸಾಕು ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಿಂದ ಪ್ರವಾಸಿಗರು ಬೆಳಗಾವಿಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಇದೀಗ ಲಾಕ್‌ಡೌನ್ ತೆರವಾಗಿದ್ದು, ಉತ್ತಮ ಮಳೆ ಕೂಡ ಆಗುತ್ತಿರುವುದರಿಂದ, ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಅಧಿಕವಾಗಿದೆ. ಪ್ರವಾಸಿ …
Read More »