ಬೆಳಗಾವಿ: ಬೆಳೆದ ಬೆಳೆಗೆ ರೋಗ ತಗುಲಿದ್ದು ಯುವ ರೈತ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ದಾಳಿಂಬೆ ತೋಟವನ್ನು ನಾಶಪಡಿಸಿರುವ ಘಟನೆ ಅಥಣಿ ತಾಲೂಕಿನ ಆಜೂರ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಜೂರ ಗ್ರಾಮದ ರೈತ ನವನಾಥ ಮಾನೆ ಎಂಬುವವರು ಸುಮಾರು 6 ವರ್ಷಗಳಿಂದ ಬೆಳೆಸುತ್ತಾ ಬಂದಿದ್ದ ದಾಳಿಂಬೆ ತೋಟವನ್ನು ತಾವೆ ಸ್ವತಃ ನಾಶ ಮಾಡಿದ್ದಾರೆ. ಪ್ರತಿ ವರ್ಷ ಸುಮಾರು 4-5 ಲಕ್ಷದವರೆಗೆ ದಾಳಿಂಬೆ ತೋಟದ ನಿರ್ವಹಣೆಗೆ ಖರ್ಚು ಮಾಡಿರುವ …
Read More »ಕೃಷ್ಣಾ ನದಿ ಪಾತ್ರದ ಜನರಿಗೆ ಮಳೆ ಭೀತಿ; ಡಂಗುರ ಸಾರಿ ಎಚ್ಚರಿಕೆ!
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ. ಜುಲೈ 9ರಿಂದ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ನದಿ ಪಾತ್ರದ ಜುಗುಳ, ಮಂಗಾವತಿ, ಶಹಾಪೂರ ಕುಸನಾಳ, ಮೊಳವಾಡ, ಉಗಾರ್ ಕೆಎಚ್, ಬಣಜವಾಡ ಹಾಗೂ ಕಿತ್ತೂರ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ …
Read More »ಆನ್‌ಲೈನ್ ಕ್ಲಾಸ್‌ಗಾಗಿ ನೆಟ್‌ವರ್ಕ್ ಸಿಗದೆ ವಿದ್ಯಾರ್ಥಿಗಳು ಪರದಾಟ: ಸರಕಾರದ ವಿರುದ್ಧ ಡಾ.ಅಂಜಲಿ ನಿಂಬಾಳ್ಕರ್ ಆಕ್ರೋಶ .
ಬೆಳಗಾವಿ: ಆನ್‌ಲೈನ್ ಕ್ಲಾಸ್‌ಗಾಗಿ ನೆಟ್‌ವರ್ಕ್ ಸಿಗದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಡಂಚಿನ ಗ್ರಾಮದ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಅಲ್ಲದೆ ಖಾನಾಪುರ ತಾಲೂಕಿನ ಮಾನ್, ಸಡಾ, ಪಾರವಾಡ, ಚಿಗುಲೆ ಗ್ರಾಮದ ಮಕ್ಕಳು ನೆರೆಯ ಮಹಾರಾಷ್ಟ್ರದ ಮೊಬೈಲ್ ನೆಟ್ವರ್ಕ್‌ಗಾಗಿ ಗುಡ್ಡ ಹತ್ತುತ್ತಿದ್ದಾರೆ. ಆದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆ ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೇಲ್ಡ್ ಗವರ್ನನ್ಸ್, ಫೇಲ್ಡ್ …
Read More »ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ!
ಗೋಕಾಕ : ಹುಕ್ಕೇರಿ ತಾಲ್ಲೂಕಿನ ಹಂಚಿನಾಳ ಗ್ರಾಮದ ಬಿಜೆಪಿ ಹಿರಿಯ ಮುಖಂಡರು, ನೂರಾರು ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷ ಸೇರಿದರು. ಪಟ್ಟಣದ ಹಿಲ್ ಗಾರ್ಡನ್ ನಲ್ಲಿ ಕಚೇರಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೂವಿನ ಹಾರ ಹಾಕುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು, 2023ರ ವಿಧಾನಸಭೆ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು. …
Read More »ಗೋಕಾಕ ತಾಲೂಕಿನ ಯೋಧ ವೀರಮರಣ!
ಗೋಕಾಕ- ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಯೋಧನೊಬ್ಬ ವೀರಮರಣ ಹೊಂದಿದ ಘಟನೆ ನಡೆದಿದೆ. ಗೋಕಾಕ ತಾಲ್ಲೂಕಿನ ಶಿವಾಪುರ ,ಕೊಣ್ಣೂರ ಗ್ರಾಮದ *ಮಂಜುನಾಥ ಗೌಡಪ್ಪಣ್ಣವರ (38) ಎಂಬುವರು ನಾಗಾಲ್ಯಾಂಡ ಗಡಿಯಲ್ಲಿ ಗಸ್ತು ತಿರುಗುವಾಗ ಅವರ ವಾಹನ ಅಪಘಾತಕ್ಕೀಡಾಗಿ ಮಂಜುನಾಥ ವೀರಮರಣ ಹೊಂದಿದ್ದಾರೆ. 18 ವರ್ಷಗಳಿಂದ ಮದ್ರಾಸ ಎಂಜಿನಿಯರಿಂಗ್ ಗ್ರೂಪದಲ್ಲಿ ನೇಮಕಗೊಂಡು ನಾಗಲ್ಯಾಂಡ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಇವರು ಚಾಲಕನಿದ್ದು ತಮ್ಮ ಕರ್ತವ್ಯಕ್ಕೆ ಹೋಗುವಾಗ ಅರಣ್ಯದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. …
Read More »ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ನಿಂದ ಸೈಕಲ್ ಜಾಥಾ
ರಾಯಬಾಗ: ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ತಾಲೂಕಿನ ಕುಡಚಿ ವಿಧಾನಸಭಾ ಮತಕ್ಷೇತ್ರದ ಮುಗಳಖೋಡ ಪಟ್ಟಣದಲ್ಲಿ ಕಾಂಗ್ರೆಸ್ ವತಿಯಿಂದ ಇಂದು (ಶನಿವಾರ) ಸೈಕಲ್ ಜಾಥಾ ಜರುಗಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೈಕಲ್ ಜಾಥಾ ಗೆ ಚಾಲನೆ ನೀಡಿ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಪೆಟ್ರೋಲ್ ಬೆಲೆ 50 ಪೈಸೆ ಹೆಚ್ಚಳವಾದರೂ ಕೂಡ ಬಿಜೆಪಿ ನಾಯಕರು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತಿದ್ದರು. ಆದರೆ, ಇಂದು …
Read More »ಗೋಕಾಕ ಶೈಕ್ಷಣಿಕ ವಲಯಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರ ಕೊಡುಗೆ ಅಪಾರ : ಶಿಕ್ಷಣಾಧಿಕಾರಿ ಜಿ ಬಿ ಬಳಗಾರ
ಗೋಕಾಕ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಪತ್ರಗಳನ್ನು ಬರೆದು ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ಮಾಡಿದ್ದಲ್ಲದೇ ವಿದ್ಯಾರ್ಥಿಗಳಿಗೆ ಮಾಸ್ಕ ಹಾಗೂ ಸ್ಯಾನಿಟೈಸರ್ ವಿತರಿಸಿ ವಿದ್ಯಾರ್ಥಿಗಳು ಧೈರ್ಯದಿಂದ ಪರಿಕ್ಷೆ ಬರೆಯಲು ಪ್ರೇರಿಪಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ನಗರದ ಶಾಸಕರ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದ ಮಾಸ್ಕ ಹಾಗೂ ಸ್ಯಾನಿಟೈಸರ್‌ಗಳನ್ನು ಪಡೆದು ಮಾತನಾಡಿದರು. ಗೋಕಾಕ ಶೈಕ್ಷಣಿಕ ವಲಯಕ್ಕೆ …
Read More »ಯಾವುದೇ ಸಮಸ್ಯೆಯಿದ್ದರೂ ಜನರು ನೇರವಾಗಿ ನಮ್ಮನ್ನು ಭೇಟಿ ಮಾಡಬಹುದು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಮೂಡಲಗಿ: “ಜನರು ತಮ್ಮ ಯಾವುದೇ ಸಮಸ್ಯೆಯಿದ್ದರೂ ನೇರವಾಗಿ ನಮ್ಮನ್ನು ಭೇಟಿ ಮಾಡಬಹುದು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕುಂದುಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. “ಬೆಳಗಾವಿ ಲೋಕಸಭಾ ಚುನಾವಣೆಯ ನಂತರ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿಮ್ಮ ಸಹಕಾರಕ್ಕೆ ನಾವು ಸದಾ ಸಿದ್ಧರಿದ್ದೇವೆ” ಎಂದು …
Read More »ವಿದ್ಯುತ್ ಪೂರೈಕೆಯಲ್ಲಿನ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸಿ: ಶಾಸಕ ಸತೀಶ ಜಾರಕಿಹೊಳಿ ಸೂಚನೆ
ಹುಕ್ಕೇರಿ: ತಾಲೂಕಿನ ಯಮಕನಮರಡಿ ವಿಧಾನಸಭೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸಂಬಂಧಿತ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ಸತೀಶ ಜಾರಕಿಹೊಳಿ ಸೂಚಿಸಿದರು. ಪಟ್ಟಣದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಸಭಾಭವನದಲ್ಲಿ ಶುಕ್ರವಾರ ನಡೆದ ಗ್ರಾಹಕರು ಮತ್ತು ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾ ವಹಿಸಬೇಕು ಎಂದು ತಾಕೀತು ಮಾಡಿದರು. ಹೊಲಗದ್ದೆಗಳು, ಗ್ರಾಹಕರಿಗೆ …
Read More »ಪಶು ಕಟ್ಟಡ ನಿರ್ಮಾಣ ಕಾಮಗಾರಿಗೆ ಸತೀಶ ಜಾರಕಿಹೊಳಿ ಚಾಲನೆ
ಯಮಕನಮರಡಿ: ಯಮಕನಮರಡಿಯಲ್ಲಿ ಆರ್ ಆಯ್ ಡಿಎಪ್ ಯೋಜನೆ ಅಡಿಯಲ್ಲಿ 43 ಲಕ್ಷ ರೂ. ವೆಚ್ಚದಲ್ಲಿ ಪಶು ಕಟ್ಟಡ ನಿರ್ಮಾಣ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಗುರುವಾರ ಚಾಲನೆ ನೀಡಿದರು. ಈ ವೇಳೆ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಜಾನುವಾರುಗಳ ಪಾಲನೆ- ಪೋಷಣೆಗಾಗಿ ಯಮಕನಮರಡಿಯಲ್ಲಿ ಪಶು ಕಚೇರಿ ಅಗತ್ಯವಿದೆ. ಹೀಗಾಗಿ ಸುಸಜ್ಜಿತವಾದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಓಂಕಾರ ತುಬಚಿ, ಕಿರಣ್ ರಜಪೂತ್ ಹಾಗೂ …
Read More »