ಮೈಸೂರು : ಸ್ವಯಂಕೃತ ಅಪರಾಧಿಂದ ನೀವೂ ಜೈಲು ಪಾಲಾದ್ರಿ. ನಿಮ್ಮ ಕುಟುಂಬ ಮಾಡಿದ ತಪ್ಪಿಗೆ ಮುಖ್ಯಮಂತ್ರಿಯಾಗಿ ಜೈಲಿಗೆ ಹೋದ್ರಿ. ಇದಕ್ಕಾಗಿ ಬಿಜೆಪಿ ಪಕ್ಷ ನಿಮ್ಮನ್ನ 6 ವರ್ಷ ಉಚ್ಚಾಟನೆ ಮಾಡ್ತು. ಆ ವೇಳೆ ಕೆಜಿಪಿ ಪಕ್ಷ ಕಟ್ಟಿದ್ರಿ, ಈ ವೇಳೆ ಯಾರು ಬಂದ್ರು.? ಯಾವ ಮಠಾಧೀಶರು ನಿಮ್ಮ ಪರವಾಗಿ ನಿಂತ್ರು ಹೇಳಿ.? ಮಠಮಾನ್ಯಗಳು ಸಾಮಾಜಿಕ ಭಾಗವಾಗಬೇಕೆ ಹೊರತು, ಒಬ್ಬ ವ್ಯಕ್ತಿ, ಪಕ್ಷದ ಪರವಾಗಿ ನಿಲ್ಲಬಾರದು ಎಂಬುದಾಗಿ ಎಂ.ಎಲ್.ಸಿ ವಿಶ್ವನಾಥ್ ಮಠಾಧೀಶರ …
Read More »ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಮನೆಗಳು;ಪರಿಹಾರಕ್ಕೆ ಆಗ್ರಹ.
ಮದ್ದೂರು: ಕಲ್ಲು ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಮನೆಗಳಿಗೆ ಡಿಬಿಎಲ್ ಕಂಪನಿ ವಿರುದ್ಧ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಚಂದಹಳ್ಳಿದೊಡ್ಡಿ ಗ್ರಾಮಸ್ಥರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರೂಪಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಾಲೂಕು ಕಚೇರಿ ಬಳಿ ಜಮಾಯಿಸಿದ ಗ್ರಾಮದಮಹಿಳೆಯರು ತಾಲೂಕು ಆಡಳಿತ ಹಾಗೂ ದಿಲೀಪ್ ಬಿಲ್ಡ್ ಖಾನ್ ಕಂಪನಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಬೆಳೆ ಬೆಳೆಯಲು ಕಷ್ಟ: ಮೈಸೂರು, …
Read More »ಕೆಸರು ಗದ್ದೆಯಂತಿದ್ದ ರಸ್ತೆ ದಾಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು!
ಮೈಸೂರು: ಜುಲೈ 19ರಂದು ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿವೆ. ಗಣಿತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ಪರೀಕ್ಷೆ ಮುಗಿದಿದ್ದು, ಜುಲೈ 22 ರಂದು ಕನ್ನಡ, ಹಿಂದಿ, ಇಂಗ್ಲಿಷ್ ಸೇರಿದಂತೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಸದ್ಯ ನಿನ್ನೆ ನಡೆದ ಪರೀಕ್ಷೆ ವೇಳೆ ಆದ ಘಟನೆಯೊಂದು ಭಾರಿ ಸುದ್ದಿಯಾಗಿದೆ. ಶಿಕ್ಷಣ ಸಚಿವರು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ನಿನ್ನೆ ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿದೆ. ಆದರೆ …
Read More »ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿದೆ ಅಂತ ಹೇಳಿಯೇ ಇಲ್ಲ ಉಲ್ಟಾ ಹೊಡೆದ ಸಂಸದೆ ಸುಮಲತಾ!
ಮಂಡ್ಯ: ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿದೆ ಅಂತ ಹೇಳಿ, ಇದೀಗ ಆ ರೀತಿ ಹೇಳಿಯೇ ಇಲ್ಲ ಎಂದು ಸಂಸದೆ ಸುಮಲತಾ ಉಲ್ಟಾ ಹೊಡೆದಿದ್ದಾರೆ. ಮೈಸೂರು: ನಾನು ಕೆಆರ್ಎಸ್ ಬಿರುಕು ಬಿಟ್ಟಿದೆ ಅಂತ ನಾನು ಸಾರ್ವಜನಿಕವಾಗಿ ಅಥವಾ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿಲ್ಲ. ಬಿರುಕು ಬಿಟ್ಟಿದಿಯಾ ಅಂತ ದಿಶಾ ಸಭೆಯಲ್ಲಿ ಕೇಳಿದ್ದೇನೆ. ಗಣಿಗಾರಿಕೆಯಿಂದ ಕೆಆರ್ಎಸ್ ಬಿರುಕಾಗುತ್ತೆ ಎಂಬ ಆತಂಕ ನನಗೆ ಈಗಲೂ ಶೇ.500 ಇದೆ. ಇದನ್ನೇ ನಾನು ಸಭೆಯಲ್ಲಿ ಹೇಳಿದ್ದೇನೆ. ಆದರೆ ಅದನ್ನೇ …
Read More »ಬನ್ನೂರು ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ
ಮೈಸೂರು,ಡಿ.23: ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲೆಯ ಟಿ.ನರಸೀಪುರ ತಾಲೂಕು ಬನ್ನೂರು ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬನ್ನೂರು ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ 25 ಸಾವಿರ ರೂ. ಲಂಚ ಪಡೆಯುವ ವೇಳೆ ಮೈಸೂರಿನ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಬನ್ನೂರು ಪಟ್ಟಣದ ಕಾಮಗಾರಿ ಸಂಬಂಧ ಬಿಲ್ ಮಾಡಿಕೊಡಲು ಗುತ್ತಿಗೆದಾರರೊಬ್ಬರಿಗೆ 25 ಸಾವಿರ ರೂ. ಲಂಚ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರರು ಮೈಸೂರಿನ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. …
Read More »ಸೆಪ್ಟಂಬರ್ 21ರಿಂದ ಕೇವಲ ಶಾಲೆಗಳು ಮಾತ್ರ ತೆರೆಯಲಿದೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ
ಮೈಸೂರು: ಸೆಪ್ಟಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿದೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೆ. 30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು. ಕೇಂದ್ರದ ಗ್ರೀನ್ ಸಿಗ್ನಲ್ ಬರುವವರೆಗೂ ತರಗತಿಗಳ ಆರಂಭ ಇಲ್ಲ. ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಖಾಸಗಿ ಶಾಲೆ ಪಡೆಯಬೇಕು. ಒಂದು ವೇಳೆ ಸಮಸ್ಯೆ ಆದರೆ ಡಿಡಿಪಿಐ, ಬಿಇಒ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ …
Read More »ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ಎಸಿಬಿ: ಕೆಜಿಗಟ್ಟಲೆ ಚಿನ್ನಾಭರಣ ವಶ…..!
ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಖಚಿತ ಮಾಹಿತಿಯ ಆಧಾರದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ.ಅಧಿಕಾರಿಗಳು ಇಬ್ಬರು ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಾಏಕಿ ದಾಳಿ ನಡೆಸಿ 15 ಲಕ್ಷ ರೂ.ನಗದು ಮತ್ತು ಮೂರು ಕೆಜಿಯಷ್ಟು ಚಿನ್ನಾಭರಣ ವಶಪಡಿಸಿಕೊಂಡು, ದಾಖಲೆ ಪರಿಶೀಲನೆ ಕಾರ್ಯ ಮುಂದುವರಿಸಿದ್ದಾರೆ. ಬೆಂಗಳೂರು ಕೊಳಚೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಂಎಸ್ಎನ್ ರಾಜು ಅವರಿಗೆ ಸೇರಿದ ತುಮಕೂರಿನ ವಾಸದ ಮನೆ, ಬೆಂಗಳೂರು …
Read More »ವೈದ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಪ್ರಕರಣ ; ಜಿ.ಪಂ. ಸಿಇಒ ಪ್ರಶಾಂತ್ ಮಿಶ್ರಾ ವರ್ಗಾವಣೆ: ಜಿಲ್ಲಾಧಿಕಾರಿಗೆ ಹೆಚ್ಚುವರಿ ಹೊಣೆ
ಮೈಸೂರು: ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯಕ್ಕೆ, ಮೈಸೂರು ಜಿಲ್ಲಾಧಿಕಾರಿಯಾದ ಅಭಿರಾಮ್ ಜಿ ಶಂಕರ್ ಅವರಿಗೆ ಹೆಚ್ಚಿನ ಹೊಣೆಯನ್ನು ನೀಡಲಾಗಿದ್ದು ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಿಸಲಾಗಿದೆ. ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬರುತ್ತದ್ದಂತೆಯೇ, ಪ್ರಶಾಂತ್ ಕುಮಾರ್ …
Read More »