ಕನ್ನಡ ಚಲನಚಿತ್ರ ರಂಗದ ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ *ಶ್ರೀ ರಾಜನ್* ಅವರು ನಿಧನರಾದ ಸುದ್ದಿ ನನ್ನ ಮನಸ್ಸಿಗೆ ತೀವ್ರ ನೋವನ್ನು ಉಂಟುಮಾಡಿದೆ. ಅನೇಕ ಜನಪ್ರಿಯ ಕನ್ನಡ ಚಲನಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದಾಗಿ ಕನ್ನಡ ಚಲನಚಿತ್ರರಂಗವು ಅನಾಥವಾಗಿದೆ. ತಮ್ಮ ಸಹೋದರರಾಗಿದ್ದ ಮತ್ತೊಬ್ಬ ಪ್ರಖ್ಯಾತ ಸಂಗೀತ ನಿರ್ದೇಶಕ ಶ್ರೀ ನಾಗೇಂದ್ರ ಅವರೊಂದಿಗೆ *’ರಾಜನ್-ನಾಗೇಂದ್ರ’* ಹೆಸರಿನಲ್ಲಿ ಜಂಟಿಯಾಗಿ ನೂರಾರು ಕನ್ನಡ ಚಲನಚಿತ್ರಗಳಿಗೆ ಈ ಜೋಡಿ ಸಂಗೀತ ನಿರ್ದೇಶನ ಮಾಡಿದ್ದರು. ಕನ್ನಡ ಚಲನಚಿತ್ರ ರಸಿಕರು …
Read More »ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಲಂಚಾವತಾರ!
ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿಗೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಲ್ಲಿನ ಲಂಚಾವತರವನ್ನು ಬಯಲಿಗೆಳಿದ್ದಾರೆ. ಅದರಲ್ಲೂ ಪಾಲಿಕೆ ಆಯುಕ್ತೆ ತುಷಾರಮಣಿಯ ಆಪ್ತ ಸಹಾಯಕ ಮಲ್ಲಿಕಾರ್ಜುನ ತಮ್ಮ ಕಚೇರಿಯ ಜವಾನ ಭಾಷಾ ಮೂಲಕ ಲಂಚ ಪಡೆಯುತ್ತಿರುವಾಗ ದಾಳಿ ನಡೆಸಿ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. 50 ಸಾವಿರ ರುಪಾಯಿ ಲಂಚದ ಹಣದ ಸಮೇತ ಆರೋಪಿಗಳು ಸಿಕ್ಕಿ ಬಿದ್ದಿದ್ದು, ಫಾರಂ-2 ನೀಡಲು ತಿಂಗಳಗಟ್ಟಲೆ ಈ ನೌಕರರು ಸತಾಯಿಸುತ್ತಿದ್ದರಂತೆ. ಬಳ್ಳಾರಿ ನಗರದಲ್ಲಿನ …
Read More »ಮೂಡಲಗಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ: ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ
ಮೂಡಲಗಿ : ಅಂತು ಇಂತು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನ ಹಿಂದೂಳಿದ ವರ್ಗ(ಅ) ಉಪಾಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆಗೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ಪ್ರಕಟವಾಗಿದೆ. ರಾಜ್ಯದಲ್ಲಿ ಪುರಸಭೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪುರಸಭೆಗೆ ಆಯ್ಕೆಯಾದ 23 ಸ್ಥಾನಗಳಲ್ಲಿ ಆಡಳಿತರೊಢ ಬಿಜೆಪಿ ಪಕ್ಷವು ನಾಲ್ಕು ಪಕ್ಷೇತರ ಬೆಂಬಲದಿoದ 15 ಸ್ಥಾನಗಳಲ್ಲಿದೆ. ವಿರೋಧಿ ಜೆಡಿಎಸ್ ಪಕ್ಷದಲ್ಲಿ 8 ಸ್ಥಾನಗಳಿವೆ. ಉಪಾಧ್ಯಕ್ಷ ಸ್ಥಾನವು ಎಸ್.ಸಿ ಮಹಿಳೆಗೆ …
Read More »ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಎಂಟ್ರಿ ಕೊಡ್ತಾರಾ!
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿ ಆಗದಿದ್ದರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ. ಬಿಜೆಪಿಯಲ್ಲಿ ಆಕಾಂಕ್ಷೆಗಳ ದಂಡೆ ಇದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದಂತ ಪ್ರತಿಷ್ಠೆ ಹೊಂದಿರುವ ಕುಟುಂಬದವೆಂದರೆ ಅದು ಜಾರಕಿಹೊಳಿ ಕುಟುಂಬ.ಜಾರಕಿಹೊಳಿ ಕುಟುಂಬದವರ ತಾವು ಹಿಡಿದ ಹಠವನ್ನು ಸಾಧಿಸದೆ ಬಿಡದ ಕುಟುಂಬ ಎಂದು ಹೆಸರುವಾಸಿಯಾಗಿದೆ. ಕರ್ನಾಟಕದಲ್ಲಿ ರಾಜಕಾರಣದಲ್ಲಿ ಹಠವಾದಿ ಎಂದೇ ಖಾತ್ಯಿಯಾಗಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ …
Read More »ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ :ದಸರಾ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ .
ರಾಜ್ಯ ಸರ್ಕಾರ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ …
Read More »ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಮುಂದೆ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ: ಶಾಸಕ ಸತೀಶ ಜಾರಕಿಹೊಳಿ.
ಬೆಳಗಾವಿ: ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಕೂಡ ಮುಂದೆ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. https://www.facebook.com/269481180133745/posts/1110317432716778/?sfnsn=wiwspwa&d=w&vh=e ಖಾಸಗಿ ಮಾಧ್ಯಮದವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಸದ್ಯ ರಾಜಕೀಯ, ಸಾಮಾಜಿಕ ಹಾಗೂ ಉದ್ಯಮ ಮೂರು ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಅದೇ ರೀತಿ ನನ್ನ ಮಕ್ಕಳು ಕೂಡ ರಾಜಕೀಯ, ಸಾಮಾಜಿ ಮತ್ತು ಉದ್ಯಮ ಕ್ಷೇತ್ರದಲ್ಲಿ ಛಾಪು ಮೂಡಿಸಲಿದ್ದಾರೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ. ಪುತ್ರ, ಪುತ್ರಿ ಸದ್ಯ …
Read More »ಗೋಕಾಕ ನಗರದಲ್ಲಿ ಚನ್ನಬಸವೇಶ್ವರ ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟನೆ.
ಗೋಕಾಕ : ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡವನ್ನು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಶನಿವಾರದಂದು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು , ಸುಣಧೋಳಿಯ ಶಿವಾನಂದ ಮಹಾಸ್ವಾಮಿಗಳು , ಗಣ್ಯರಾದ ಮಲ್ಲಿಕಾರ್ಜುನ ಈಟಿ , ಎಂ.ಎಸ್. ವಾಲಿ , ಲೋಕಯ್ಯಾ ಹಿರೇಮಠ, ಬಸವರಾಜ ಹಿರೇಮಠ …
Read More »ಶಾಲೆ ಪ್ರಾರಂಭ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಾಲೆಗಳನ್ನು ಆರಂಭಿಸುವ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತ ದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ …
Read More »ಸತೀಶ ಶುಗರ್ಸ್ ಕಾರ್ಖಾನೆಯಿಂದ ರೈತರಿಗೆ ಎರಡನೇ ಕಂತಿನ ಹಣ ಘೋಷಣೆ!
ಬೆಳಗಾವಿ: ಕಳೆದ 2019-20ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರ ಖಾತೆಗೆ ಪ್ರಥಮ ಕಂತು 2500 ರೂ. ದಂತೆ ಸತೀಶ ಶುಗರ್ಸ ಕಾರ್ಖಾನೆಗೆ ಈಗಾಗಲೇ ಪಾವತಿಸಿದ್ದು, ಎರಡನೇ ಕಂತು ಪ್ರತಿ ಟನ್ 225 ರೂ. ನೀಡಲು ಘೋಷಣೆ ಮಾಡಲಾಗಿದೆ. ಈ ಎರಡನೇ ಕಂತನ್ನುಒಂದು ವಾರದ ಒಳಗಾಗಿ ಸಂಬಂಧಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು. 2019-20ರ ಹಂಗಾಮಿನ ಪ್ರತಿಟನ್ಕಬ್ಬಿನ ದರ ಒಟ್ಟು2725 ರೂ. ಪಾವತಿಸಿದಂತಾಗುವುದು.(ಕಬ್ಬುಕಟಾವು ಮತ್ತುಕಬ್ಬು ಸಾರಿಗೆದರವನ್ನು ಪ್ರತ್ಯೇಕವಾಗಿ ನೀಡಲಾಗಿದೆ). …
Read More »ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ!
ಬೆಂಗಳೂರು, ಅಕ್ಟೋಬರ್ 09: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
Read More »